ಲಖನೌ/ಅಮೃತಸರ : ಇಂದು ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಹೋರ ಬೀಳಲಿದ್ದು ಮತ ಎಣಿಕೆ ಕಾರ್ಯ ಪ್ರಾರಂಭಗೊಂಡಿದೆ. ಈ ಬೆನ್ನಲ್ಲೇ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಅವರು ಸಂಗ್ರೂರ್‌ನಲ್ಲಿರುವ ಗುರುದ್ವಾರ ಗುರುಸಾಗರ್ ಮಸ್ತುವಾನಾ ಸಾಹಿಬ್‌ಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಇನ್ನು ಮತ ಎಣಿಕೆಗೂ ಮುನ್ನ ಉತ್ತರಪ್ರದೇಶದ ಬಿಜೆಪಿ ನಾಯಕ ರಾಜೇಶ್ವರ್ ಸಿಂಗ್ ಸಹ ಚಂದ್ರಿಕಾ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಫಲಿತಾಂಶದ ಕುರಿತು ಪ್ರತಿಕ್ರಿಯೆ ನೀಡಿದ ಉತ್ತರಾಖಂಡ್ ಮಾಜಿ ಸಿಎಂ ಹರೀಶ್ ರಾವತ್, ಉತ್ತರಾಖಂಡದಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವ ಬಗ್ಗೆ ನನಗೆ ವಿಶ್ವಾಸವಿದೆ. ಮುಂದಿನ 2-3 ಗಂಟೆಗಳಲ್ಲಿ ಫಲಿತಾಂಶ ಹೊರಬೀಳಲಿದೆ. ರಾಜ್ಯದ ಜನರ ಮೇಲೆ ನನಗೆ ನಂಬಿಕೆ ಇದೆ. ಕಾಂಗ್ರೆಸ್ 48 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಂಗ್ರೂರಿನ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಅವರ ನಿವಾಸದಲ್ಲಿ ಜಿಲೇಬಿ ತಯಾರಿಸಲಾಗುತ್ತಿದೆ. ಅಷ್ಟೇ ಅಲ್ಲೆ ಭಗವಂತ್ ಮಾನ್ ಅವರ ಮನೆಯನ್ನ ಹೂವಿನ ಅಲಂಕಾರ ಮಾಡಲಾಗುತ್ತಿದೆ.
ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸಹ ರಾಜ್ಯ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಹೆಚ್ಚು ಸ್ಥಾನದಲ್ಲಿ ಗೆದ್ದು ಅಧಿಕಾರ ಪಡೆಯಲಿ ಎಂದು ಶ್ರೀ ದತ್ತ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.