ನವದೆಹಲಿ: ಪಂಚ ರಾಜ್ಯಗಳ ಚುನಾವಣೆಯಲ್ಲಿ ಶತಾಯ ಗತಾಯ ಗೆಲ್ಲಲೇಬೇಕೆಂದು ಪಣ ತೊಟ್ಟಿರುವ ಬಿಜೆಪಿ ಅಳಿದು ತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಿದ್ದು, ಉತ್ತರಾಖಂಡ್ ವಿಧಾನಸಭೆ ಚುನಾವಣೆಗೆ 59 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.
ಉತ್ತರಾಖಂಡ್‌ನಲ್ಲಿ ಒಟ್ಟು 70 ಕ್ಷೇತ್ರಗಳಿದ್ದು, 11 ಕ್ಷೇತ್ರಗಳಿಗೆ ಅಭ್ಯರ್ಥಿ ಹೆಸರು ಘೋಷಿಸಿಲ್ಲ. ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರು ಖತಿಮಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹಾಗೂ ಚುನಾವಣಾ ಉಸ್ತುವಾರಿ ಪ್ರಹ್ಲಾದ್ ಜೋಶಿ ಇಂದು ಪಟ್ಟಿ ಬಿಡುಗಡೆ ಮಾಡಿದ್ದಾರೆ.
ಗೋವಾದಲ್ಲೂ 34 ಅಭ್ಯರ್ಥಿಗಳ ಪಟ್ಟಿ ರಿಲೀಸ್..
ಇತ್ತ ಗೋವಾದಲ್ಲೂ ಭಾರತೀಯ ಜನತಾ ಪಕ್ಷ 34 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಿದೆ. ಸಿಎಂ ಪ್ರಮೋದ್ ಸಾವಂತ್ ಸಂಕ್ವೆಲಿಮ್‌ನಿಂದ ಹಾಗೂ ಉಪ ಮುಖ್ಯಮಂತ್ರಿ ಮನೋಹರ್ ಅಜಗಾಂವ್ಕರ್ ಮಾರ್ಗೋವ್‌ನಿಂದ ಸ್ಪರ್ಧಿಸಲಿದ್ದಾರೆ.
ಗೋವಾ ಚುನಾವಣೆ ಉಸ್ತುವಾರಿಗಳು ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಮತ್ತು ದೇವೇಂದ್ರ ಫಡ್ನವೀಸ್ ಅವರು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ.
ಇದನ್ನೂ ಓದಿ: ಬಿಜೆಪಿ ಸೇರಿದ ಕೆಲವೇ ಗಂಟೆಗಳಲ್ಲಿ ಹೊಸ ಪೋಸ್ಟರ್ ರಿಲೀಸ್.. ರಾರಾಜಿಸಿದ ಅಪರ್ಣಾ ಯಾದವ್, ಸಂಘಮಿತ್ರ ಮೌರ್ಯ