ನವದೆಹಲಿ: ಇಂದು 'ಭಾರತ ರತ್ನ' ಮಾಜಿ ಪ್ರಧಾನಿ, ದಿವಂಗತ ರಾಜೀವ್ ಗಾಂಧಿ ಅವರ 77ನೇ ಜನ್ಮದಿನಾಚರಣೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿರುವ ರಾಜೀವ್ ಗಾಂಧಿ ಸಮಾಧಿ ವೀರ್ ಭೂಮಿಗೆ ತೆರಳಿದ ಕಾಂಗ್ರೆಸ್ ನಾಯಕರು ಗೌರವ ನಮನ ಸಲ್ಲಿಸಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಂದೆಯ ಸಮಾಧಿಗೆ ಪುಷ್ಪಾರ್ಚನೆ ಮಾಡಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಪಕ್ಷದ ಹಿರಿಯ ನಾಯಕರಾದ ಗುಲಾಂ ನಬಿ ಆಜಾದ್, ಅಧೀರ್ ರಂಜನ್ ಚೌಧರಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಪ್ರಧಾನಿ ಮೋದಿ ಟ್ವೀಟ್
-
Tributes to our former PM Shri Rajiv Gandhi Ji on his birth anniversary.
— Narendra Modi (@narendramodi) August 20, 2021 " class="align-text-top noRightClick twitterSection" data="
">Tributes to our former PM Shri Rajiv Gandhi Ji on his birth anniversary.
— Narendra Modi (@narendramodi) August 20, 2021Tributes to our former PM Shri Rajiv Gandhi Ji on his birth anniversary.
— Narendra Modi (@narendramodi) August 20, 2021
ರಾಜೀವ್ ಗಾಂಧಿ 1984 ರಿಂದ 1989ರವರೆಗೆ ದೇಶದ ಪ್ರಧಾನಿಯಾಗಿ ಕಾರ್ಯನಿರ್ವಹಿಸಿದ್ದರು. ಆಗಸ್ಟ್ 20, 1944ರಲ್ಲಿ ಇವರು ಜನಿಸಿದ್ದರು. 40ರ ವಯಸ್ಸಿನಲ್ಲಿ ರಾಜೀವ್ ಗಾಂಧಿ ಪ್ರಧಾನಿ ಹುದ್ದೆಗೇರಿದ್ದು ಇಲ್ಲಿ ಗಮನಾರ್ಹ.
1991ರಲ್ಲಿ ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಎಲ್‌ಟಿಟಿಇ(LTTE) ಇವರನ್ನು ಮಹಿಳಾ ಆತ್ಮಹತ್ಯಾ ಬಾಂಬರ್ ಮೂಲಕ ಹತ್ಯೆಗೈದಿತ್ತು.