ಸೂರತ್(ಗುಜರಾತ್): ಇಲ್ಲಿನ ರೈಲ್ವೆ ಟ್ರ್ಯಾಕ್ ಬಳಿಯ ಪೊದೆಯಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿ ಯುವತಿ ಪತ್ತೆಯಾಗಿದ್ದು, ಆಕೆಯ ಮೈತುಂಬ ಗಂಭೀರ ಗಾಯಗಳಾಗಿವೆ. ಸದ್ಯ ಆಕೆಯನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಂಗಾಪೂರ ಗ್ರಾಮದ ರೈಲ್ವೆ ಟ್ರ್ಯಾಕ್ ಬಳಿ ಇರುವ ಪೂದೆಯಲ್ಲಿ ಯುವತಿ ಪತ್ತೆಯಾಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಆದರೆ ಯುವತಿಯ ಗುರುತು ಇಲ್ಲಿಯವರೆಗೆ ಪತ್ತೆಯಾಗಿಲ್ಲ.
ರೈಲ್ವೆ ಸ್ಟೇಷನ್ ಮಾಸ್ಟರ್ ಗಂಗಾಧರ್ ರೈಲ್ವೆ ಪೋಲಿಸರಿಗೆ ಮಾಹಿತಿ ನೀಡಿದ್ದು, ತಕ್ಷಣವೇ ಸ್ಥಳಕ್ಕೆ ಬಂದ ಅವರು ಯುವತಿಯನ್ನ ಸಿವಿಲ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆಕೆಯ ಎಡಗಾಲು ಮತ್ತು ಬಲಗೈ ಜತೆಗೆ ಹಲ್ಲುಗಳು ಸಂಪೂರ್ಣವಾಗಿ ಮುರಿದಿವೆ. ಉದ್ದೇಶಪೂರ್ವಕವಾಗಿ ಆಕೆ ಗಾಯಗೊಂಡಿರುವ ಸಾಧ್ಯತೆ ಇದೆ. ಅಥವಾ ರೈಲ್ವೆ ಹಳಿಗೆ ಸಿಲುಕಿಕೊಂಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
ಯುವತಿಯ ಯಾರು ಎಂಬುದು ಇಲ್ಲಿಯವರೆಗೆ ಪತ್ತೆಯಾಗಿಲ್ಲ. ಆದರೆ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ರೈಲ್ವೆ ಹಳ್ಳಿ ಸುತ್ತಮುತ್ತಲಿನ ಗ್ರಾಮಗಳಿಗೆ ತೆರಳಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.