ETV Bharat / bharat

ಬಿಜೆಪಿ ಸಂಸ್ಥಾಪನಾ ದಿನ 2022: ಕಾರ್ಯಕರ್ತರು, ಶಾಸಕರ ಉದ್ದೇಶಿಸಿ ಪ್ರಧಾನಿ ಮೋದಿ ಮಾತು - ಪ್ರಧಾನಿ ನರೇಂದ್ರ ಮೋದಿ ಭಾಷಣ

BJP Foundation Day 2022: ಭಾರತೀಯ ಜನತಾ ಪಕ್ಷ ತನ್ನ 42ನೇ ಸಂಸ್ಥಾಪನಾ ದಿನವನ್ನು ಆಚರಿಸಲು ವಿಸ್ತಾರವಾದ ಯೋಜನೆಗಳನ್ನು ಮಾಡಿದೆ. ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಪಕ್ಷದ ಪ್ರಧಾನ ಕಚೇರಿಯಲ್ಲಿ ಧ್ವಜಾರೋಹಣ ಮಾಡಲಿದ್ದಾರೆ. ಮತ್ತು ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಮತ್ತು ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಲಿದ್ದಾರೆ.

BJP Foundation Day 2022
ಪ್ರಧಾನಿ ನರೇಂದ್ರ ಮೋದಿ
author img

By

Published : Apr 6, 2022, 8:42 AM IST

ನವದೆಹಲಿ: ಪಕ್ಷದ ಸಂಸ್ಥಾಪನಾ ದಿನದ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಬುಧವಾರ ಬಿಜೆಪಿ ಕಾರ್ಯಕರ್ತರು, ಸಚಿವರು, ಸಂಸದರು ಮತ್ತು ಶಾಸಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಿಜೆಪಿ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಪಕ್ಷದ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ಏಪ್ರಿಲ್ 7 ರಿಂದ ಏಪ್ರಿಲ್ 20 ರವರೆಗೆ ಪಕ್ಷವು ದೇಶಾದ್ಯಂತ ಸಾಮಾಜಿಕ ನ್ಯಾಯದ ವಿಷಯದ ಕುರಿತು ಕಾರ್ಯಕ್ರಮಗಳನ್ನು ಆಯೋಜಿಸಲಿದೆ ಎಂದು ಹೇಳಿದರು.

  • भारतीय जनता पार्टी के स्थापना दिवस पर पार्टी के लिए अपना सर्वस्व अर्पण करने वाले सभी महापुरुषों को श्रद्धापूर्वक नमन और करोड़ों कार्यकर्ताओं को हार्दिक शुभकामनाएं। #SthapnaDiwas pic.twitter.com/I6LYiYUf3I

    — BJP (@BJP4India) April 6, 2022 " class="align-text-top noRightClick twitterSection" data=" ">

ಈ ಅಭಿಯಾನದ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಮೋದಿ ಸರ್ಕಾರದ ಜನಕಲ್ಯಾಣ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಲಿದ್ದಾರೆ. ಏಪ್ರಿಲ್ 14 ರಂದು ಬಿಆರ್ ಅಂಬೇಡ್ಕರ್ ಅವರ ಜನ್ಮದಿನದ ನಿಮಿತ್ತ ಪ್ರಚಾರದ ಸಮಯದಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಸಿಂಗ್ ಹೇಳಿದರು.

ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಪಕ್ಷದ ಪ್ರಧಾನ ಕಚೇರಿಯಲ್ಲಿ ಧ್ವಜಾರೋಹಣ ಮಾಡಲಿದ್ದಾರೆ ಮತ್ತು ಡಾ ಶ್ಯಾಮ ಪ್ರಸಾದ್ ಮುಖರ್ಜಿ ಮತ್ತು ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಲಿದ್ದಾರೆ. ಪಕ್ಷದ ಕೇಂದ್ರ ಕಚೇರಿಯಲ್ಲಿ ರಕ್ತದಾನ ಶಿಬಿರವನ್ನೂ ಆಯೋಜಿಸಲಾಗುವುದು. ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಳಗ್ಗೆ 10 ಗಂಟೆಗೆ ದೇಶಾದ್ಯಂತ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ.

ಈ ಮಧ್ಯೆ, ಬಿಜೆಪಿ ಮುಖ್ಯಸ್ಥ ನಡ್ಡಾ ಬೆಳಗ್ಗೆ 11 ಗಂಟೆಗೆ ಕರೋಲ್ ಬಾಗ್‌ನಲ್ಲಿ ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ. ಪಕ್ಷವು ಏಪ್ರಿಲ್ 7 ಮತ್ತು 20 ರ ನಡುವೆ "ಸಾಮಾಜಿಕ ನ್ಯಾಯ ಪಾಕ್ಷಿಕ" ಕಾರ್ಯಕ್ರಮ ಆಯೋಜಿಸುತ್ತದೆ. ಅಲ್ಲದೇ ನಡ್ಡಾ ಅವರು 13 ಮಿಷನ್‌ಗಳ ಮುಖ್ಯಸ್ಥರೊಂದಿಗೆ ಸಂವಾದ ನಡೆಸಲಿದ್ದಾರೆ. ಈ ಸಂವಾದವು ಪಕ್ಷದ ಬಗ್ಗೆ ತಿಳಿದುಕೊಳ್ಳುವುದು ಮತ್ತು ಬಿಜೆಪಿಯ ಬಗ್ಗೆ ವಿದೇಶಿ ರಾಯಭಾರಿಗಳಿಗೆ ಮಾಹಿತಿ ನೀಡುವ ಉದ್ದೇಶ ಹೊಂದಿದೆ.

ರಾಯಭಾರಿಗಳೊಂದಿಗೆ ಸಂವಾದ: ವಿವಿಧ ದೇಶಗಳ ರಾಯಭಾರಿಗಳು ಬುಧವಾರ ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಗೆ ಭೇಟಿ ನೀಡಲಿದ್ದಾರೆ. ವಿದೇಶಾಂಗ ನೀತಿಯ ಯಾವುದೇ ಅಂಶವು ಸಂವಾದದ ಭಾಗವಾಗಿರುವುದಿಲ್ಲ ನಡ್ಡಾ ತಿಳಿಸಿದ್ದಾರೆ. ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷದ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ರಾಯಭಾರಿಗಳು ಬಿಜೆಪಿ ಮುಖ್ಯಸ್ಥ ನಡ್ಡಾ ಅವರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಇಲಾಖೆ ವಿಜಯ್ ಚೌತೈವಾಲೆ ಹೇಳಿದ್ದಾರೆ.

ಇಂದು ಸಂಜೆ 4 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಫ್ರಾನ್ಸ್, ಯುರೋಪಿಯನ್ ಯೂನಿಯನ್ (ಇಯು) ನಿಯೋಗ, ಪೋರ್ಚುಗಲ್, ಸ್ವಿಟ್ಜರ್ಲೆಂಡ್, ಪೋಲೆಂಡ್, ರೊಮೇನಿಯಾ, ಸ್ಲೋವಾಕಿಯಾ, ಇಟಲಿ, ಹಂಗೇರಿ, ವಿಯೆಟ್ನಾಂ, ನಾರ್ವೆ ಮತ್ತು ಬಾಂಗ್ಲಾದೇಶ ಮತ್ತು ಸಿಂಗಾಪುರದ ಹೈಕಮಿಷನರ್‌ಗಳು ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ಸಂಸದೀಯ ಸಭೆ ನಡೆಸಿದ ಮೋದಿ : ನಾಯಕರಿಗೆ ನೀಡಿದ ಸೂಚನೆಗಳಿವು!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.