ETV Bharat / bharat

23 ರಂದು ಪಾಟ್ನಾದಲ್ಲಿ ಬಿಜೆಪಿ ವಿರೋಧಿ ಪಕ್ಷಗಳ ಸಭೆ: 17ಕ್ಕೂ ಅಧಿಕ ವಿಪಕ್ಷಗಳ ನಾಯಕರು ಭಾಗಿ ಸಾಧ್ಯತೆ

ಕಾಂಗ್ರೆಸ್​ನಿಂದಾಗಿ 2 ಬಾರಿ ಮುಂದೂಡಿಕೆಯಾಗಿದ್ದ ಬಿಜೆಪಿ ವಿರೋಧಿ ಪಕ್ಷಗಳ ಸಭೆ ಇದೇ 23 ರಂದು ಬಿಹಾರದ ಪಾಟ್ನಾದಲ್ಲಿ ಫಿಕ್ಸ್​ ಆಗಿದೆ. ಇದರಲ್ಲಿ 17 ವಿಪಕ್ಷಗಳ ನಾಯಕರು ಭಾಗವಹಿಸಲಿದ್ದು, ಮುಂದಿನ ಲೋಕಸಭೆ ಚುನಾವಣೆಯ ರಣತಂತ್ರದ ಚರ್ಚೆ ನಡೆಯಲಿದೆ.

ಬಿಜೆಪಿ ವಿರೋಧಿ ಪಕ್ಷಗಳ ಸಭೆ
ಬಿಜೆಪಿ ವಿರೋಧಿ ಪಕ್ಷಗಳ ಸಭೆ
author img

By

Published : Jun 19, 2023, 10:41 AM IST

ಪಾಟ್ನಾ (ಬಿಹಾರ): ಮುಂದಿನ ಲೋಕಸಭೆ ಚುನಾವಣೆಯಲ್ಲಿ ಶತಾಯಗತಾಯ ಬಿಜೆಪಿಯನ್ನು ಸೋಲಿಸುವ ಪಣ ತೊಟ್ಟಿರುವ ಪ್ರತಿಪಕ್ಷಗಳು ಒಗ್ಗಟ್ಟಿನ ಮಂತ್ರಿ ಜಪಿಸುತ್ತಿವೆ. ಕೇಸರಿ ಪಡೆಯನ್ನು ಏಕಾಂಗಿ ಬದಲಾಗಿ ಸಾಮೂಹಿಕವಾಗಿ ಎದುರಿಸುವ ನಿಟ್ಟಿನಲ್ಲಿ 17 ಕ್ಕೂ ಅಧಿಕ ರಾಜಕೀಯ ಪಕ್ಷಗಳು ಕೈಜೋಡಿಸಲು ಮುಂದಾಗಿದ್ದು, ಜೂನ್ 23 ರಂದು ಬಿಹಾರದಲ್ಲಿ ಸಭೆ ಕರೆಯಲಾಗಿದೆ. ಸಭೆಯಲ್ಲಿ ಎಲ್ಲ ಪಕ್ಷಗಳ ನಾಯಕರು ಭಾಗವಹಿಸುವ ನಿರೀಕ್ಷೆ ಇದ್ದು, ರಣತಂತ್ರದ ಚರ್ಚೆ ನಡೆಯಲಿದೆ ಎಂದು ಹೇಳಲಾಗಿದೆ.

ಪಾಟ್ನಾದಲ್ಲಿ ನಡೆಯಲಿರುವ ಬಿಜೆಪಿ ವಿರೋಧಿ ಪಕ್ಷಗಳ ಸಭೆಗೆ ಭರದ ಸಿದ್ಧತೆಗಳು ನಡೆಯುತ್ತಿವೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೇ ಇದರ ನೇತೃತ್ವ ವಹಿಸಿದ್ದಾರೆ. ಸಿದ್ಧತೆಗಳ ಮೇಲೆ ನಿಗಾ ಇಟ್ಟಿದ್ದು, ಸಭೆಯನ್ನು ಯಶಸ್ವಿಗೊಳಿಸುವ ಕೆಲಸವನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಮತ್ತು ಹಿರಿಯ ನಾಯಕರಿಗೆ ವಹಿಸಿದ್ದಾರೆ.

17 ವಿಪಕ್ಷಗಳು ಭಾಗಿ ನಿರೀಕ್ಷೆ: ರಾಹುಲ್ ಗಾಂಧಿ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್​ ಸೇರಿದಂತೆ 17 ಕ್ಕೂ ಹೆಚ್ಚು ವಿರೋಧ ಪಕ್ಷಗಳ ನಾಯಕರನ್ನು ಸಭೆಗೆ ಆಹ್ವಾನಿಸಲಾಗಿದೆ. ಹೀಗಾಗಿ ಎಲ್ಲರ ಕಣ್ಣು ಅಂದಿನ ಸಭೆಯ ಮೇಲಿದೆ.

ವಿರೋಧ ಪಕ್ಷಗಳ ಮೈತ್ರಿಕೂಟ ರಚನೆಯಲ್ಲಿ ಕಾಂಗ್ರೆಸ್ ಪ್ರಮುಖ ಪಾತ್ರ ವಹಿಸುವ ಕಾರಣ, ಅದರ ನಾಯಕ ರಾಹುಲ್ ಗಾಂಧಿ ನಡೆಯ ಮೇಲೆ ಕುತೂಹಲ ಹೆಚ್ಚಿಸಿದೆ ಎಂದು ರಾಜಕೀಯ ತಜ್ಞರು ವಿಶ್ಲೇಷಿಸಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸಚಿವ ಸಂಪುಟ ರಚನೆ ವಿಚಾರದಲ್ಲಿ ತೊಡಗಿಸಿಕೊಂಡಿದ್ದರಿಂದ ಮೇ 19 ರಂದು ಪಾಟ್ನಾದಲ್ಲಿ ನಡೆಯಬೇಕಿದ್ದ ವಿರೋಧ ಪಕ್ಷದ ಸಭೆ ಮುಂದೂಡಲಾಗಿತ್ತು.

ರಾಹುಲ್​ ಗಾಂಧಿ ಮೇಲೆ ಕಣ್ಣು: ಅದಾದ ಬಳಿಕ ರಾಹುಲ್ ಗಾಂಧಿ ಅವರ ವಿದೇಶಿ ಪ್ರವಾಸದಿಂದಾಗಿ ಜೂನ್ 12 ರ ಸಭೆಯನ್ನು ಮುಂದಕ್ಕೆ ಹೋಗಿತ್ತು. ಕಾಂಗ್ರೆಸ್ ಕೋರಿಕೆಯ ಮೇರೆಗೆ ಸಭೆಯನ್ನು ಮುಂದೂಡಲಾಗಿದೆ ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಹೇಳಿದ್ದರು. ಇದೀಗ ಎಲ್ಲ ನಾಯಕರು ಸಭೆಗೆ ಹಾಜರಾಗುವ ನಿರೀಕ್ಷೆ ಇದ್ದು, ಜೂನ್​ 23 ರಂದು ಪಾಟ್ನಾದಲ್ಲಿ ಸಭೆ ಫಿಕ್ಸ್​ ಆಗಿದೆ.

ರಾಜ್ಯದ ಅತಿಥಿ ಗೃಹದಲ್ಲಿ ಮುಖ್ಯಮಂತ್ರಿಗಳು ಮತ್ತು ಇತರ ಅತಿಥಿಗಳಿಗೆ ವಸತಿ ವ್ಯವಸ್ಥೆ ಮಾಡಲಾಗಿದೆ. ರಾಜಕೀಯ ನಾಯಕರನ್ನು ಬರಮಾಡಿಕೊಳ್ಳಲು ಪಾಟ್ನಾ ಸರ್ಕ್ಯೂಟ್ ಹೌಸ್ ಕೂಡ ಸಿದ್ಧವಾಗುತ್ತಿದೆ. ಬಿಹಾರದ ಖಾದ್ಯಗಳನ್ನು ಗಣ್ಯರಿಗೆ ಬಡಿಸಲಾಗುತ್ತದೆ. ಪಾಟ್ನಾದ ಪ್ರಮುಖ ಹೋಟೆಲ್‌ಗಳಿಗೆ ರುಚಿಕರವಾದ ಆಹಾರ ಮತ್ತು ಪಾನೀಯಗಳನ್ನು ಒದಗಿಸುವ ಜವಾಬ್ದಾರಿಯನ್ನು ನೀಡಲಾಗಿದೆ.

ವಿರೋಧ ಪಕ್ಷಗಳು ಒಟ್ಟಾಗಲಿ: ಬಿಹಾರದಲ್ಲಿ ನಿತೀಶ್ ಕುಮಾರ್ ಅವರು ಎನ್​ಡಿಎ ತೊರೆದು ವಿಪಕ್ಷಗಳ ಮಹಾಮೈತ್ರಿಕೂಟ ಸೇರಿ ಸರ್ಕಾರ ರಚಿಸಿದ್ದರು. ಅಂದಿನಿಂದ ಅವರು ಬಿಜೆಪಿ ವಿರುದ್ಧ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಕಾಂಗ್ರೆಸ್ ಜೊತೆ ವಿರೋಧ ಪಕ್ಷಗಳ ಸಮನ್ವಯತೆ ಸಾಧಿಸಬೇಕಿದೆ. ಬಹುತೇಕ ಭಾಗದಲ್ಲಿ ವಿಪಕ್ಷಗಳ ಜಂಟಿ ಅಭ್ಯರ್ಥಿ ಇರುವಂತೆ ನೋಡಿಕೊಳ್ಳುವುದು ನಿತೀಶ್ ಕುಮಾರ್ ಅವರ ಪ್ರಯತ್ನವಾಗಿದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಿ ಅತಿ ಹೆಚ್ಚು ಸ್ಥಾನಗಳನ್ನು ಪಡೆಯುವುದು ಇದರ ಉದ್ದೇಶವಾಗಿದೆ ಎಂದು ಸಚಿವರೊಬ್ಬರು ತಿಳಿಸಿದ್ದಾರೆ.

ಎಲ್ಲಾ ಪ್ರಮುಖ ವಿರೋಧ ಪಕ್ಷಗಳ ನಾಯಕರು ಒಂದಾದರೆ ಬಿಜೆಪಿಯನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗುತ್ತದೆ. ಪ್ರತಿಪಕ್ಷಗಳು ಒಗ್ಗಟ್ಟಿನಿಂದ ಹೋರಾಡಿದರೆ ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ನಿತೀಶ್ ಕುಮಾರ್ ಅವರು ಈ ನಿಟ್ಟಿನಲ್ಲಿ ಪ್ರಯತ್ನ ನಡೆಸುತ್ತಿದ್ದು, ಪ್ರತಿಪಕ್ಷಗಳ ಒಗ್ಗಟ್ಟಿನಲ್ಲಿ ಯಶಸ್ಸು ಸಿಗಲಿದೆ ಎಂಬ ಭರವಸೆ ಇದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಪ್ರಧಾನಿ ಮೋದಿ ಆಗಮನದ ಎದುರು ನೋಡುತ್ತಿರುವ ಅಮೆರಿಕ.. ಭರದಿಂದ ಸಾಗಿದ ಯೋಗ ದಿನಾಚರಣೆ ಸಿದ್ಧತೆಗಳು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.