ಗೋರಖ್‌ಪುರ: ಉತ್ತರ ಪ್ರದೇಶದ ಗೋರಖ್‌ಪುರದ ಗುಲರಿಹಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಾರಾಯಣಪುರದ ಮಾಜಿ ಮುಖ್ಯಸ್ಥ ಮತ್ತು ಬಿಜೆಪಿಯ ಸೆಕ್ಟರ್ ಉಸ್ತುವಾರಿ 52 ವರ್ಷದ ಬ್ರಿಜೇಶ್ ಸಿಂಗ್ ಅವರನ್ನು ದುಷ್ಕರ್ಮಿಗಳು ಶುಕ್ರವಾರ ರಾತ್ರಿ ಹತ್ಯೆ ಮಾಡಿದ್ದಾರೆ. ಈ ಬಾರಿ ನಡೆದ ಪಂಚಾಯತ್ ಚುನಾವಣೆಯಲ್ಲಿ ಬ್ರಿಜೇಶ್ ಸಿಂಗ್ ಪ್ರಧಾನ ಅಭ್ಯರ್ಥಿಯಾಗಿದ್ದರು.
ಇಂದು (ಶನಿವಾರ) ಅಭ್ಯರ್ಥಿಗಳ ಪ್ರವೇಶಕ್ಕೆ ಸಿದ್ಧತೆ ನಡೆಸಿದ್ದರು. ಚುನಾವಣಾ ಪೈಪೋಟಿ ಹಿನ್ನೆಲೆ ಬಿಜೆಪಿ ಮುಖಂಡ ಬ್ರಿಜೇಶ್ ಸಿಂಗ್ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಘಟನೆ ಸಂಬಂಧ ಪೊಲೀಸರು ಅನೇಕರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ: ಕೇರಳದಲ್ಲಿ ಯುಡಿಎಫ್-ಎಲ್ಡಿಎಫ್ ಎರಡೂ ಅವಳಿ-ಜವಳಿ ಇದ್ದಂತೆ: ಮೋದಿ ವಾಗ್ದಾಳಿ
ಶುಕ್ರವಾರ ರಾತ್ರಿ 11 ಗಂಟೆ ಸುಮಾರಿಗೆ ಬ್ರಿಜೇಶ್ ಸಿಂಗ್ ಗ್ರಾಮದಲ್ಲಿ ಸಾರ್ವಜನಿಕರ ಜತೆ ಮಾತುಕತೆ ನಡೆಸಿದ ಬಳಿಕ ಮೊಗಲ್ಹಾದಲ್ಲಿರುವ ತಮ್ಮ ನಿವಾಸಕ್ಕೆ ಬೈಕ್‌ನಲ್ಲಿ ಹಿಂದಿರುಗುತ್ತಿದ್ದ ವೇಳೆ ದುಷ್ಕರ್ಮಿಗಳು ಅಟ್ಯಾಕ್ ಮಾಡಿದ್ದಾರೆ. ಈ ವೇಳೆ, ಅವರ ಎದೆ ಮತ್ತು ತಲೆಗೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ.