ಆಂಧ್ರಪ್ರದೇಶ: ಎಲ್ಲಾ ರಾಜ್ಯಗಳಿಗೂ ಒಂದೊಂದೇ ರಾಜಧಾನಿ ಇರುವುದು. ಆದರೆ ಆಂಧ್ರಪ್ರದೇಶ ರಾಜ್ಯದಲ್ಲಿ 3 ನಗರಗಳನ್ನು ರಾಜಧಾನಿಗಳನ್ನಾಗಿಸಲು ಮುಖ್ಯಮಂತ್ರಿ ವೈ.ಎಸ್.ಜಗನ್ಮೋಹನ್ ರೆಡ್ಡಿ ಚಿಂತನೆ ನಡೆಸಿದ್ದಾರೆ.
ರಾಜ್ಯದಲ್ಲಿ ವಿಶೇಷ ಅಧಿವೇಶನ ನಡೆಯುತ್ತಿರುವ ಹಿನ್ನೆಲೆ, ಜಗನ್ ಮೋಹನ್ ರೆಡ್ಡಿ ಸದನದಲ್ಲಿ ಈ ಯೋಜನೆಯ ಬಗ್ಗೆ ಮಸೂದೆ ಮಂಡಿಸಿದ್ದು, ಕಾರ್ಯಾಂಗದ ರಾಜಧಾನಿಯಾಗಿ ವಿಶಾಖಪಟ್ಟಣ, ಶಾಸಕಾಂಗದ ರಾಜಧಾನಿಯಾಗಿ ಅಮರಾವತಿ ಹಾಗೂ ನ್ಯಾಯಾಂಗದ ರಾಜಧಾನಿಯಾಗಿ ಕರ್ನೂಲ್ ಹೀಗೆ ಮೂರು ರೀತಿಯ ರಾಜಧಾನಿಯನ್ನು ರಾಜ್ಯದಲ್ಲಿ ಸ್ಥಾಪಿಸುವ ಸಲುವಾಗಿ ಸದನದಲ್ಲಿ ಮಸೂದೆ ಮಂಡಿಸಿದ್ದಾರೆ.
2020ರ ಆಂಧ್ರಪ್ರದೇಶ ವಿಕೇಂದ್ರಿಕರಣ ಹಾಗೂ ಅಭಿವೃದ್ಧಿ ಮಸೂದೆ ಪ್ರಕಾರ ರಾಜ್ಯದ ಅಭಿವೃದ್ಧಿಗೆ ಇದು ಸಹಕಾರಿಯಾಗಲಿದೆ ಎಂದು ರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ.