ಹೈದರಾಬಾದ್ (ತೆಲಂಗಾಣ): ತೆಲಂಗಾಣದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹೈದರಾಬಾದ್‌ನ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇಂದು ಕೂಡ ಸಾಕಷ್ಟು ಮಳೆಯಾಗುವ ನಿರೀಕ್ಷೆ ಇದೆ.
ಈಗಾಗಲೇ ನಿನ್ನೆ ರಾತ್ರಿಯಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಅದರಲ್ಲೂ ಹೈದರಾಬಾದ್ನಲ್ಲಿ ಎಡಬಿಡದೆ ಮಳೆ ಸುರಿಯುತ್ತಿದೆ. ಧಾರಾಕಾರ ಮಳೆಯಿಂದಾಗಿ ನಗರದ ಹಲವೆಡೆ ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಮಳೆ ನೀರಿನಿಂದ ರಸ್ತೆಗಳು ಕೆರೆಗಳಂತಾಗಿವೆ. ಇಂದು ಸಹ ಮಳೆ ಮುಂದುವರೆದಿದ್ದು, ನಾಳೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಹಾಗೂ ಗುರುವಾರ ಮತ್ತೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಸತತ ಮಳೆ ಹಿನ್ನೆಲೆಯಲ್ಲಿ ಜನರು ಜಾಗೃತರಾಗಿರಬೇಕು. ತುರ್ತು ಪರಿಸ್ಥಿತಿಯ ಹೊರತು ಜನರು ಹೊರಗೆ ಹೋಗಬಾರದೂ ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ. ಮತ್ತೊಂದೆಡೆ ಹಲವು ಜಿಲ್ಲೆಗಳಲ್ಲಿ ಕೆರೆಗಳು ಒಡೆದು ರಸ್ತೆಗಳಿಗೆ ನೀರು ಬಂದು ಸಂಚಾರ ಸ್ಥಗಿತಗೊಂಡಿದೆ. ಕೆಲವು ಪ್ರದೇಶಗಳಲ್ಲಿ ಸೇತುವೆಗಳ ಮೇಲಿನಿಂದಲೂ ನೀರು ಹರಿಯುತ್ತಿದೆ. ಹಲವು ಗ್ರಾಮಗಳಲ್ಲಿ ಹೊಳೆ, ಕೆರೆಗಳು ತುಂಬಿ ಹರಿಯುತ್ತಿವೆ. ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದೆ.
ಇದನ್ನೂ ಓದಿ: ಕೆಆರ್ಎಸ್ನಿಂದ ತಮಿಳುನಾಡಿಗೆ 75 ಟಿಎಂಸಿ ನೀರು