ಗಾಂಧಿನಗರ (ಗುಜರಾತ್): ಮುಂದಿನ ಗುಜರಾತ್ ಮುಖ್ಯಮಂತ್ರಿ ಯಾರಾಗ್ತಾರೆ ಎಂಬ ಕುತೂಹಲಕ್ಕೆ ಬ್ರೇಕ್ ಬಿದ್ದಿದೆ. ಸಿಎಂ ರೇಸ್ನಲ್ಲಿ ಮುಂಚೂಣಿಯಲ್ಲಿದ್ದ ಶಾಸಕ ಭೂಪೇಂದ್ರ ಪಟೇಲ್ ಅವರನ್ನು ಗುಜರಾತ್ನ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ.
ಗಾಂಧಿನಗರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಇಂದು ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಿಜೆಪಿ ವರಿಷ್ಠರು ಭೂಪೇಂದ್ರ ಪಟೇಲ್ ಅವರನ್ನು ನೂತನ ಸಿಎಂ ಆಗಿ ಆಯ್ಕೆ ಮಾಡಿದ್ದಾರೆ. ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಮತ್ತು ನರೇಂದ್ರ ಸಿಂಗ್ ತೋಮರ್, ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಅವರು ಪಕ್ಷದ ಶಾಸಕರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಂಡಿದ್ದಾರೆ. ಸಭೆಯಲ್ಲಿ ನಿರ್ಗಮಿತ ಸಿಎಂ ವಿಜಯ್ ರೂಪಾನಿ ಕೂಡ ಭಾಗವಹಿಸಿದ್ದರು.
-
Gujarat: BJP MLA Bhupendra Patel elected as the new leader of BJP Legislative Party pic.twitter.com/nXeYqh7yvm
— ANI (@ANI) September 12, 2021 " class="align-text-top noRightClick twitterSection" data="
">Gujarat: BJP MLA Bhupendra Patel elected as the new leader of BJP Legislative Party pic.twitter.com/nXeYqh7yvm
— ANI (@ANI) September 12, 2021Gujarat: BJP MLA Bhupendra Patel elected as the new leader of BJP Legislative Party pic.twitter.com/nXeYqh7yvm
— ANI (@ANI) September 12, 2021
ಇದನ್ನೂ ಓದಿ: ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ವಿಜಯ್ ರೂಪಾನಿ...ಕಾರಣ?
ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದ್ದು, ನಿನ್ನೆಯಷ್ಟೇ ವಿಜಯ್ ರೂಪಾನಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆಗಸ್ಟ್ 1 ರಂದು ಉತ್ತರ ಪ್ರದೇಶ ಮೂಲದ ರತ್ನಾಕರ್ ಅವರನ್ನು ಗುಜರಾತ್ ಬಿಜೆಪಿಯ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಬಿಜೆಪಿ ಹೈಕಮಾಂಡ್ ನೇಮಿಸಿತ್ತು. ಗುಜರಾತ್ ರಾಜಕೀಯದಲ್ಲಿ ದೊಡ್ಡ ಬದಲಾವಣೆಯ ಸಾಧ್ಯತೆಯಿದೆ ಎಂದು ಆಗಲೇ ಹೇಳಲಾಗಿತ್ತು. ಮುಖ್ಯಮಂತ್ರಿ ಬದಲಾವಣೆ ಕೂಗು ಸಹ ಕೇಳಿ ಬಂದಿತ್ತು. ಇದಕ್ಕೆ ಪೂರಕವೆಂಬಂತೆ ವಿಜಯ್ ರೂಪಾನಿ ಸಿಎಂ ಸ್ಥಾನದಿಂದ ಕೆಳಗಿಳಿದಿದ್ದರು.