ETV Bharat / bharat

ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿದ ಬೆಳಗಾವಿ ಮಹಿಳೆ ಮೇಲಿನ ಹಲ್ಲೆ ಕೇಸ್​: ಕರ್ನಾಟಕ ಸರ್ಕಾರದ ವಿರುದ್ಧ ಅಸಮಾಧಾನ - ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿದ ಮಹಿಳೆ ಬೆತ್ತಲೆ ಕೇಸ್

ಬೆಳಗಾವಿ ಮಹಿಳೆ ಮೇಲಿನ ಹಲ್ಲೆ ಪ್ರಕರಣದ ಬಗ್ಗೆ ರಾಜ್ಯಸಭೆಯಲ್ಲಿ ಬಿಜೆಪಿ ಸಂಸದೆಯೊಬ್ಬರು ಧ್ವನಿ ಎತ್ತಿದರು. ಘೋರ ಘಟನೆ ನಡೆದರೂ ಅಲ್ಲಿನ ಸರ್ಕಾರ ಕಠಿಣ ಕ್ರಮ ಕೈಗೊಂಡಿಲ್ಲ ಎಂದು ಅವರು ದೂರಿದರು.

ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿದ ಬೆಳಗಾವಿ ಮಹಿಳೆ ಬೆತ್ತಲೆ ಕೇಸ್​

author img

By ETV Bharat Karnataka Team

Published : Dec 18, 2023, 4:02 PM IST

Updated : Dec 18, 2023, 4:50 PM IST

ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿದ ಬೆಳಗಾವಿ ಮಹಿಳೆ ಮೇಲಿನ ಹಲ್ಲೆ ಕೇಸ್​: ಕರ್ನಾಟಕ ಸರ್ಕಾರದ ವಿರುದ್ಧ ಅಸಮಾಧಾನ

ನವದೆಹಲಿ: ಮಹಿಳೆ ಮೇಲಿನ ಅಮಾನವೀಯ ಹಲ್ಲೆ ಮಾಡಿದ ಬೆಳಗಾವಿ ಘಟನೆ ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿತು. ಈ ಅಮಾನವೀಯ ಪ್ರಕರಣದ ಬಗ್ಗೆ ಉತ್ತರಪ್ರದೇಶದ ಬಿಜೆಪಿ ಸಂಸದೆ ಕಾಂತಾ ಕರ್​ದಮ್​ ಅವರು ಸದನಕ್ಕೆ ಗಮನಕ್ಕೆ ತಂದರು. ಕರ್ನಾಟಕದಲ್ಲಿ ಮಹಿಳೆಯನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡಲಾಗಿದೆ. ರಕ್ಷಣೆ ನೀಡಬೇಕಾದ ಪೊಲೀಸರೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ದೂರಿದರು.

ಇದಕ್ಕೆ ಸದನದಲ್ಲಿ ವಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿ ಗದ್ದಲ ಶುರು ಮಾಡಿದರು. ಇದರ ಮಧ್ಯೆಯೂ ಸಂಸದೆ ಮಹಿಳೆಯ ಪರವಾಗಿ ಮಾತನಾಡಿ, ಮಹಿಳೆಯ ತಪ್ಪು ಇಲ್ಲದಿದ್ದರೂ, ಆಕೆಯ ಮೇಲೆ ಪೈಶಾಚಿಕ ಕೃತ್ಯ ಎಸಗಲಾಗಿದೆ. ರಾಜ್ಯದಲ್ಲಿ ದುರಾಚಾರಗಳು ಹೆಚ್ಚಾಗಿವೆ. ಮಹಿಳೆಯರಿಗೆ ರಾಜ್ಯದಲ್ಲಿ ಅಸುರಕ್ಷಿತೆಯ ಭೀತಿ ಎದುರಾಗಿದೆ ಎಂದು ಅವರು ಹೇಳಿದರು.

ಮಹಿಳೆಯ ಮೇಲೆ ನಡೆದ ದೌರ್ಜನ್ಯದಿಂದ ದೇಶದ ಮಾನ ಹರಾಜಾಗಿದೆ. ಸರ್ಕಾರ ಮತ್ತು ಪೊಲೀಸರ ನಡೆಯ ವಿರುದ್ಧ ಅಲ್ಲಿನ ಹೈಕೋರ್ಟ್​ ಕೂಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಇಷ್ಟೆಲ್ಲ ಅನಾಚಾರ ನಡೆದರೂ ಸರ್ಕಾರ ಯಾವುದೇ ಕಠಿಣ ಕ್ರಮ ಕೈಗೊಂಡಿಲ್ಲ. ಮಹಿಳೆಯರ ರಕ್ಷಣೆ ಮಾಡುವುದು ಸರ್ಕಾರಗಳ ಮೊದಲ ಆದ್ಯತೆಯಾಗಿದೆ. ರಾಜ್ಯ ಸರ್ಕಾರ ಮಾತ್ರ ಪೊಲೀಸ್​ ವ್ಯವಸ್ಥೆಯನ್ನು ಬಳಸಿಕೊಳ್ಳದೇ ಕಾಲಹರಣ ಮಾಡುತ್ತಿದೆ ಎಂದು ಅವರು ಆರೋಪಿಸಿದರು.

ಮಹಿಳೆ ಅಂತಾನೂ ನೋಡದೇ ಆಕೆಯ ಮೇಲೆ ನಿರ್ದಯವಾಗಿ ಹಲ್ಲೆ ಮಾಡಲಾಗಿದೆ. ಇದರಿಂದ ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ ಎಂಬುದು ತಿಳಿದು ಬರುತ್ತದೆ. ಕೇಂದ್ರ, ರಾಜ್ಯ ಸರ್ಕಾರಗಳು ಮಹಿಳೆಯರ ರಕ್ಷಣೆಗೆ ಕಠಿಣ ಕ್ರಮಗಳನ್ನು ಜಾರಿ ಮಾಡಬೇಕಿದೆ ಎಂದು ಅವರು ಮನವಿ ಮಾಡಿದ್ದಾರೆ. ಸದನದಲ್ಲಿ ವಿಪಕ್ಷಗಳ ಗದ್ದಲ ಹೆಚ್ಚಾದ ಕಾರಣ ಸಭಾಪತಿಗಳು ಸದನವನ್ನು ಮುಂದೂಡಿದರು.

ಪ್ರಕರಣ ಸಿಐಡಿಗೆ ನೀಡಿದ ಸರ್ಕಾರ: ಮಹಿಳೆಯನ್ನು ವಿವಸ್ತ್ರಗೊಳಿಸಿ ಅಮಾನವೀಯವಾಗಿ ನಡೆಸಿಕೊಂಡ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ನೀಡಿದೆ. ಕಾನೂನು ಸುವ್ಯವಸ್ಥೆ ಎಡಿಜಿಪಿ ಆರ್.ಹಿತೇಂದ್ರ ಸಿಐಡಿ ಡಿಜಿಪಿ ಅವರಿಗೆ ಪತ್ರ ಬರೆದಿದ್ದು, ಸಿಐಡಿ ಅಧಿಕಾರಿಗಳು ಕೈಗೊಳ್ಳುವ ತನಿಖೆಗೆ ಬೆಳಗಾವಿ ನಗರ ಪೊಲೀಸ್‌ ಆಯುಕ್ತರು ಮಾಹಿತಿ ನೀಡುವಂತೆ ನಿರ್ದೇಶನ ನೀಡಿದ್ದಾರೆ.

ಮಹಿಳೆಯ ಮೇಲಿನ ಅಮಾನವೀಯ ಕೃತ್ಯವು ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ. ಹೈಕೋರ್ಟ್‌ ಕೂಡ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಬಿಜೆಪಿಯಿಂದ ರಾಜ್ಯದ ವಿವಿಧೆಡೆ ಪ್ರತಿಭಟನೆ ನಡೆಸಲಾಗುತ್ತಿದೆ. ರಾಷ್ಟ್ರೀಯ ಮಹಿಳಾ ಆಯೋಗ, ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಹಾಗೂ ಬಿಜೆಪಿ ಸತ್ಯಶೋಧನಾ ಸಮಿತಿ ತಂಡದ ಸದಸ್ಯರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಬೆಳಗಾವಿಗೆ ಬಂದು ತನಿಖಾಧಿಕಾರಿಗಳಿಂದ ಮಾಹಿತಿ ಪಡೆದಿದೆ.

ಇದರ ಬೆನ್ನಲ್ಲೇ ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ಚುರುಕುಗೊಳಿಸಿದ್ದಾರೆ. ಸಿಐಡಿ ಡಿಐಜಿ ಸುಧೀರಕುಮಾರ ರೆಡ್ಡಿ ನೇತೃತ್ವದ ತಂಡ ಬೆಳಗಾವಿಗೆ ಭೇಟಿ ನೀಡಿ ಮಾಹಿತಿ ಕಲೆಹಾಕುತ್ತಿದೆ. ಬೆಳಗಾವಿಯಲ್ಲೇ ವಾಸ್ತವ್ಯ ಹೂಡಿರುವ ಸಿಐಡಿ ತಂಡವು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತ ಮಹಿಳೆಯಿಂದ ಹೇಳಿಕೆ ಪಡೆದಿದೆ. ಸಿಐಡಿ ಎಸ್​ಪಿ ಪೃಥ್ವಿಕ್‌, ರಶ್ಮಿ ಪರಡ್ಡಿ ಹಾಗೂ ಡಿವೈಎಸ್‌ಪಿ ಅಂಜುಮಳ ನಾಯಕ ಸೇರಿ ಆರು ಅಧಿಕಾರಿಗಳ ತಂಡ ಈ ಪ್ರಕರಣದ ತನಿಖೆ ನಡೆಸುತ್ತಿದೆ.

ಇದನ್ನೂ ಓದಿ: ಬೆಳಗಾವಿ ಮಹಿಳೆ ವಿವಸ್ತ್ರ ಪ್ರಕರಣ: ಮೌನ ವಹಿಸಿದ್ದ ಗ್ರಾಮಸ್ಥರಿಗೆ ಸಾಮೂಹಿಕ ಜವಾಬ್ದಾರಿ ನಿಗದಿಪಡಿಸಲು ಹೈಕೋರ್ಟ್ ಸಲಹೆ

Last Updated : Dec 18, 2023, 4:50 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.