ETV Bharat / bharat

ಇಂದು ಮಹತ್ವದ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ : ದೆಹಲಿಯಲ್ಲಿ ಮಾಜಿ ಸಿಎಂ ಬಿಎಸ್​​ವೈ

ಇಂದು ಸಂಜೆ ಐದು ಗಂಟೆಗೆ ನಡೆಯಲಿರುವ ಕೇಂದ್ರ ಸಮಿತಿ ಸಭೆಯಲ್ಲಿ ಕರ್ನಾಟಕದ ಮಾಜಿ ಸಿಎಂ, ಬಿಎಸ್​​​ ಯಡಿಯೂರಪ್ಪ ಅವರು ಪಾಲ್ಗೊಳ್ಳಲಿದ್ದಾರೆ. ಈ ಸಂಬಂಧ ಅವರು ಈಗಾಗಲೇ ದೆಹಲಿ ತಲುಪಿದ್ದಾರೆ.

ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ
ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ
author img

By ETV Bharat Karnataka Team

Published : Sep 13, 2023, 4:21 PM IST

ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ

ನವದೆಹಲಿ : ಇಂದು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ ಸಿಇಸಿ ನಡೆಯಲಿದೆ. ಈ ಮಹತ್ವದ ಸಭೆಯಲ್ಲಿ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್​ಗಢ ಸೇರಿದಂತೆ ಪಂಚರಾಜ್ಯಗಳ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಈ ಅಂಗವಾಗಿ ಇಂದು ನಡೆಯಲಿರುವ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಸಿಇಸಿ ಸಮಿತಿ ಸದಸ್ಯರಾಗಿರುವ ಮಾಜಿ ಸಿಎಂ ಬಿ ಎಸ್​ ಯಡಿಯೂರಪ್ಪ ಅವರು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ನಡುವೆ ರಾಜ್ಯದಲ್ಲಿ ಈಗ ಬಿಜೆಪಿ- ಜೆಡಿಎಸ್​ ಮೈತ್ರಿ ವಿಚಾರವೂ ಭರ್ಜರಿಯಾಗಿಯೇ ಸದ್ದು ಮಾಡುತ್ತಿದೆ. ಈ ಬಗ್ಗೆ ಮೊದಲ ಬಾರಿಗೆ ಮಾಜಿ ಸಿಎಂ ಯಡಿಯೂರಪ್ಪ ಬಾಯ್ಬಿಟ್ಟಿದ್ದರು. ಮಾಜಿ ಪ್ರಧಾನಿ ದೇವೇಗೌಡ ಗೃಹ ಸಚಿವ ಅಮಿತ್​ ಶಾ ಜತೆ ಮೈತ್ರಿ ಮಾತುಕತೆ ನಡೆಸಿದ್ದಾರೆ ಎಂದು ಬಿಎಸ್​ವೈ ಹೇಳಿದ್ದರು.

ಆ ಬಳಿಕ ಮಾಜಿ ಪ್ರಧಾನಿ ದೇವೇಗೌಡ ಸಹ ಪ್ರಧಾನಿ ಜತೆ ಮೈತ್ರಿ ವಿಚಾರವಾಗಿ ಮಾತನಾಡಿದ್ದೆ ಎಂದು ಬಹಿರಂಗ ಪಡಿಸಿದ್ದರು. ಆ ಬಳಿಕ ಜೆಡಿಎಸ್​ ಶಾಸಕರು, ಸಂಸದರು ಹಾಗೂ ನಾಯಕರ ಸಭೆ ನಡೆಸಿ ಅಭಿಪ್ರಾಯ ಕೂಡ ಸಂಗ್ರಹಿಸಿದ್ದರು. ಅತ್ತ ಬಿಜೆಪಿ ನಾಯಕರು ಮಂಗಳವಾರ ಬಿಜೆಪಿ ಕಚೇರಿಯಲ್ಲಿ ಸಭೆ ಸೇರಿ ಮೈತ್ರಿ ಸೇರಿದಂತೆ ಕರ್ನಾಟಕ ಚುನಾವಣೆ ಬಗ್ಗೆ ಚರ್ಚೆ ನಡೆಸಿದ್ದರು. ಈ ಸಭೆ ಬಳಿಕ ಮಾತನಾಡಿದ್ದ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ, ನಾಳೆ ದೆಹಲಿಗೆ ತೆರಳುತ್ತಿದ್ದು, ಅಲ್ಲಿ ಎಲ್ಲ ನಾಯಕರನ್ನು ಭೇಟಿ ಮಾಡುತ್ತೇನೆ. ಚುನಾವಣಾ ಮಂಡಳಿ ಸಭೆಯಲ್ಲಿ ಭಾಗವಹಿಸುತ್ತೇನೆ ಎಂದು ಹೇಳಿದ್ದರು.

ಅದರಂತೆ ಇಂದು ಮಾಜಿ ಸಿಎಂ ಯಡಿಯೂರಪ್ಪ ದೆಹಲಿಗೆ ಭೇಟಿ ನೀಡಿದ್ದಾರೆ. ದೆಹಲಿಗೆ ತಲುಪಿದ ಬಳಿಕ ಮಾತನಾಡಿರುವ ಅವರು, ಇಂದು 5 ಗಂಟೆಗೆ ಸಭೆ ನಡೆಯಲಿದೆ. ಪ್ರಧಾನಿ ಯಾವ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಕಾದು ನೋಡೋಣ. ಸಾಕಷ್ಟು ವಿಚಾರಗಳು ಚರ್ಚೆಯಾಗಿದೆ ಎಂದಿದ್ದಾರೆ. ಅಲ್ಲದೇ ನಾನು ಜೆಪಿ ನಡ್ಡಾ ಅವರನ್ನು ಭೇಟಿಯಾಗಲಿದ್ದೇನೆ ಎಂದು ತಿಳಿಸಿದ ಅವರು, ಇಂಡಿಯಾ ಒಕ್ಕೂಟದ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದರು.

ಈ ಸಭೆಯು ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆಯಲಿದೆ. ಮಧ್ಯಪ್ರದೇಶ ಹಾಗೂ ಛತ್ತೀಸ್​ಘಡದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಬಗ್ಗೆ ಚರ್ಚೆ ನಡೆಯಲಿದೆ. ಪಕ್ಷದ ಅಭ್ಯರ್ಥಿಗಳ ಅಂತಿಮಪಟ್ಟಿಯನ್ನು ಇಂದು ಬಿಡುಗಡೆಗೊಳಿಸುವ ಸಾಧ್ಯತೆ ಇದೆ. ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದು, ಪಕ್ಷದ ಮುಖ್ಯಸ್ಥ ಜೆ ಪಿ ನಡ್ಡಾ, ಗೃಹ ಸಚಿವ ಅಮಿತ್ ಶಾ ಹಾಗೂ ಸಮಿತಿಯ ಇತರೆ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂಬುದು ತಿಳಿದುಬಂದಿದೆ.

ಇದನ್ನೂ ಓದಿ: 'ರಾಜ್ಯದ್ಯಂತ ಮುಂದಿನ ಹೋರಾಟದ ಬಗ್ಗೆ ತೀರ್ಮಾನ, ನಾಳೆ ದೆಹಲಿಗೆ ತೆರಳಿ ಮೈತ್ರಿ ಕುರಿತು ಚರ್ಚೆ': ಮಾಜಿ ಸಿಎಂ ಯಡಿಯೂರಪ್ಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.