ETV Bharat / bharat

ಬಿಜೆಪಿ ಸೇರಲು ಪ್ರತಿ ಶಾಸಕರಿಗೆ 20 ಕೋಟಿ ರೂಪಾಯಿ ಆಫರ್ ಕೊಟ್ಟಿದ್ದಾರೆ​​: ಆಮ್‌ ಆದ್ಮಿ ಪಕ್ಷ ಆರೋಪ

ದೆಹಲಿಯ ಆಡಳಿತಾರೂಢ ಆಮ್​ ಆದ್ಮಿ ಪಕ್ಷದ ಸರ್ಕಾರವನ್ನು ಉರುಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಇದಕ್ಕಾಗಿ ನಮ್ಮ ಶಾಸಕರಿಗೆ ಕೋಟಿಗಟ್ಟಲೆ ಹಣದ ಆಮಿಷ ಒಡ್ಡುತ್ತಿದ್ದಾರೆ ಎಂದು ಆಪ್ ನಾಯಕರು ಗಂಭೀರ ಆರೋಪ ಮಾಡಿದ್ದಾರೆ.

AAP
AAP
author img

By

Published : Aug 24, 2022, 4:14 PM IST

ನವದೆಹಲಿ: ದೆಹಲಿ ಉಪ ಮುಖ್ಯಮಂತ್ರಿ ಮನೀಶ್​ ಸಿಸೋಡಿಯಾ ಅವರಿಗೆ ಬಿಜೆಪಿ ಸೇರಲು ಆಫರ್​ ನೀಡಲಾಗಿತ್ತು ಎಂಬ ಆರೋಪದ ನಡುವೆ, ಇದೀಗ ಪಕ್ಷದ ರಾಷ್ಟ್ರೀಯ ವಕ್ತಾರ ಹಾಗೂ ರಾಜ್ಯಸಭಾ ಸಂಸದ ಸಂಜಯ್​ ಸಿಂಗ್​ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ಎಎಪಿ ಶಾಸಕರು ಬಿಜೆಪಿ ಸೇರಿಕೊಳ್ಳಲು 20 ಕೋಟಿ ರೂಪಾಯಿ ಆಫರ್​ ನೀಡಲಾಗಿದ್ದು, ಇತರೆ ಶಾಸಕರನ್ನು ಕರೆತಂದರೆ 25 ಕೋಟಿ ರೂಪಾಯಿ ನೀಡುವ ಆಮಿಷ ಒಡ್ಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಎಎಪಿ ಶಾಸಕರು ಪ್ರಸ್ತಾಪ ಸ್ವೀಕರಿಸದಿದ್ದರೆ ಅಥವಾ ಬಿಜೆಪಿಗೆ ಸೇರ್ಪಡೆಯಾಗದಿದ್ದರೆ ಸುಳ್ಳು ಪ್ರಕರಣ ಎದುರಿಸಬೇಕಾಗುತ್ತದೆ ಎಂದು ಬಿಜೆಪಿ ಎಚ್ಚರಿಸಿದ್ದು, ಮನೀಶ್​ ಸಿಸೋಡಿಯಾ ಎದುರಿಸುತ್ತಿರುವ ರೀತಿಯಲ್ಲೇ ಸಿಬಿಐ, ಇಡಿ ವಿಚಾರಣೆ ಎದುರಿಸಬೇಕಾಗುತ್ತದೆ ಎಂದರು. ಮಾಧ್ಯಮಗೋಷ್ಠಿಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ನಮ್ಮ ಶಾಸಕರಾದ ಅಜಯ್ ದತ್, ಸಂಜೀವ್ ಝಾ, ಸೋಮನಾಥ್ ಭಾರತಿ ಮತ್ತು ಕುಲದೀಪ್ ಅವರನ್ನು ಬಿಜೆಪಿ ಸಂಪರ್ಕಿಸಿದ್ದಾಗಿ ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಸಂಜಯ್ ಸಿಂಗ್, ಎಎಪಿ ಶಾಸಕರನ್ನು ಬಿಜೆಪಿ ಸೇರಿಸಲು ಮತ್ತು ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಸರ್ಕಾರ ಕೆಡವಲು ಪ್ರಯತ್ನಿಸಲಾಗ್ತಿದೆ. ಬಿಜೆಪಿಯ ಈ ತಂತ್ರಗಾರಿಕೆ ಮಹಾರಾಷ್ಟ್ರದಲ್ಲಿ ಯಶಸ್ವಿಯಾದ್ದು ದೆಹಲಿಯಲ್ಲಿ ವಿಫಲವಾಗಿದೆ. ಹೀಗಾಗಿ, ಶಾಸಕರ ಮೇಲೆ ಆಮಿಷ ಒಡ್ಡಲಾಗ್ತಿದೆ ಎಂದು ಆರೋಪಿಸಿದರು. ದೇಶದಲ್ಲಿ ಬೆಲೆ ಏರಿಕೆ, ನಿರುದ್ಯೋಗದಂತಹ ಪ್ರಕರಣ ಇತ್ಯರ್ಥದ ಬದಲಿಗೆ ಮೋದಿ ಈ ರೀತಿಯ ಕೆಲಸಕ್ಕೆ ಕೈಹಾಕುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೆಹಲಿ ಅಬಕಾರಿ ನೀತಿ ವಿಚಾರಕ್ಕೆ ಸಂಬಂಧಿಸಿದಂತೆ ಮನೀಶ್ ಸಿಸೋಡಿಯಾ ಅವರ ಮೇಲೆ ಪ್ರಕರಣ ದಾಖಲಾಗಿದ್ದು, ಅವರನ್ನು ವಶಕ್ಕೆ ಪಡೆದು ಸಿಬಿಐ ವಿಚಾರಣೆಗೊಳಪಡಿಸಿದೆ. ಈ ವಿಚಾರವಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ಸಹ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಸಿಸೋಡಿಯಾಗೆ ಬಿಜೆಪಿ ಸೇರುವಂತೆ ಆಫರ್ ನೀಡಲಾಗಿತ್ತು. ಅದಕ್ಕೆ ನಿರಾಕರಿಸಿದ್ದರಿಂದ ಸಿಬಿಐ ಮೂಲಕ ದಾಳಿ ಮಾಡಲಾಗಿದೆ ಎಂದಿದ್ದರು.

ಇದನ್ನೂ ಓದಿ: ಕೇಜ್ರಿವಾಲ್‌ ಮನೆ ಮೇಲೆ ದಾಳಿ: 'ಇದು ಬಿಜೆಪಿ ಗೂಂಡಾಗಳ ಕೃತ್ಯ' ಎಂದ ಮನೀಶ್‌ ಸಿಸೋಡಿಯಾ

ಬಿಹಾರದಲ್ಲೂ ಆರೋಪ: ಬಿಹಾರದಲ್ಲಿ ಬಿಜೆಪಿ ಜೊತೆಗಿನ ಮೈತ್ರಿ ಮುರಿದು ಹೊರಬಂದಿರುವ ನಿತೀಶ್ ಕುಮಾರ್​ ಅವರು​​ ಆರ್​​ಜೆಡಿ, ಕಾಂಗ್ರೆಸ್ ಜೊತೆ ಸೇರಿ ಸರ್ಕಾರ ರಚಿಸಿದ್ದಾರೆ. ಇಂದು ವಿಶ್ವಾಸಮತಯಾಚನೆ ಮಾಡಲಾಗ್ತಿದೆ. ಈ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್​, ಬಿಜೆಪಿ ವಿರುದ್ಧ ಗಂಭೀರ ಆಪಾದನೆ ಮಾಡಿದರು. ಬಿಹಾರದಲ್ಲೂ ಕೇಂದ್ರ ಸರ್ಕಾರ ಮಹಾರಾಷ್ಟ್ರ ರೀತಿಯಲ್ಲೇ ಆಪರೇಷನ್​ ಕಮಲ ನಡೆಸಲು ಮುಂದಾಗಿದ್ದು, ಅದರಲ್ಲಿ ವಿಫಲವಾದೆ. ಹೀಗಾಗಿ, ಸಿಬಿಐ, ಐಟಿ, ಇಡಿ ದಾಳಿಯ ಬೆದರಿಕೆ ಹಾಕುತ್ತಿದೆ ಎಂದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.