ಮುಂಬೈ: ಭುವನ ಸುಂದರಿ-2021 ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಸುಂದರಿ ಹರ್ನಾಜ್ ಸಂಧು ಭಾರತಕ್ಕೆ ಕಾಲಿಟ್ಟಿದ್ದಾರೆ. ಅವರನ್ನು ಬರಮಾಡಿಕೊಳ್ಳಲು ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಿದ್ದರು. ಹರ್ನಾಜ್ ಅವರ ಸುರಕ್ಷತೆಗಾಗಿ ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ಸ್ಥಳದಲ್ಲಿ ನಿಯೋಜಿಸಲಾಗಿತ್ತು. ಹರ್ನಾಜ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ನಂತರ ಯಾವುದೇ ತೊಂದರೆಯಾಗದಂತೆ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿತ್ತು.
ಇದನ್ನೂ ಓದಿ: ಖಾಸಗೀಕರಣ ವಿರೋಧಿಸಿ ಎರಡು ದಿನಗಳ ಮುಷ್ಕರ: ದೇಶಾದ್ಯಂತ ಬ್ಯಾಂಕ್ ಸೇವೆಗಳು ಬಂದ್
ಹರ್ನಾಜ್ ಅವರನ್ನು ಕ್ವಾರಂಟೈನ್ ಮಾಡಲಾಗಿದ್ದು, ಒಮಿಕ್ರಾನ್ ಆತಂಕದ ನಡುವೆ ಏಳು ದಿನಗಳ ಕಾಲ ಕ್ವಾರಂಟೈನ್ ಮಾಡಲಾಗಿದೆ. ಹರ್ನಾಜ್ ಅವರ ಗಂಟಲು ದ್ರವವನ್ನು ಬಿಎಂಸಿ ಆರೋಗ್ಯ ಇಲಾಖೆಯು ಕೋವಿಡ್ ಪರೀಕ್ಷೆಗಾಗಿ ತೆಗೆದುಕೊಂಡಿದೆ.
ಎಂಟು ದಿನಗಳ ನಂತರ ವರದಿ ನೀಡಲಾಗುವುದು. ಅಲ್ಲಿವರೆಗೆ ವಿಮಾನ ನಿಲ್ದಾಣದ ಸಮೀಪವಿರುವ ಸೆವೆನ್ ಸ್ಟಾರ್ ಹೋಟೆಲ್‌ನಲ್ಲಿ ಕ್ವಾರಂಟೈನ್ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸದ್ಯಕ್ಕೆ ಹರ್ನಾಜ್‌ಗೆ ಚಂಡೀಗಢಕ್ಕೆ ಭೇಟಿ ನೀಡುವ ಯಾವುದೇ ಯೋಜನೆ ಇಲ್ಲ.