ಪಾಟ್ನಾ: ಇಡೀ ದೇಶದ ಜನರ ಚಿತ್ತ ಬಿಹಾರ ವಿಧಾನಸಭಾ ಚುನಾವಣೆಯ ಮತ ಎಣಿಕೆಯತ್ತ ನೆಟ್ಟಿದೆ. ಬಹುತೇಕ ಕ್ಷೇತ್ರಗಳಲ್ಲಿ ಮಹಾಘಟಬಂಧನ್ ಗೆ ಭಾರಿ ಹಿನ್ನಡೆಯಾಗಿದ್ದು, ಎನ್ಡಿಎ ಮೈತ್ರಿ ಕೂಟ ಮುನ್ನಡೆ ಸಾಧಿಸಿದೆ.
ಬಂಕಿಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕ ಶತ್ರುಘ್ನ ಸಿನ್ಹಾ ಪುತ್ರ ಲವ ಸಿನ್ಹಾಗೆ ಹಿನ್ನಡೆಯಾಗಿದ್ದು, ಬಿಜೆಪಿಯ ನಿತಿನ್ ನಬಿನ್ ಮುನ್ನಡೆ ಸಾಧಿಸಿದ್ದಾರೆ.
ಹರಿಯಾಣ ಉಪಚುನಾವಣೆಯಲ್ಲಿಯೂ ಕಾಂಗ್ರೆಸ್ನ್ನು ಹಿಂದಿಕ್ಕಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಇತ್ತೀಚೆಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಇಂದೂ ರಾಜ್ ಬರೋಡಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯೋಗೇಶ್ವರ್ ದತ್ ಗೆಲುವಿನತ್ತ ದಾಪುಗಾಲು ಇಟ್ಟಿದ್ದು, ಇಂದೂರಾಜ್ಗೆ ಹಿನ್ನಡೆಯಾಗಿದೆ.