ETV Bharat / bharat

ನಾಳೆ ಮೋದಿ ಭೇಟಿಯಾಗಲಿರುವ ಜಗನ್​... ಆಂಧ್ರಕ್ಕೆ ವಿಶೇಷ ಸ್ಥಾನಮಾನ ಬೇಡಿಕೆಗೆ ಸಿಗುತ್ತಾ ಮನ್ನಣೆ?

ಈಚೆಗೆ ನಡೆದ ಚುನಾವಣೆಯಲ್ಲಿ ವೈಎಸ್​ಆರ್​ ಪಕ್ಷ, ಆಂಧ್ರ ಪ್ರದೇಶದಲ್ಲಿ ಭರ್ಜರಿ ವಿಜಯ ಸಾಧಿಸಿದೆ. ಮೋದಿ ಅವರೊಂದಿಗಿನ ಭೇಟಿಯಲ್ಲಿ ರೆಡ್ಡಿ ಅವರು ಎನ್‌ಡಿಎಗೆ ಬಾಹ್ಯ ಬೆಂಬಲ ಹಾಗೂ ವಿಷಯಾಧಾರಿತ ಸಹಕಾರ ನೀಡುವ ವಿಷಯವನ್ನು ಚರ್ಚಿಸುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ.

author img

By

Published : May 25, 2019, 6:50 PM IST

ಸಾಂದರ್ಭಿಕ ಚಿತ್ರ

ನವದೆಹಲಿ: ವೈಎಸ್​ಆರ್​ ಕಾಂಗ್ರೆಸ್​ ಪಕ್ಷದ ಅಧ್ಯಕ್ಷ ಹಾಗೂ ಆಂಧ್ರ ಪ್ರದೇಶದ ನಿಯೋಜಿತ ಮುಖ್ಯಮಂತ್ರಿ ವೈ.ಎಸ್​. ಜಗನ್ ಮೋಹನ್​ ರೆಡ್ಡಿ 26ರ ಭಾನುವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ.

ಈಚೆಗೆ ನಡೆದ ಚುನಾವಣೆಯಲ್ಲಿ ವೈಎಸ್​ಆರ್​ ಪಕ್ಷ, ಆಂಧ್ರ ಪ್ರದೇಶದಲ್ಲಿ ಭರ್ಜರಿ ವಿಜಯ ಸಾಧಿಸಿದೆ. ಮೋದಿ ಅವರೊಂದಿಗಿನ ಭೇಟಿಯಲ್ಲಿ ರೆಡ್ಡಿ ಅವರು ಎನ್‌ಡಿಎಗೆ ಬಾಹ್ಯ ಬೆಂಬಲ ಹಾಗೂ ವಿಷಯಾಧಾರಿತ ಸಹಕಾರ ನೀಡುವ ವಿಷಯವನ್ನು ಚರ್ಚಿಸುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ.

ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನದ ಭರವಸೆ ನೀಡುವ ಯಾರನ್ನೇ ಆದರೂ ತಮ್ಮ ಪಕ್ಷ ಬೆಂಬಲಿಸಲಿದೆ ಎಂದು ಜಗನ್‌ಮೋಹನ್‌ ರೆಡ್ಡಿ ಅವರು ಚುನಾವಣಾ ಪ್ರಚಾರಾದಲ್ಲಿ ಹೇಳಿದ್ದರು. ನಾಳೆ ಬೆಳಗ್ಗೆ ನವದೆಹಲಿಗೆ ಆಗಮಿಸುವ ರೆಡ್ಡಿ ಮಧ್ಯಾಹ್ನ 12 ಗಂಟೆಯ ವೇಳೆಗೆ ಮೋದಿ ಅವರನ್ನು ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರೆಡ್ಡಿ ಅವರು ಮೇ 30ರಂದು ವಿಜಯವಾಡದಲ್ಲಿ ಆಂಧ್ರ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಹ್ವಾನ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.

Intro:Body:Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.