ಲಖನೌ(ಉತ್ತರಪ್ರದೇಶ) : ಆಕ್ಷೇಪಾರ್ಹ ವಿಡಿಯೋಗಳನ್ನು ಪೋಸ್ಟ್ ಮಾಡುವ ಮೂಲಕ ನನ್ನ ಇಮೇಜ್‌ಗೆ ಕಳಂಕ ತಂದಿದ್ದಾರೆ ಎಂದು ಆರೋಪಿಸಿ ಭೋಜ್‌ಪುರಿ ನಟ ಪವನ್ ಸಿಂಗ್ ಅವರು ಲಖನೌದ ಗೋಮತಿ ನಗರ ಪೊಲೀಸ್ ಠಾಣೆಯಲ್ಲಿ ಕೆಲವು ಯೂಟ್ಯೂಬರ್‌ಗಳ ವಿರುದ್ಧ ದೂರು ನೀಡಿದ್ದಾರೆ.
ಈ ಕುರಿತು ಮಾಹಿತಿ ನೀಡಿದರು ಪವನ್ ಸಿಂಗ್, ನಾನು ಶೂಟಿಂಗ್‌ಗೆ ಸಂಬಂಧಿಸಿದಂತೆ ಫೆಬ್ರವರಿ 20ರಿಂದ ಲಖನೌದಲ್ಲಿದ್ದೆ. ಆ ಸಮಯದಲ್ಲಿ ಆಕ್ಷೇಪಾರ್ಹ ವಿಡಿಯೋಗಳನ್ನು ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ.
ಈ ಕುರಿತು ಎಫ್‌ಐಆರ್ ದಾಖಲಾಗಿದ್ದು, ಪ್ರಕರಣದ ತನಿಖೆಯನ್ನು ಸೈಬರ್ ಸೆಲ್‌ಗೆ ವಹಿಸಲಾಗಿದೆ ಎಂದು ತಿಳಿಸಿದ್ದಾರೆ. ಇನ್ನು, ನನ್ನ ಜೀವಕ್ಕೆ ಅಪಾಯವಿದ್ದು, ಬೆದರಿಕೆಯೊಡ್ಡುತ್ತಿದ್ದಾರೆ. ಸುಮಿತ್ ದ್ವಿವೇದಿ ಮತ್ತು ಕೆಲವರು ಸೇರಿ ವಿಡಿಯೋಗಳನ್ನು ಪೋಸ್ಟ್ ಮಾಡುತ್ತಿದ್ದಾರೆ ಎಂದು ಪವನ್ ಸಿಂಗ್ ಆರೋಪಿಸಿದ್ದಾರೆ.
ಈ ಹಿಂದೆ ಮೊಹಾಲಿಯಲ್ಲಿ ಬಿಜೆಪಿ ಪರ ಬೃಹತ್ ಸಮಾವೇಶದಲ್ಲಿ ಮಾತನಾಡುತ್ತಿದ್ದಾಗ ಕೆಲ ಕಿಡಿಗೇಡಿಗಳು ಗಾಯಕ ಪವನ್ ಸಿಂಗ್ ಮೇಲೆ ದಾಳಿ ನಡೆಸಿದ್ದರು.