ETV Bharat / bharat

ಬಿಹಾರ ಮೂಲದ ವ್ಯಕ್ತಿ ಮೇಲೆ ಸಾಮೂಹಿಕ ಹಲ್ಲೆ, ಕೊಲೆ : 9 ಜನರ ಬಂಧನ - ಈಟಿವಿ ಭಾರತ ಕನ್ನಡ

ಬಿಹಾರ ಮೂಲದ ವ್ಯಕ್ತಿಯನ್ನು ಥಳಿಸಿ ಕೊಲೆಗೈದಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಡೆದಿದೆ.

bihar-native-killed-in-kondotty-police-presumes-as-lynching-nine-people-in-custody
ಬಿಹಾರ ಮೂಲದ ವ್ಯಕ್ತಿ ಮೇಲೆ ಸಾಮೂಹಿಕ ಹಲ್ಲೆ, ಸಾವು : 9 ಜನರ ಬಂಧನ
author img

By

Published : May 14, 2023, 9:13 PM IST

ಮಲಪ್ಪುರಂ (ಕೇರಳ) : ಕಳ್ಳತನದ ಆರೋಪದ ಮೇಲೆ ಬಿಹಾರ ಮೂಲದ ವಲಸೆ ಕಾರ್ಮಿಕನೋರ್ವನಿಗೆ ಗುಂಪೊಂದು ಥಳಿಸಿ ಹತ್ಯೆ ಮಾಡಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ 9 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮೃತ ವ್ಯಕ್ತಿಯನ್ನು ಬಿಹಾರದ ಪೂರ್ವ ಚಂಪಾರನ್​ ಜಿಲ್ಲೆಯ ರಾಜೇಶ್​ ಮಾಂಜಿ ಎಂದು ಗುರುತಿಸಲಾಗಿದೆ. ಈತ ಕೆಲ ದಿನಗಳ ಹಿಂದೆ ಉದ್ಯೋಗ ಅರಸಿ ಮಲಪ್ಪುರಂನ ಕೊಂಡೊಟ್ಟಿಗೆ ಆಗಮಿಸಿದ್ದ. ಆದರೆ ಮೇ 12ರಂದು ರಾತ್ರಿ 2 ಗಂಟೆ ವೇಳೆ ರಾಜೇಶ್​ನನ್ನು ಸ್ಥಳೀಯರು ಕಳ್ಳನೆಂದು ಭಾವಿಸಿ ಥಳಿಸಿದ್ದರು. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ತಕ್ಷಣವೇ ರಾಜೇಶ್​ ಮಾಂಜಿಯನ್ನು ಆಸ್ಪತ್ರೆಗೆ ಸಾಗಿಸಿದ್ದರು. ಆದ್ರೆ ಅಷ್ಟರಲ್ಲಾಗಲೇ ಆ ವ್ಯಕ್ತಿ ಮೃತಪಟ್ಟಿರುವುದನ್ನು ವೈದ್ಯರು ಖಚಿತಪಡಿಸಿದ್ದರು.

ಈ ಬಗ್ಗೆ ಮಾಹಿತಿ ನೀಡಿದ ಮಲಪ್ಪುರಂ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಸುಜಿತ್​ ದಾಸ್​​, ಕಳೆದ ಮೇ 12ರಂದು ಈ ಘಟನೆ ನಡೆದಿದೆ. ಬಿಹಾರ ಮೂಲದ ವ್ಯಕ್ತಿಯೋರ್ವನನ್ನು ಕಳ್ಳನೆಂದು ಭಾವಿಸಿ ಜನರು ಥಳಿಸಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ರಾಜೇಶ್​ ಮಾಂಜಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅದಾಗಲೇ ವ್ಯಕ್ತಿ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಮರಣೋತ್ತರ ಪರೀಕ್ಷೆಯಲ್ಲಿ ವ್ಯಕ್ತಿಯು ಗುಂಪು ಹಲ್ಲೆಗೆ ಒಳಗಾಗಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ ಎಂದು ಮಾಹಿತಿ ನೀಡಿದರು.

ಪ್ರಕರಣ ಸಂಬಂಧ 9 ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ವಿಚಾರಣೆ ನಡೆಸಲಾಗುತ್ತಿದ್ದು, ವಿಚಾರಣೆ ವೇಳೆ ಆರೋಪಿಗಳು ಸುಮಾರು 2 ಗಂಟೆಗಳ ಕಾಲ ರಾಜೇಶ್​ ಮಾಂಜಿಗೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೆ ಆರೋಪಿಗಳು ದರೋಡೆ ಯತ್ನದ ವೇಳೆ ರಾಜೇಶ್​ ಮಾಂಜಿ ಮನೆಯ ಟೆರೇಸ್​ನಿಂದ​ ಬಿದ್ದು ಗಾಯಗೊಂಡು ಸಾವನ್ನಪ್ಪಿದ್ದಾನೆ ಎಂದು ಹೇಳಿದ್ದಾರೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಸುಜಿತ್​ ದಾಸ್​ ತಿಳಿಸಿದರು.

ಇದನ್ನೂ ಓದಿ : ಜೂಜುಕೋರರ ಹಿಡಿಯಲು ಯತ್ನಿಸಿ ಎರಡನೇ ಮಹಡಿಯಿಂದ ಬಿದ್ದು ಎಸ್​ಐ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.