ಕೋಲ್ಕತಾ (ಪಶ್ಚಿಮ ಬಂಗಾಳ): ತನ್ನ ಮೇಲೆ ಸುಳ್ಳು ಆರೋಪ ಹೊರಿಸಲಾಗಿದೆ, ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಬೇಕೆಂದು ಕೊಕೇನ್ ಹೊಂದಿದ್ದ ಆರೋಪದ ಮೇಲೆ ಬಂಧಿಸಲ್ಪಟ್ಟಿರುವ ಬಿಜೆಪಿ ಯುವ ನಾಯಕಿ ಪಮೆಲಾ ಗೋಸ್ವಾಮಿ ಆಗ್ರಹಿಸಿದ್ದಾರೆ.
ಪಮೆಲಾ ಅವರನ್ನು ಫೆ.25ರವರೆಗೆ ಪೊಲೀಸ್ ಕಸ್ಟಡಿಗೆ ವಹಿಸಿ ಎನ್ಡಿಪಿಎಸ್ ಕೋರ್ಟ್ ಆದೇಶ ಹೊರಡಿಸಿತು. ಆ ಬಳಿಕ ಕೋರ್ಟ್ನಿಂದ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳುವಾಗ ಗೋಸ್ವಾಮಿ ಕೂಗಾಡುತ್ತಾ, ಈ ಸಂಬಂಧ ಸಿಐಡಿ ತನಿಖೆ ಆಗಬೇಕು. ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ಬಿಜೆಪಿ ಉಸ್ತುವಾರಿ ಕೈಲಾಶ್ ವಿಜಯ್ವರ್ಗೀಯಾ ಅವರ ಆಪ್ತ ಬಿಜೆಪಿ ನಾಯಕ ರಾಕೇಶ್ ಸಿಂಗ್ ಅವರ ಕೈವಾಡ ಇದ್ದು, ಆತನನ್ನು ಬಂಧಿಸುವಂತೆ ಗೋಸ್ವಾಮಿ ಆಗ್ರಹಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಕೇಶ್ ಸಿಂಗ್, ತೃಣಮೂಲ ಕಾಂಗ್ರೆಸ್ ಮತ್ತು ಕೋಲ್ಕತ್ತಾ ಪೊಲೀಸರು ಗೋಸ್ವಾಮಿ ಬ್ರೈನ್ ವಾಶ್ ಮಾಡಿ, ತಮ್ಮ ವಿರುದ್ಧ ಪಿತೂರಿ ನಡೆಸಿದ್ದಾರೆ ಎಂದು ದೂರಿದ್ದಾರೆ.
ವರ್ಷದಿಂದ ಗೋಸ್ವಾಮಿ ಜೊತೆ ಸಂಪರ್ಕದಲ್ಲಿಲ್ಲ ಮತ್ತು ಈ ಬಗ್ಗೆ ತನಿಖೆ ನಾನು ಸಿದ್ಧ ಎಂದು ಹೇಳಿದ್ದಾರೆ. ಇನ್ನು ಬಿಎಜಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಈ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.