ETV Bharat / bharat

ಬಿಹಾರ: ವಿಷಪೂರಿತ ಕಳ್ಳಭಟ್ಟಿ ಸೇವಿಸಿ 40ಕ್ಕೂ ಹೆಚ್ಚು ಜನರು ಸಾವು - ಪೊಲೀಸ್ ವರಿಷ್ಠಾಧಿಕಾರಿ

ಬಿಹಾರದ ಪೂರ್ವ ಚಂಪಾರಣ್‌ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಕಳ್ಳಭಟ್ಟಿ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ಐವರು ರೋಗಿಗಳು ಸಾವಿಗೀಡಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚುತ್ತಿದೆ.

Getting treated in the hospital.
ಕಳ್ಳಭಟ್ಟಿ ಸೇವಿಸಿ ಅಸ್ವಸ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದು.
author img

By

Published : Apr 18, 2023, 5:33 PM IST

ಮೋತಿಹಾರಿ (ಬಿಹಾರ) ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ ವಿಷಪೂರಿತ ಕಳ್ಳಭಟ್ಟಿ ಸೇವನೆಯಿಂದ ಸಾವಿಗೀಡಾದವರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಸರ್ಕಾರದ ಅಧಿಕೃತ ಅಂಕಿಅಂಶಗಳ ಪ್ರಕಾರ ಈಗಾಗಲೇ 27 ಜನರು ಸಾವನ್ನಪ್ಪಿದ್ದಾರೆ. ಅಸ್ವಸ್ಥಗೊಂಡು ಹಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಐವರು ರೋಗಿಗಳು ಸಾವಿಗೀಡಾಗಿದ್ದಾರೆ. ಹಲವು ರೋಗಿಗಳ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಪಹರಪುರ ಪೊಲೀಸ್ ಠಾಣಾ ವ್ಯಾಪ್ತಿಯ ಪಂಡಿತ್‌ಪುರದ ವೀರೇಂದ್ರ ಸಾಹ್, ಹರ್ಸಿದ್ಧಿ ಪೊಲೀಸ್ ಠಾಣೆ ವ್ಯಾಪ್ತಿಯ ಮಾನೇಜ್ ಮಹತೋ ಮತ್ತು ಬ್ರಿಜೇಶ್ ಯಾದವ್ ಮೃತಪಟ್ಟವರು ಎಂದು ವರದಿಯಾಗಿದೆ. ಪ್ರಸ್ತುತ 11 ಮಂದಿ ಸದರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಜಿಲ್ಲೆಯ ಐದು ಪೊಲೀಸ್ ಠಾಣೆ ವ್ಯಾಪ್ತಿಯಿಂದ ಆಂಬುಲೆನ್ಸ್ ಮೂಲಕ ಮದ್ಯ ಸೇವನೆಯಿಂದ ಅಸ್ವಸ್ಥರಾಗಿರುವ ರೋಗಿಗಳನ್ನು ಕರೆತರುವ ಪ್ರಕ್ರಿಯೆ ನಡೆಯುತ್ತಿದೆ.

ಪೊಲೀಸರು ಒಂಬತ್ತು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪ್ರಕರಣದ ತನಿಖೆಯ ಭಾಗವಾಗಿ ಪೊಲೀಸರು ಇದುವರೆಗೆ ಐದು ಪ್ರಕರಣಗಳನ್ನು ದಾಖಲಿಸಿ 174 ಜನರನ್ನು ಬಂಧಿಸಿದ್ದಾರೆ ಎಂದು ಸೋಮವಾರ ತಡರಾತ್ರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಬಕಾರಿ ಅಧಿಕಾರಿಗಳು ಅಮಾನತು: ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಅಬಕಾರಿ ಅಧಿಕಾರಿಗಳನ್ನು ಈಗಾಗಲೇ ಅಮಾನತು ಮಾಡಲಾಗಿದೆ. ಈ ಮೊದಲು ಇಬ್ಬರು ಎಎಲ್‌ಟಿಎಫ್ ಅಧಿಕಾರಿಗಳು ಮತ್ತು ಒಂಬತ್ತು ವಾಚ್‌ಮನ್‌ಗಳನ್ನು ಸೇವೆಯಿಂದ ತೆಗೆದು ಹಾಕಲಾಗಿತ್ತು. ಏಪ್ರಿಲ್ 15 ರಿಂದ ಮೋತಿಹಾರಿಯ ವಿವಿಧ ಭಾಗಗಳಲ್ಲಿ 600ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ಮಾಡಿದ್ದು ಕಳ್ಳಭಟ್ಟಿ ಸಾರಾಯಿ ಹಾಗೂ ಇತರ ಸಂಬಂಧಿತ ರಾಸಾಯನಿಕಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಜಿಲ್ಲೆಯ ವಿವಿಧೆಡೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಇದುವರೆಗೆ 1,729.53 ಲೀಟರ್ ಕಳ್ಳಭಟ್ಟಿ, 50 ಲೀಟರ್ ಭಾರತೀಯ ನಿರ್ಮಿತ ವಿದೇಶಿ ಮದ್ಯ (ಐಎಂಎಫ್‌ಎಲ್) ಮತ್ತು 2,220 ಲೀಟರ್ ಅಕ್ರಮ ಮದ್ಯ ತಯಾರಿಕೆಗೆ ಬಳಸಿದ ಇತರ ರಾಸಾಯನಿಕಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬಿಹಾರದಲ್ಲಿ ಕಳ್ಳಭಟ್ಟಿ ಸೇವಿಸಿ ಸಾವನ್ನಪ್ಪಿದವರ ಸಂಬಂಧಿಕರಿಗೆ ತಲಾ 4 ಲಕ್ಷ ರೂ. ನೀಡುವ ನಿರ್ಧಾರದ ಬಗ್ಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಯು-ಟರ್ನ್ ಹೊಡೆದಿದ್ದಾರೆ. ರಾಜ್ಯದಲ್ಲಿ 2016 ರಿಂದ ನಕಲಿ ಕಳ್ಳಭಟ್ಟಿ ಸಾರಾಯಿ ನಿಷೇಧ ನೀತಿ ಜಾರಿಗೊಳಿಸಲಾಗಿದೆ.

ಇದನ್ನೂಓದಿ: ಮಂಗಳೂರು: ನೆಟ್ಟಣದಲ್ಲಿ ಭೀಕರ ರಸ್ತೆ ಅಪಘಾತ, ನಾಲ್ವರು ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.