ಬಿಹಾರ (ಸಹರ್ಸ) : ಜಿಲ್ಲೆಯ ಪತ್ರಘಾಟ್ ಒಪಿ ಪ್ರದೇಶದ ಕಬೈಲಾ ಗ್ರಾಮದಲ್ಲಿ ಯುವಕನನ್ನು, ಕಳ್ಳತನದ ಆರೋಪದ ಮೇಲೆ ಗ್ರಾಮಸ್ಥರು ಥಳಿಸಿದ್ದಾರೆ. ಈ ವೇಳೆ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಗ್ರಾಮಸ್ಥರು ಸುಧೀರ್ ಎಂಬ ಯುವಕನ ಮೇಲೆ ಸುಳ್ಳು ಆರೋಪ ಹೊರಿಸಿ ಥಳಿಸಿದ್ದಾರೆ. ಇದು ಅವರ ಸಾವಿಗೆ ಕಾರಣವಾಗಿದೆ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಆದರೆ, ಈ ಇಡೀ ಘಟನೆಗೆ ಸಂಬಂಧಿಸಿದಂತೆ, ಕಳ್ಳತನದ ಆರೋಪದ ಮೇಲೆ ಗ್ರಾಮದ ಜನರು ಯುವಕನನ್ನು ಥಳಿಸಿದ್ದಾರೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಬ್ರಿಜ್ಜಾನಂದನ್ ಮೆಹ್ತಾ ಹೇಳಿದ್ದಾರೆ.
ಪ್ರಕರಣದ ಅಪರಾಧಿಗಳ ವಿರುದ್ಧ ದೂರು ದಾಖಲಿಸಲಾಗಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿ ತನಿಖೆ ಆರಂಭಿಸಿದ್ದಾರೆ.