ಪಥನಮತಟ್ಟ( ಕೇರಳ): ಜಿಲ್ಲೆಯ ಕುಡ್ಡಪ್ಪನ ಚಿತ್ತಾರ್ ಪ್ರದೇಶದ ಬಾವಿಯಲ್ಲಿ ಯುವಕನೊಬ್ಬನ ಮೃತದೇಹ ಪತ್ತೆಯಾಗಿದೆ.
ಮೃತ ಯುವಕನನ್ನು ವರ್ಗೀಸ್ ಎಂದು ಗುರುತಿಸಲಾಗಿದೆ. ಕ್ಯಾಮರಾ ಒಡೆದು ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಿತ್ತಾರ್ ಅರಣ್ಯ ಇಲಾಖೆ ಕೇಂದ್ರ ಕಚೇರಿ ಬಳಿ ಪೊಲೀಸರು ಈತನನ್ನು ವಶಕ್ಕೆ ಪಡೆದಿದ್ದರು.
ಈ ವೇಳೆ ಈತ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಆಯ ತಪ್ಪಿ ಬಾವಿಗೆ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ.