ETV Bharat / bharat

ಬಿಹಾರದ ಶೇ. 72ರಷ್ಟು ಸಚಿವರಿಗೆ ಕ್ರಿಮಿನಲ್ ಹಿನ್ನೆಲೆ​​, 17 ಮಂತ್ರಿಗಳ ವಿರುದ್ಧ ಗಂಭೀರ ಪ್ರಕರಣ - Etv bharat kannada

ಬಿಹಾರದಲ್ಲಿ ಇತ್ತೀಚೆಗೆ ನೂತನ ಸಚಿವ ಸಂಪುಟ ರಚನೆಯಾಗಿದೆ. ಒಟ್ಟು 31 ಶಾಸಕರಿಗೆ ಮಂತ್ರಿಗಿರಿ ಸಿಕ್ಕಿದೆ. ಆದರೆ, ಇದರಲ್ಲಿ ಶೇ. 72ರಷ್ಟು ಮಂತ್ರಿಗಳ ಮೇಲೆ ಕ್ರಿಮಿನಲ್​ ಕೇಸ್‌ಗಳಿವೆ.

Etv Bharat
Etv Bharat
author img

By

Published : Aug 17, 2022, 4:19 PM IST

ಪಾಟ್ನಾ(ಬಿಹಾರ): ಭಾರತೀಯ ಜನತಾ ಪಾರ್ಟಿ(ಬಿಜೆಪಿ) ಜೊತೆಗಿನ ಮೈತ್ರಿ ಮುರಿದುಕೊಂಡು ಆರ್​ಜೆಡಿ, ಕಾಂಗ್ರೆಸ್ ಹಾಗೂ ಇತರೆ ಎಡಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡು ನಿತೀಶ್​ ಕುಮಾರ್ ಬಿಹಾರದಲ್ಲಿ ಹೊಸ ಸರ್ಕಾರ ರಚಿಸಿದ್ದಾರೆ. ನಿನ್ನೆ ಸಚಿವ ಸಂಪುಟ ವಿಸ್ತರಣೆಯಾಗಿದ್ದು, 31 ಶಾಸಕರು ಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಇದೀಗ ಹೊರಬಿದ್ದಿರುವ ಮಾಹಿತಿ ಪ್ರಕಾರ, ಶೇ. 72ರಷ್ಟು ಸಚಿವರ ಮೇಲೆ ಕ್ರಿಮಿನಲ್ ಕೇಸ್​ ಇರುವುದು ಬಹಿರಂಗಗೊಂಡಿದೆ. ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ನಡೆಸಿದ ಸಮೀಕ್ಷೆಯಿಂದ ಈ ಮಹತ್ವದ ಮಾಹಿತಿ ಬಹಿರಂಗವಾಗಿದೆ. ಮುಖ್ಯವಾಗಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ವಿರುದ್ಧ ಸಹ ಪ್ರಕರಣ ದಾಖಲಾಗಿರುವುದಾಗಿ ಚುನಾವಣಾ ಹಕ್ಕುಗಳ ಸಂಸ್ಥೆ ಎಡಿಆರ್ ತಿಳಿಸಿದೆ. ಅಚ್ಚರಿ ಅಂದ್ರೆ, ಹಾಲಿ ಕಾನೂನು ಸಚಿವರ ಮೇಲೂ ಕಿಡ್ನಾಪ್ ಕೇಸ್ ಇದೆ.

ಎಡಿಆರ್​​ ಮಾಹಿತಿ ಪ್ರಕಾರ, 23 ಸಚಿವರ ಪೈಕಿ 17 ಮಂತ್ರಿಗಳ ವಿರುದ್ಧ ಗಂಭೀರ ಕ್ರಿಮಿನಲ್​ ಆರೋಪಗಳಿವೆ. ಒಟ್ಟು 31 ಸಚಿವರ ಪೈಕಿ 27 ಮಂತ್ರಿಗಳು ಕೋಟ್ಯಧಿಪತಿಗಳಾಗಿದ್ದಾರೆ. ಇವರ ಆಸ್ತಿ ಸರಾಸರಿ 5.82 ಕೋಟಿ ರೂಪಾಯಿ ಆಗಿದೆ.

ಇದನ್ನೂ ಓದಿ: ಅಪಹರಣ ಪ್ರಕರಣದ ಆರೋಪಿಗೆ ಬಿಹಾರದ ನಿತೀಶ್‌ ಸಂಪುಟದಲ್ಲಿ ಕಾನೂನು ಸಚಿವ ಸ್ಥಾನ

ಸಚಿವರಾಗಿ ಅಧಿಕಾರ ಸ್ವೀಕರಿಸಿದ 8 ಮಂತ್ರಿಗಳ ಶೈಕ್ಷಣಿಕ ಅರ್ಹತೆ 8ರಿಂದ 12ನೇ ತರಗತಿಯ ನಡುವೆ ಇದೆ. ಆದರೆ, ಉಳಿದ ಸಚಿವರು ಪದವೀಧರರು ಅಥವಾ ಅದಕ್ಕಿಂತಲೂ ಹೆಚ್ಚಿನ ಶೈಕ್ಷಣಿಕ ಅರ್ಹತೆ ಪಡೆದುಕೊಂಡಿದ್ದಾರೆ. ನೂತನ ಸಚಿವ ಸಂಪುಟದಲ್ಲಿ ಆರ್​ಜೆಡಿಯ 16, ಜೆಡಿಯುನ 11 ಶಾಸಕರು ಸಚಿವರಾಗಿ ಪ್ರಮಾಣ ವಚನ ಪಡೆದಿದ್ದಾರೆ. ಉಳಿದಂತೆ ಕಾಂಗ್ರೆಸ್​​ನ ಇಬ್ಬರು ಹಾಗೂ ಹಿಂದೂಸ್ತಾನ ಅವಾನಿ ಮೋರ್ಚಾದ ಓರ್ವ ಶಾಸಕನಿಗೆ ಮಂತ್ರಿಭಾಗ್ಯ ಸಿಕ್ಕಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.