ETV Bharat / bharat

BJP Meeting: ಪಂಚ ರಾಜ್ಯಗಳ ಚುನಾವಣೆ: ಇಂದು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ- ಮೋದಿ, ಅಮಿತ್​ ಶಾ ಭಾಗಿ

Upcoming Assembly Polls: ಮುಂಬರುವ ಪಂಚ ರಾಜ್ಯಗಳ ಚುನಾವಣೆಯ ಸಿದ್ಧತೆಯಲ್ಲಿರುವ ಬಿಜೆಪಿ ಇಂದು ಕೇಂದ್ರ ಚುನಾವಣಾ ಸಮಿತಿಯ ಸಭೆ ಕರೆದಿದೆ. ಪ್ರತಿಪಕ್ಷ ಸ್ಥಾನದಲ್ಲಿರುವ ತೆಲಂಗಾಣ, ಛತ್ತೀಸ್​ಗಢ, ರಾಜಸ್ಥಾನದಲ್ಲಿ ಗೆಲುವು ಸಾಧಿಸುವ ಬಗ್ಗೆ ಮಹತ್ವದ ಚರ್ಚೆ ನಡೆಯಲಿದೆ.

ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ
ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ
author img

By

Published : Aug 16, 2023, 4:22 PM IST

ನವದೆಹಲಿ: ಈ ವರ್ಷಾಂತ್ಯದಲ್ಲಿ ನಡೆಯಲಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗೆ ತಯಾರಿ ನಡೆಸುವ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಕೇಂದ್ರ ಚುನಾವಣಾ ಸಮಿತಿಯ ಮಹತ್ವದ ಸಭೆಯನ್ನು ದೆಹಲಿಯ ಕಚೇರಿಯಲ್ಲಿ ಇಂದು ಕರೆದಿದೆ. ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಕೇಂದ್ರ ಚುನಾವಣಾ ಸಮಿತಿಯ ಸದಸ್ಯರೂ ಭಾಗವಹಿಸಲಿದ್ದಾರೆ.

ಕೇಂದ್ರ ಚುನಾವಣಾ ಸಮಿತಿಯು ಬಿಜೆಪಿಯ ನೀತಿ-ನಿರ್ಧರಿತ ಅಂಗವಾಗಿದೆ. ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಮತ್ತು ಮುಂಬರುವ ಚುನಾವಣೆಗಳಿಗೆ ಕಾರ್ಯತಂತ್ರ ರೂಪಿಸುವ ನಿರ್ಣಾಯಕ ಪಾತ್ರ ವಹಿಸುತ್ತದೆ. ಚುನಾವಣೆಯ ಅಧಿಕೃತ ಘೋಷಣೆಗೆ ಮುಂಚಿತವಾಗಿ ಸಮಿತಿಯು ಸಭೆ ಸೇರುತ್ತದೆ. ಚುನಾವಣೆಗಳಲ್ಲಿ ಪಕ್ಷ ಯಶಸ್ಸು ಸಾಧಿಸುವ ನಿಟ್ಟಿನಲ್ಲಿ ಚರ್ಚೆ ನಡೆಸಲಿದೆ. ಜೊತೆಗೆ, ಈಚೆಗೆ ಕರ್ನಾಟಕ ವಿಧಾನಸಭೆ ಚುನಾವಣೆಯ ಸೋಲಿನ ಬಗ್ಗೆಯೂ ಪರಾಮರ್ಶೆ ನಡೆಯಲಿದೆ ಎಂದೂ ತಿಳಿದುಬಂದಿದೆ.

ಯಾವ ರಾಜ್ಯಗಳಲ್ಲಿ ಚುನಾವಣೆ?: ಮಿಜೋರಾಂ, ಛತ್ತೀಸ್‌ಗಢ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ವಿಧಾನಸಭೆಗಳಿಗೆ ಈ ವರ್ಷಾಂತ್ಯದಲ್ಲಿ ಚುನಾವಣೆ ನಡೆಯಲಿದೆ. ಈ ರಾಜ್ಯಗಳಲ್ಲಿ ಬಿಜೆಪಿ ಹಲವು ಪಕ್ಷಗಳ ವಿರುದ್ಧ ಕಠಿಣ ಹೋರಾಟ ನಡೆಸಬೇಕಿದೆ. ಈ ಪೈಕಿ ವಿರೋಧ ಪ್ರತಿಪಕ್ಷವಾಗಿ ಕೆಲಸ ಮಾಡುತ್ತಿರುವ ಛತ್ತೀಸ್‌ಗಢ, ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಪಕ್ಷ ಈ ಬಾರಿ ಗೆಲುವು ಸಾಧಿಸುವ ಗುರಿ ಹೊಂದಿದೆ.

ರಾಜಸ್ಥಾನದಲ್ಲಿ ಬಿಜೆಪಿ ಅಲ್ಪ ಅಂತರದಲ್ಲಿ ಗೆದ್ದಿರುವ ಅಥವಾ ಗೆಲುವು ಸಾಧಿಸದ ಕ್ಷೇತ್ರಗಳತ್ತ ಹೆಚ್ಚಿನ ಗಮನ ಹರಿಸಲಾಗಿದೆ. ತಂತ್ರ ರೂಪಿಸಿ ಉತ್ತಮ ಪ್ರದರ್ಶನ ನೀಡುವ ಬಗ್ಗೆ ಪಕ್ಷ ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಇತ್ತ ಮಿಜೋರಾಂನಲ್ಲಿ ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಬಿಜೆಪಿ ಮತ್ತು ಅದರ ಪಾಲುದಾರ ಪಕ್ಷವಾದ ಮಿಜೋ ನ್ಯಾಷನಲ್​ ಫ್ರಂಟ್​(MNF) ನಡುವಿನ ಮೈತ್ರಿ ಹದಗೆಡುವಂತೆ ಮಾಡಿದೆ. ಹೀಗಾಗಿ ರಾಜ್ಯದಲ್ಲಿ ಏಕಾಂಗಿ ಹೋರಾಟ ನಡೆಸುವ ಸಾಧ್ಯತೆ ಬಗ್ಗೆ ಚರ್ಚೆ ನಡೆಯಲಿದೆ.

ಮಧ್ಯಪ್ರದೇಶದಲ್ಲಿ ಅಧಿಕಾರ ಉಳಿಸಿಕೊಳ್ಳಬೇಕಿದೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್​ ಸೇರಿದಂತೆ ವಿಕಕ್ಷಗಳ 'ಇಂಡಿಯಾ ಒಕ್ಕೂಟ'ದ ಎದುರು ನಿಕಟ ಪೈಪೋಟಿ ಇರಲಿದ್ದು, ಇವೆಲ್ಲವನ್ನೂ ಮೆಟ್ಟಿನಿಂತು ಪಕ್ಷ ಮತ್ತೆ ಅಧಿಕಾರ ಹಿಡಿಯಬೇಕಿದೆ. ಪಕ್ಷ ದುರ್ಬಲವಾಗಿರುವ ಕ್ಷೇತ್ರಗಳಲ್ಲಿ ಸಭೆಯು ಗಮನ ಸೆಳೆಯಲಿದೆ. ಈ ಕ್ಷೇತ್ರಗಳಿಗೆ ಸೂಕ್ತ ಅಭ್ಯರ್ಥಿಗಳನ್ನು ಮುಂಚಿತವಾಗಿಯೇ ಗುರುತಿಸಿ, ಅವರಿಗೆ ತಯಾರಿ ಮತ್ತು ಕಾರ್ಯತಂತ್ರವನ್ನು ರೂಪಿಸಲು ಸಾಕಷ್ಟು ಸಮಯವನ್ನು ನೀಡಲಿದೆ ಎಂದು ತಿಳಿದುಬಂದಿದೆ.

ಸಭೆಯಲ್ಲಿ ಪ್ರತಿ ರಾಜ್ಯಗಳಲ್ಲಿನ ವಿಪಕ್ಷಗಳ ಕಠಿಣ ಪೈಪೋಟಿ, ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ ನೀಡಿದ ಭರವಸೆಗಳನ್ನು ಎದುರಿಸುವ ಕಾರ್ಯತಂತ್ರದ ಬಗ್ಗೆ ನಿರ್ಧಾರವಾಗಲಿದೆ.

ಇದನ್ನೂ ಓದಿ: Rahul Gandhi: ಅಕ್ಟೋಬರ್​ನಲ್ಲಿ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ 2.0: ಗುಜರಾತ್​ TO ಮೇಘಾಲಯ ಪಾದಯಾತ್ರೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.