ಕೋಲ್ಕತ್ತಾ: ಪಂಚರಾಜ್ಯ ಚುನಾವಣೆಗೆ ಈಗಾಗಲೇ ಮುಹೂರ್ತ ನಿಗದಿಯಾಗಿದ್ದು, ಪಶ್ಚಿಮ ಬಂಗಾಳದ 294 ಸ್ಥಾನಗಳಿಗೆ ಒಟ್ಟು ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದೆ.
ಪಶ್ಚಿಮ ಬಂಗಾಳದಲ್ಲಿ ಐತಿಹಾಸಿಕ ಜಯ ಸಾಧಿಸಿ ಪ್ರಥಮ ಬಾರಿಗೆ ಸರ್ಕಾರ ರಚನೆ ಮಾಡುವ ಕನಸು ಕಾಣುತ್ತಿರುವ ಬಿಜೆಪಿ ಹಾಗೂ ಆಡಳಿತ ಪಕ್ಷ ತೃಣಮೂಲ ಕಾಂಗ್ರೆಸ್ ನಡುವೆ ನೇರ ಸ್ಪರ್ಧೆ ಉಂಟಾಗಿದ್ದು, ಈಗಾಗಲೇ ಆರೋಪ-ಪ್ರತ್ಯಾರೋಪದಲ್ಲಿ ಭಾಗಿಯಾಗಿವೆ. ಇದರ ಮಧ್ಯೆ ಭಾರತೀಯ ಜನತಾ ಪಕ್ಷದ ಸಂಸದ ಹಾಗೂ ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಮಾತನಾಡಿದ್ದಾರೆ.
ಇದನ್ನೂ ಓದಿ: 'ಬಂಗಾಳ ಟೈಗರ್'ಗೆ ಬೆಂಬಲ.. ಪ. ಬಂಗಾಳ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದ ಶಿವಸೇನೆ!
ಮೇ 3ರಂದು ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳದಲ್ಲಿ ಮೊಟ್ಟ ಮೊದಲ ಮುಖ್ಯಮಂತ್ರಿ ಹೊಂದಲಿದ್ದು, ಪಕ್ಷ 200+ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಕಮ್ಯುನಿಸ್ಟ್ ಪರಂಪರೆ ಮೂಲಕ ಸರ್ಕಾರ ನಡೆಸುತ್ತಿದ್ದು, ರಕ್ತಪಾತ ಮತ್ತು ರಾಜಕೀಯ ಕೊಲೆ ಇನ್ಮುಂದೆ ನಡೆಯುವುದಿಲ್ಲ ಕಾರಣ ಬಿಜೆಪಿ ಮುಖ್ಯಮಂತ್ರಿ ಅಲ್ಲಿ ಆಡಳಿತ ನಡೆಸಲಿದ್ದಾರೆ ಎಂದಿದ್ದಾರೆ. ಕಳೆದ ಐದು ವರ್ಷಗಳಿಂದಲೇ ವಿಧಾನಸಭೆ ಚುನಾವಣೆಗೆ ನಾವು ತಯಾರಿ ನಡೆಸಿದ್ದು, ಇದೀಗ ಹಂತ ಹಂತವಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ಚುನಾವಣೆ ಸ್ಪರ್ಧಿಸಲಿದ್ದೇವೆ. ಅದರ ಫಲವಾಗಿ ಲೋಕಸಭೆ ಚುನಾವಣೆ ಫಲಿತಾಂಶ ಕೂಡ ಹೊರಬಿದ್ದಿದೆ ಎಂದಿದ್ದಾರೆ.