ಚೆನ್ನೈ, ತಮಿಳುನಾಡು: ವಿಧಾನಸಭಾ ಚುನಾವಣೆಗೆ ತಮಿಳುನಾಡಿನಲ್ಲಿ ಎಲ್ಲಾ ಪಕ್ಷಗಳು ಕಸರತ್ತು ನಡೆಸುತ್ತಿವೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮಿಳುನಾಡಿನಲ್ಲಿ ವ್ಯಾಪಕ ಪ್ರಚಾರ ಮಾಡುತ್ತಿದ್ದು, ಜನಸಾಮಾನ್ಯರನ್ನು ಪಕ್ಷದೆಡೆಗೆ ಸೆಳೆಯಲು ಮುಂದಾಗಿದ್ದಾರೆ.
ಇದರ ಬೆನ್ನಲ್ಲೇ ತಮಿಳುನಾಡಿನ ಭಾರತೀಯ ಜನತಾ ಪಾರ್ಟಿ, ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು, ರಾಹುಲ್ ಗಾಂಧಿ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದು, ಅವರ ಚುನಾವಣಾ ಪ್ರಚಾರಕ್ಕೆ ತಡೆ ನೀಡಬೇಕೆಂದು ಮನವಿ ಮಾಡಿದೆ.
ಇದನ್ನೂ ಓದಿ: ಕಬ್ಬನ್ ಪಾರ್ಕ್ನಲ್ಲಿ ಹೊಸ ಕಟ್ಟಡ ನಿರ್ಮಿಸುತ್ತಿಲ್ಲ : ಹೈಕೋರ್ಟ್ಗೆ ಸರ್ಕಾರದ ಸ್ಪಷ್ಟನೆ
ಕೆಲವು ದಿನಗಳ ಹಿಂದೆ ರಾಹುಲ್ ಗಾಂಧಿ ಶಾಲೆಯೊಂದಕ್ಕೆ ಭೇಟಿ ನೀಡಿದ್ದು, ಅಲ್ಲಿ ಚುನಾವಣಾ ಪ್ರಚಾರ ನಡೆಸಿರುವುದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ತಮಿಳುನಾಡು ಬಿಜೆಪಿ ಪತ್ರದಲ್ಲಿ ಉಲ್ಲೇಖಿಸಿದೆ.
ಚುನಾವಣಾ ಆಯೋಗಕ್ಕೆ ಮನವಿ ಮಾಡಿರುವುದು ಮಾತ್ರವಲ್ಲದೇ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ದೂರು ದಾಖಲಿಸಿಕೊಳ್ಳಬೇಕೆಂದು ಪೊಲೀಸರಿಗೆ ಮನವಿ ಮಾಡಿದೆ.