ETV Bharat / bharat

ಕೋವಿಡ್‌ ವಿರುದ್ಧದ ದೇಶದ ಹೋರಾಟವನ್ನು ದುರ್ಬಲಗೊಳಿಸಬೇಡಿ: ಸೋನಿಯಾಗೆ ನಡ್ಡಾ ಪತ್ರ

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ ಪತ್ರ ಬರೆದಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ನಿಮ್ಮ ಪಕ್ಷದ ನಾಯಕರ ನಡವಳಿಕೆಯಿಂದ ಬೇಸರವಾಗಿದೆ. ಕೋವಿಡ್‌ ವಿರುದ್ಧದ ದೇಶದ ಹೋರಾಟವನ್ನು ದುರ್ಬಲಗೊಳಿಸಬೇಡಿ ಎಂದು ಮನವಿ ಮಾಡಿದ್ದಾರೆ.

BJP chief writes to Congress interim chief
ಸೋನಿಯಾಗೆ ನಡ್ಡಾ ಪತ್ರ
author img

By

Published : May 11, 2021, 1:24 PM IST

Updated : May 11, 2021, 1:29 PM IST

ನವದೆಹಲಿ: ಕಾಂಗ್ರೆಸ್​ ಪಕ್ಷದ ಕೆಲ ಹಿರಿಯ ಮುಖಂಡರು ಮಾಡುತ್ತಿರುವ ನಕಾರಾತ್ಮಕ ಕಾರ್ಯಗಳಿಂದ ಒಳ್ಳೆಯ ಕೆಲಸ ಮಾಡುತ್ತಿವವರಿಗೆ ಹಿನ್ನಡೆಯಾಗುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದಾರೆ.

ಇಂತಹ ಸಮಯದಲ್ಲಿ ಕಾಂಗ್ರೆಸ್ ನಡವಳಿಕೆಯಿಂದ ದುಃಖಿತರಾಗಿದ್ದೇವೆ, ಆದರೆ ಆಶ್ಚರ್ಯಗೊಂಡಿಲ್ಲ. ಜನರಿಗೆ ಸಹಾಯ ಮಾಡುವಲ್ಲಿ ನಿಮ್ಮ ಪಕ್ಷದ ಕೆಲವು ಸದಸ್ಯರು ಶ್ರಮಿಸುತ್ತಿರುವುದು ಶ್ಲಾಘನೀಯ. ಆದರೆ, ಪಕ್ಷದ ಕೆಲ ಹಿರಿಯ ಸದಸ್ಯರು ಹರಡುತ್ತಿರುವ ನಕಾರಾತ್ಮಕ ಸುದ್ದಿಗಳಿಂದ ಒಳ್ಳೆಯ ಕೆಲಸ ಮಾಡುವವರಿಗೆ ಹಿನ್ನಡೆಯಾಗುತ್ತಿದೆ. ಹಾಗಾಗಿ, ಕೋವಿಡ್‌ ವಿರುದ್ಧದ ದೇಶದ ಹೋರಾಟವನ್ನು ದುರ್ಬಲಗೊಳಿಸಬೇಡಿ ಎಂದು ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: "ನಾನು ಒಂದು ದಿನ ಸಿಎಂ ಆಗ್ತೀನಿ ಅಂತ ತಾಯಿಗೆ ಹೇಳು": ಭಾವಿ ಪತ್ನಿಗೆ ಮಾತು ಕೊಟ್ಟಿದ್ದರಂತೆ ಅಸ್ಸೋಂ ಸಿಎಂ

ಬಿಜೆಪಿ, ಎನ್‌ಡಿಎ ಅಧಿಕಾರದಲ್ಲಿರುವ ರಾಜ್ಯಗಳು ಕೋವಿಡ್ ಲಸಿಕೆಗಳನ್ನು ಉಚಿತವಾಗಿ ನೀಡುವ ಮೂಲಕ ಬಡವರು ಮತ್ತು ಹಿಂದುಳಿದವರಿಗೆ ಸಹಾಯ ಮಾಡುವ ಸಂಕಲ್ಪ ತೊಟ್ಟಿದೆ. ವಿವಿಧ ರಾಜ್ಯಗಳಲ್ಲಿ ಕಾಂಗ್ರೆಸ್ ಸರ್ಕಾರಗಳು ಸಹ ಬಡವರಿಗೆ ಉಚಿತವಾಗಿ ಲಸಿಕೆ ನೀಡಲಿದೆ ಎಂದು ನಾವು ಭಾವಿಸುತ್ತೇವೆ ಎಂದು ನಡ್ಡಾ ಹೇಳಿದ್ದಾರೆ.

ಭಾರತ ಕೋವಿಡ್ ವಿರುದ್ಧ ಧೈರ್ಯದಿಂದ ಹೋರಾಡುತ್ತಿರುವಾಗ ಕಾಂಗ್ರೆಸ್​ನ ಕೆಲವೊಂದು ಉನ್ನತ ನಾಯಕರು ಸುಳ್ಳು ಸುದ್ದಿಗಳ ಮೂಲಕ ಭಯ ಹುಟ್ಟಿಸಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ಧಾರೆ. ರಾಜಕೀಯ ಸಿದ್ದಾಂತದ ಮೇಲೆ ತಮ್ಮ ನಿಲುವುಗಳನ್ನು ವ್ಯಕ್ತಪಡಿಸುತ್ತಿದ್ದಾರೆ ಎಂದು ನಡ್ಡಾ ಬೇಸರ ವ್ಯಕ್ತಪಡಿಸಿದ್ದಾರೆ.

Last Updated : May 11, 2021, 1:29 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.