ETV Bharat / bharat

'ನಾಯಿ' ಹೇಳಿಕೆಗೆ ಬಿಜೆಪಿ ತೀವ್ರ ಆಕ್ಷೇಪ; ಕ್ಷಮೆಯಾಚಿಸಲ್ಲ ಎಂದ ಖರ್ಗೆ - ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ರಾಜಸ್ಥಾನದ ಅಲ್ವಾರ್‌ನಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ್ದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ, ದೇಶದ ಅತ್ಯಂತ ಹಳೆಯ ಪಕ್ಷವು ದೇಶಕ್ಕೆ ಸ್ವಾತಂತ್ರ್ಯವನ್ನು ಗೆದ್ದುಕೊಟ್ಟಿದೆ ಮತ್ತು ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರಂಥ ನಾಯಕರು ದೇಶಕ್ಕಾಗಿ ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ. ದೇಶಕ್ಕಾಗಿ ನಿಮ್ಮ ಮನೆಯ ನಾಯಿಯಾದರೂ ಸತ್ತಿದೆಯಾ? ಆದರೂ, ಬಿಜೆಪಿಯವರು ತಮ್ಮನ್ನು ದೇಶಭಕ್ತರೆಂದು ಹೇಳಿಕೊಳ್ಳುತ್ತಾರೆ ಮತ್ತು ನಾವು ಏನನ್ನಾದರೂ ಹೇಳಿದರೆ ನಮ್ಮನ್ನು ದೇಶದ್ರೋಹಿ (ರಾಷ್ಟ್ರ ವಿರೋಧಿಗಳು) ಎಂದು ಕರೆಯಲಾಗುತ್ತದೆ ಎಂದಿದ್ದರು.

'ನಾಯಿ' ಹೇಳಿಕೆಗೆ ಬಿಜೆಪಿ ಆಕ್ಷೇಪ; ಕ್ಷಮೆಯಾಚಿಸಲ್ಲ ಎಂದ ಖರ್ಗೆ
BJP objects to dog statement Kharge said he did not apologize
author img

By

Published : Dec 20, 2022, 1:00 PM IST

ನವ ದೆಹಲಿ: ಮಲ್ಲಿಕಾರ್ಜುನ ಖರ್ಗೆ ಅವರ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಆಡಳಿತಾರೂಢ ಬಿಜೆಪಿ ಕಾಂಗ್ರೆಸ್ ಕ್ಷಮೆಯಾಚಿಸುವಂತೆ ಒತ್ತಾಯಿಸಿದ್ದು, ಇದೇ ವಿಚಾರ ಇಂದು ಸಂಸತ್ತಿನಲ್ಲಿ ಭಾರೀ ಗದ್ದಲ ಎಬ್ಬಿಸಿದೆ. ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯನ್ನು "ಭಾರತ್ ತೋಡೋ (ಭಾರತವನ್ನು ವಿಭಜಿಸಿ)" ಎಂದು ಲೇವಡಿ ಮಾಡಿದ್ದ ಬಿಜೆಪಿಗೆ ತಿರುಗೇಟು ನೀಡುವ ಸಂದರ್ಭದಲ್ಲಿ ಖರ್ಗೆ ನಿನ್ನೆ ನೀಡಿದ ಹೇಳಿಕೆ ವಿವಾದ ಸೃಷ್ಟಿಸಿದೆ.

ರಾಜಸ್ಥಾನದ ಅಲ್ವಾರ್‌ನಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ್ದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ, ದೇಶದ ಅತ್ಯಂತ ಹಳೆಯ ಪಕ್ಷವು ದೇಶಕ್ಕೆ ಸ್ವಾತಂತ್ರ್ಯವನ್ನು ಗೆದ್ದುಕೊಟ್ಟಿದೆ ಮತ್ತು ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರಂಥ ನಾಯಕರು ದೇಶಕ್ಕಾಗಿ ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ. ದೇಶಕ್ಕಾಗಿ ನಿಮ್ಮ ಮನೆಯ ನಾಯಿಯಾದರೂ ಸತ್ತಿದೆಯಾ? ಆದರೂ, ಬಿಜೆಪಿಯವರು ತಮ್ಮನ್ನು ದೇಶಭಕ್ತರೆಂದು ಹೇಳಿಕೊಳ್ಳುತ್ತಾರೆ ಮತ್ತು ನಾವು ಏನನ್ನಾದರೂ ಹೇಳಿದರೆ ನಮ್ಮನ್ನು ದೇಶದ್ರೋಹಿ (ರಾಷ್ಟ್ರ ವಿರೋಧಿಗಳು) ಎಂದು ಕರೆಯಲಾಗುತ್ತದೆ ಎಂದಿದ್ದರು.

ಚೀನಾದೊಂದಿಗಿನ ಗಡಿ ಘರ್ಷಣೆಯ ಬಗ್ಗೆ ಸಂಸತ್ತಿನಲ್ಲಿ ಚರ್ಚೆಗೆ ಅವಕಾಶ ನೀಡದಿದ್ದಕ್ಕಾಗಿ ಕೂಡ ಖರ್ಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಅವರು ಹೊರಗೆ ಕಾಣಿಸುವಂತೆ ಸಿಂಹದಂತೆ ಮಾತನಾಡುತ್ತಾರೆ, ಆದರೆ ಅವರು ಇಲಿಯಂತೆ ವರ್ತಿಸುತ್ತಾರೆ ಎಂದು ಹೇಳಿದ್ದರು.

ಖರ್ಗೆಯವರ ಹೇಳಿಕೆಗಳಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಬೆಳಗ್ಗೆ ಸಂಸತ್ ಕಲಾಪ ಆರಂಭವಾಗುತ್ತಿದ್ದಂತೆಯೇ ಖರ್ಗೆ ಕ್ಷಮಾಪಣೆ ಕೇಳಬೇಕೆಂದು ಪಟ್ಟು ಹಿಡಿಯಿತು.

ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯನ್ನು ನಾವು ಖಂಡಿಸುತ್ತೇವೆ, ಅವರು ಆಕ್ಷೇಪಾರ್ಹ ಭಾಷೆ ಬಳಸಿದ್ದಾರೆ ಮತ್ತು ಸುಳ್ಳು ಮಾಹಿತಿ ಹರಡಲು ಪ್ರಯತ್ನಿಸಿದ್ದಾರೆ. ಅಲ್ವಾರ್​ನಲ್ಲಿ ಆಕ್ಷೇಪಾರ್ಹ ಭಾಷೆ ಬಳಸಿದ್ದಕ್ಕಾಗಿ ಅವರು ಕ್ಷಮೆಯಾಚಿಸಬೇಕು ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ರಾಜ್ಯಸಭೆಯಲ್ಲಿ ಆಗ್ರಹಿಸಿದರು.

ಬಿಜೆಪಿ ಬೇಡಿಕೆಯಿಂದ ಸದನದಲ್ಲಿ ಗೊಂದಲಕ್ಕೆ ಕಾರಣವಾಗುತ್ತಿದ್ದಂತೆ, ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರು ಸಂಸತ್ತಿನ ಹೊರಗೆ ಈ ಕಾಮೆಂಟ್ ಮಾಡಲಾಗಿದೆ ಎಂದು ಹೇಳಿದರು.

ಬಿಜೆಪಿ ಬೇಡಿಕೆಗೆ ಸೊಪ್ಪು ಹಾಕದ ಖರ್ಗೆ ತಮ್ಮ ವಾಗ್ದಾಳಿಯನ್ನು ಮತ್ತಷ್ಟು ಮೊನಚಾಗಿಸಿದರು.

ನಾನು ನನ್ನ ಮಾತುಗಳನ್ನು ಇಲ್ಲಿ ಪುನರಾವರ್ತಿಸಿದರೆ, ಬಿಜೆಪಿಯವರಿಗೆ ತುಂಬಾ ಕಷ್ಟವಾಗುತ್ತದೆ. ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಕ್ಷಮೆಯಾಚಿಸಿದವರು ಸ್ವಾತಂತ್ರ್ಯಕ್ಕಾಗಿ ಹೋರಾಡಿದವರು ಕ್ಷಮೆಯಾಚಿಸುವಂತೆ ಕೇಳುತ್ತಿದ್ದಾರೆ. ಕಾಂಗ್ರೆಸ್ ‘ಭಾರತ ತೋಡೊ (ವಿಭಜಿತ ಭಾರತ) ಯಾತ್ರೆ’ ನಡೆಸುತ್ತಿದೆ ಎಂದು ಹೇಳಿದರು. ಆಗ ನಾನು ಹೇಳಿದ್ದು ಕಾಂಗ್ರೆಸ್ ಯಾವಾಗಲೂ ಭಾರತ್ ಜೋಡೋ (ಭಾರತವನ್ನು ಒಂದುಗೂಡಿಸುವ) ಮೇಲೆ ಕೆಲಸ ಮಾಡಿದೆ. ಇದಕ್ಕಾಗಿ ಇಂದಿರಾಗಾಂಧಿ, ರಾಜೀವ್ ಗಾಂಧಿ ಪ್ರಾಣ ಕೊಟ್ಟರು. ನೀವು ಏನು ಮಾಡಿದ್ದೀರಿ? ದೇಶಕ್ಕಾಗಿ ತ್ಯಾಗ ಮಾಡಿದವರು ಯಾರು ಗೊತ್ತಾ ಎಂದು ಖರ್ಗೆ ವಾಗ್ದಾಳಿ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮುಖಂಡ ಪಿಯೂಷ್ ಗೋಯಲ್, ಅವರಿಗೆ (ಕಾಂಗ್ರೆಸ್) ಇತಿಹಾಸ ನೆನಪಿಲ್ಲ ಎಂದು ನಾನು ಭಾವಿಸುತ್ತೇನೆ. ಕಾಂಗ್ರೆಸ್‌ನಿಂದಾಗಿ ಜಮ್ಮು ಮತ್ತು ಕಾಶ್ಮೀರ ಯಾವ ಸ್ಥಿತಿಯಲ್ಲಿತ್ತು, ಪಾಕಿಸ್ತಾನದ ಬೆದರಿಕೆ, ಚೀನಾದ ಆಕ್ರಮಣ, ಬಿಆರ್ ಅಂಬೇಡ್ಕರ್, ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಅವಮಾನ ಅವರಿಗೆ ನೆನಪಿಲ್ಲ ಎಂದು ತಿರುಗೇಟು ನೀಡಿದರು.

ಇದನ್ನೂ ಓದಿ: ಗುಜರಾತ್​ ಕಾಂಗ್ರೆಸ್​ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಪೈಪೋಟಿ: ಶಾಸಕರ ಸಭೆ ಕರೆದ ಖರ್ಗೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.