ETV Bharat / bharat

ಕೊಯಮತ್ತೂರು ಕಾರು ಸ್ಫೋಟ ಪ್ರಕರಣ: ಅ. 31ರಂದು ಬಂದ್​ಗೆ ಕರೆ ನೀಡಿದ ಬಿಜೆಪಿ, ಹಿಂದೂ ಸಂಘಟನೆಗಳು - ಕಾರಿನೊಳಗೆ ಗ್ಯಾಸ್ ಸಿಲಿಂಡರ್ ಸ್ಫೋಟ

ಅಕ್ಟೋಬರ್ 23 ರಂದು ತಮಿಳುನಾಡಿನ ಕೊಯಮತ್ತೂರಿನ ಕೊಟ್ಟೈ ಈಶ್ವರನ್ ದೇವಸ್ಥಾನದ ಬಳಿ ಕಾರಿನೊಳಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಒಬ್ಬ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಗಮನ ಸೆಳೆಯಲು ಬಿಜೆಪಿ, ಹಿಂದೂ ಸಂಘಟನೆಗಳು ಅಕ್ಟೋಬರ್ 31 ರಂದು ಬೆಳಗ್ಗೆಯಿಂದ ಸಂಜೆವರೆಗೆ ಬಂದ್‌ಗೆ ಕರೆ ನೀಡಿವೆ.

bandh
ಕೊಯಮತ್ತೂರು ಕಾರು ಸ್ಫೋಟ ಪ್ರಕರಣ
author img

By

Published : Oct 27, 2022, 10:00 AM IST

ಕೊಯಮತ್ತೂರು: ಕಾರಿಗೆ ಅಳವಡಿಸಿದ್ದ ಎಲ್‌ಪಿಜಿ ಸಿಲಿಂಡರ್‌ ಸ್ಫೋಟಗೊಂಡು ವ್ಯಕ್ತಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಬಿಜೆಪಿ ಮತ್ತು ಕೆಲ ಹಿಂದೂ ಸಂಘಟನೆಗಳು ಅಕ್ಟೋಬರ್ 31 ರಂದು ಕೊಯಮತ್ತೂರಿನಲ್ಲಿ 12 ಗಂಟೆಗಳ ಕಾಲ ಬಂದ್‌ಗೆ ಕರೆ ನೀಡಿವೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ನಾಯಕ ಸಿಪಿ ರಾಧಾಕೃಷ್ಣನ್, 1998ರಲ್ಲಿ ಸರಣಿ ಸ್ಫೋಟಕ್ಕೆ ಸಾಕ್ಷಿಯಾಗಿದ್ದ ನಗರದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಭಾರಿ ಅನಾಹುತ ತಪ್ಪಿದೆ. ಈ ಹಿಂದೆ ಜಿಲ್ಲೆಯಲ್ಲಿ ಬಿಜೆಪಿ ನಾಯಕರ ಕಚೇರಿ ಮತ್ತು ಮನೆಗಳ ಮೇಲೆ ಪೆಟ್ರೋಲ್ ಬಾಂಬ್ ಎಸೆದ ಘಟನೆಗಳನ್ನು ಆಡಳಿತಾರೂಢ ಡಿಎಂಕೆ ಪಕ್ಷ ಗಂಭೀರವಾಗಿ ತೆಗೆದುಕೊಂಡಿಲ್ಲ ಎಂದು ಆರೋಪಿಸಿದ ಅವರು, ಸರ್ಕಾರದ ಗಮನ ಸೆಳೆಯಲು ಬಿಜೆಪಿ ಮತ್ತು ಹಿಂದೂ ಮುನ್ನಾನಿಯಂತಹ ಸಮಾನ ಮನಸ್ಕ ಸಂಘಟನೆಗಳು ಅಕ್ಟೋಬರ್ 31 ರಂದು ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ಬಂದ್ ಆಚರಿಸಲು ನಿರ್ಧರಿಸಿವೆ ಎಂದರು.

ಇದನ್ನೂ ಓದಿ: ಕೊಯಮತ್ತೂರು ಸಿಲಿಂಡರ್ ಸ್ಪೋಟ ಪ್ರಕರಣ: ಎನ್ಐಎ ತನಿಖೆಗೆ ಸ್ಟಾಲಿನ್ ಶಿಫಾರಸು

ಏನಿದು ಘಟನೆ: ಅಕ್ಟೋಬರ್ 23ರಂದು ತಮಿಳುನಾಡಿನ ಕೊಯಮತ್ತೂರಿನ ಕೊಟ್ಟೈ ಈಶ್ವರನ್ ದೇವಸ್ಥಾನದ ಬಳಿ ಕಾರಿನೊಳಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು 25 ವರ್ಷದ ವ್ಯಕ್ತಿಯೊಬ್ಬರು ಸುಟ್ಟು ಕರಕಲಾದ ಘಟನೆ ನಡೆದಿತ್ತು. ಈ ಘಟನೆಯು ಸ್ಥಳದಲ್ಲಿ ಆತಂಕದ ವಾತಾವರಣ ಉಂಟುಮಾಡಿದ ನಂತರ ತಕ್ಷಣ ಪೊಲೀಸ್ ತಂಡ ಸ್ಥಳಕ್ಕೆ ಭೇಟಿ ನೀಡಿ, ಹೆಚ್ಚಿನ ಸಂಖ್ಯೆಯಲ್ಲಿ ಸಿಬ್ಬಂದಿ ನಿಯೋಜಿಸಿತ್ತು.

ವ್ಯಕ್ತಿಯ ಸಾವಿನ ತನಿಖೆಯ ಸಂದರ್ಭದಲ್ಲಿ ಪೊಲೀಸರು ಇದರ ಹಿಂದೆ ಭಯೋತ್ಪಾದಕ ನಂಟು ಇದೆ ಎಂಬ ಅಂಶ ಬಯಲಿಗೆಳೆದ ನಂತರ ಈ ಕಾರು ಸ್ಫೋಟ ಪ್ರಕರಣ ದೊಡ್ಡ ತಿರುವು ಪಡೆದುಕೊಂಡಿದೆ.

ಇದನ್ನೂ ಓದಿ: ಕೊಯಮತ್ತೂರು ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಐವರ ಬಂಧನ: ಇದು ಆತ್ಮಹತ್ಯಾ ದಾಳಿಯೇ?

ETV Bharat Logo

Copyright © 2025 Ushodaya Enterprises Pvt. Ltd., All Rights Reserved.