ಹೈದರಾಬಾದ್: ತೆಲಂಗಾಣದಲ್ಲಿ ಕುಟುಂಬ ಆಡಳಿತ ನಡೆಯುತ್ತದ್ದು, ನಿವಾಶಕಾಲೇ ವಿಪರೀತ ಬುದ್ಧಿ ಎಂಬಂತೆ ಸಿಎಂ ಕೆಸಿಆರ್ ನಡೆದುಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಬಂಧನವನ್ನು ವಿರೋಧಿಸಿ ಹೈದರಾಬಾದ್‌ನಲ್ಲಿ ಪ್ರತಿಭಟನೆಗೆ ಆಗಮಿಸಿದ್ದ ಅವರು ಸುದ್ದಿಗೋಷ್ಠಿ ನಡೆಸಿ ಕೆಸಿಆರ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಈ ರಾಜ್ಯದಲ್ಲಿ ಪ್ರಜಾಪ್ರಭುತ್ವ ಇದೆಯೇ ಎಂಬ ಅನುಮಾನ ಮೂಡುತ್ತಿದೆ. ತೆಲಂಗಾಣದಲ್ಲಿ ಬಿಜೆಪಿ ಧರ್ಮಯುದ್ಧ ಮಾಡುತ್ತಿದೆ. ಧರ್ಮಯುದ್ಧವನ್ನು ನಿರ್ಣಾಯಕ ಹಂತಕ್ಕೆ ಕೊಂಡೊಯ್ಯಲಾಗುವುದು. ದೇಶದ ಅತ್ಯಂತ ಭ್ರಷ್ಟ ರಾಜ್ಯಗಳಲ್ಲಿ ತೆಲಂಗಾಣವೂ ಒಂದು ಎಂದು ಆರೋಪಿಸಿದರು.
ಕಾರ್ಮಿಕರ ಹೋರಾಟಕ್ಕೆ ಬೆಂಬಲ ನೀಡಲು ಬಂದಿದ್ದೇನೆ. ಜನರ ಪರವಾಗಿ ಹೋರಾಡುವ ಜವಾಬ್ದಾರಿ ತಮ್ಮ ಮೇಲಿದೆ. ಶಾಂತಿಯುತವಾಗಿ ಜನರ ಪರವಾಗಿ ಹೋರಾಟ ಮಾಡುತ್ತೇವೆ. ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಘಟನೆಗಳಿಂದ ಇಲ್ಲಿ ಪ್ರಜಾಪ್ರಭುತ್ವದ ಹತ್ಯೆಯಾಗಿದೆ. ಬಿಜೆಪಿ ಕಚೇರಿಯಲ್ಲಿ ಶಾಂತಿಯುತ ಧರಣಿ ನಡೆಸಲು ಬಂಡಿ ಸಂಜಯ್ ನಿರ್ಧರಿಸಿದ್ದರು. ಆದರೆ ಅವರನ್ನು ಇಲ್ಲಿಂದ ಬಲವಂತವಾಗಿ ಕರೆದೊಯ್ಯಲಾಗಿದೆ. ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಚ್ ಮಾಡಿದ್ದಾರೆಂದು ಜೆಪಿ ನಡ್ಡಾ ಕಿಡಿ ಕಾರಿದರು.
ಸಂಜಯ್ ಬಂಧನ ಪ್ರಜಾಪ್ರಭುತ್ವ ವಿರೋಧಿ
ಬಂಡಿ ಸಂಜಯ್ ಬಂಧನ ಪ್ರಜಾಪ್ರಭುತ್ವ ವಿರೋಧಿಯಾಗಿದ್ದು, ಸಂಜಯ್ ಬಂಧನದ ಕುರಿತು ಎನ್‌ಎಚ್‌ಆರ್‌ಸಿಗೆ ವರದಿ ಸಲ್ಲಿಸುತ್ತೇವೆ. ನ್ಯಾಯಕ್ಕಾಗಿ ಎಲ್ಲಾ ಕಡೆ ಹೋರಾಟ ಮಾಡುತ್ತೇವೆ. ಸಂಜಯ್ ಬಂಧನದ ಬಗ್ಗೆ ಸ್ಪೀಕರ್ ಓಂ ಬಿರ್ಲಾ ಅವರು ಸಾಂವಿಧಾನಿಕ ನಿರ್ಧಾರ ತೆಗೆದುಕೊಳ್ಳುತ್ತಾರೆ. ಅಂತಿಮ ನಿರ್ಧಾರ ಕೈಗೊಳ್ಳುವವರೆಗೂ ಬಿಜೆಪಿ ಹೋರಾಟ ಮುಂದುವರಿಯಲಿದೆ. ಬಿಜೆಪಿ ಸೈದ್ಧಾಂತಿಕ ಪಕ್ಷವಾಗಿದ್ದು, ವ್ಯಕ್ತಿಗಳ ಆಧಾರದಲ್ಲಿ ಕೆಲಸ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ದುಬ್ಬಾಕ್, ಹುಜರಾಬಾದ್‌ನಲ್ಲಿನ ಸೋಲನ್ನು ಕೆಸಿಆರ್‌ಗೆ ಅರಗಿಸಿಕೊಳ್ಳಲಾಗುತ್ತಿಲ್ಲ. ಆದ್ದರಿಂದಲೇ ಅವರು ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು.
ಇದನ್ನೂ ಓದಿ: ಹೈದರಾಬಾದ್‌ನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ರ್ಯಾಲಿಗೆ ಪೊಲೀಸರ ಬ್ರೇಕ್