ಅಗರ್ತಲಾ: ತ್ರಿಪುರದ ಆಡಳಿತರೂಢ ಬಿಜೆಪಿಯ ನಾಯಕ ಕೃಪಾ ರಂಜನ್ ಚಕ್ಮಾ ಅವರನ್ನು ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಧಲೈ ಜಿಲ್ಲೆಯ ಮಾಣಿಕ್ಪುರದಲ್ಲಿ ಬಿಜೆಪಿ ಮುಖಂಡ ಕೃಪಾ ರಂಜನ್ ಚಕ್ಮಾ(35) ಮನೆಯ ಮೇಲೆ ಮೂವರು ಬಂದೂಕುಧಾರಿಗಳು ಶನಿವಾರ ಮುಂಜಾನೆ ದಾಳಿ ನಡೆಸಿ ಈ ಬುಡಕಟ್ಟು ನಾಯಕನನ್ನು ಸ್ಥಳದಲ್ಲೇ ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಶಂಕಿತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗ್ತಿದೆ. ರಾಜ್ಯ ರಾಜಕೀಯದಲ್ಲಿ ಈ ಘಟನೆ ಸಂಚಲನ ಮೂಡಿಸಿದ್ದು, ತ್ರಿಪುರ ಬುಡಕಟ್ಟು ಪ್ರದೇಶಗಳ ಸ್ವಾಯತ್ತ ಜಿಲ್ಲಾ ಮಂಡಳಿಯ ಚುನಾವಣೆಗೆ ಮುನ್ನ ಈ ಘಟನೆ ನಡೆದಿರುವುದು "ರಾಜಕೀಯ ಪಿತೂರಿ" ಎಂದು ಬಿಜೆಪಿ ದೂರಿದೆ.
ಇದನ್ನೂ ಓದಿ:ಸ್ನಾತಕೋತ್ತರ ಶೈಕ್ಷಣಿಕ ವೇಳಾಪಟ್ಟಿ ಪ್ರಕಟಿಸಿದ ಉನ್ನತ ಶಿಕ್ಷಣ ಇಲಾಖೆ: ಇಲ್ಲಿದೆ ಸಂಪೂರ್ಣ ಮಾಹಿತಿ