ETV Bharat / bharat

ಬಿಹಾರ: ಬಿಜೆಪಿ ನಾಯಕನ ಗುಂಡಿಕ್ಕಿ ಹತ್ಯೆ - ಹತ್ಯೆ ಖಂಡಿಸಿ ಸ್ಥಳೀಯರು ರಸ್ತೆ ತಡೆ

ಹತ್ಯೆ ಖಂಡಿಸಿ ಸ್ಥಳೀಯರು ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದರು. ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ.

ಬಿಹಾರ: ಬಿಜೆಪಿ ನಾಯಕನ ಗುಂಡಿಕ್ಕಿ ಹತ್ಯೆ
bjp leader shot dead
author img

By

Published : Nov 7, 2022, 2:22 PM IST

ಪಾಟ್ನಾ: ಬೈಕ್​​ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಬಿಜೆಪಿ ಮುಖಂಡರೊಬ್ಬರನ್ನು ಗುಂಡಿಕ್ಕಿ ಕೊಂದಿರುವ ಘಟನೆ ಬಿಹಾರದ ಕಟಿಹಾರ್ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹತ್ಯೆಗೀಡಾದವರನ್ನು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ತೆಲ್ಟಾ ಗ್ರಾಮದ ಸಂಜೀವ್ ಮಿಶ್ರಾ ಎಂದು ಗುರುತಿಸಲಾಗಿದೆ.

ತೆಲ್ಟಾದಲ್ಲಿರುವ ತನ್ನ ಮನೆಯ ಹೊರಗೆ ಕುಳಿತಿದ್ದಾಗ ದಾಳಿಕೋರರು ಆಗಮಿಸಿ ಅವರ ಮೇಲೆ ಗುಂಡು ಹಾರಿಸಿದ್ದಾರೆ. ಎರಡು ಗುಂಡು ತಾಕಿದ ನಂತರ ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಳೆ ದ್ವೇಷ ಹಾಗೂ ಆಸ್ತಿ ವಿವಾದವೇ ಹಲ್ಲೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

ಹತ್ಯೆ ಖಂಡಿಸಿ ಸ್ಥಳೀಯರು ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದರು. ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: ಹಾಡಹಗಲೇ ಗುಂಡು ಹಾರಿಸಿದ ದುಷ್ಕರ್ಮಿಗಳು... ಕಾನ್ಸ್​ಟೇಬಲ್​ ಬಲಿ ಪಡೆದ ಮದ್ಯ ಮಾಫಿಯಾ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.