ಮುಜಾಫರ್‌ಪುರ (ಉತ್ತರ ಪ್ರದೇಶ) : ಯುಪಿ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಗೋರಖ್‌ಪುರ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಬಿಹಾರದ ಸಾಮಾಜಿಕ ಕಾರ್ಯಕರ್ತರೊಬ್ಬರು ಘೋಷಿಸಿದ್ದಾರೆ.
ಬಿಹಾರದ ಮುಜಾಫರ್‌ಪುರದ ಸಾಮಾಜಿಕ ಕಾರ್ಯಕರ್ತ ತಮನ್ನಾ ಹಶ್ಮಿ ಅವರು ಸಿಎಂ ಯೋಗಿ ವಿರುದ್ಧ ಕಣಕ್ಕಿಳಿಯಲಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಒಂದು ವರ್ಗವನ್ನು ಗುರಿಯಾಗಿಸಿಕೊಂಡು ಯುಪಿ ಸಿಎಂ ಬೆದರಿಸಲು ಪ್ರಯತ್ನಿಸುತ್ತಾ ಬಂದಿದ್ದಾರೆ. ಹೀಗಾಗಿ, ಯೋಗಿ ಎಲ್ಲಿಂದ ಸ್ಪರ್ಧಿಸಿದರೂ ಸೋಲುತ್ತಾರೆ ಎಂದು ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ: 'ಯೋಗಿ ಗೋರಖ್ಪುರ್ದಲ್ಲೇ ಇರಬೇಕು' ಅಲ್ಲೇ ಇರಿ ಎಂದು ಸಿಎಂ ಆದಿತ್ಯನಾಥ್ ಕಾಲೆಳೆದ ಅಖಿಲೇಶ್
ಈ ಬಾರಿ ಸಿಎಂ ಯೋಗಿ ಆದಿತ್ಯನಾಥ್ ಅವರು ಗೋರಖ್‌ಪುರದಿಂದ ಸ್ಪರ್ಧಿಸುತ್ತಿದ್ದಾರೆ. ಹಾಗಾಗಿ, ನಾನು ಆ ಕ್ಷೇತ್ರದಿಂದಲೇ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಎಲ್ಲಾ ಶಕ್ತಿಯೊಂದಿಗೆ ಚುನಾವಣೆಯಲ್ಲಿ ಹೋರಾಡಿ ಗೆಲ್ಲುತ್ತೇನೆ. ನನಗೆ ಗೋರಖ್‌ಪುರದ ಜನರ ಮೇಲೆ ಸಂಪೂರ್ಣ ನಂಬಿಕೆಯಿದೆ.
ನಾನು ಧರ್ಮದ ರಾಜಕಾರಣ ಮಾಡಲು ಹೋಗುವುದಿಲ್ಲ. ಬದಲಾಗಿ ದಬ್ಬಾಳಿಕೆ ನಡೆಸುವವರ ವಿರುದ್ಧ ಧ್ವನಿ ಎತ್ತಲು ಹೊರಟಿದ್ದೇನೆ. ಅವರನ್ನು ಬೇರುಸಹಿತ ಕಿತ್ತು ಹಾಕುವುದು ನನ್ನ ಗುರಿ ಎಂದು ತಮನ್ನಾ ಹಶ್ಮಿ ಹೇಳಿದ್ದಾರೆ.