ETV Bharat / bharat

ಪಾಕ್ ಆಕ್ರಮಿತ ಕಾಶ್ಮೀರ ಮುಕ್ತಗೊಳಿಸುವ ಭರವಸೆ ಬಿಜೆಪಿ ಈಡೇರಿಸಲಿದೆ: ಜಿತೇಂದ್ರ ಸಿಂಗ್ - ಪಿಒಕೆ ಭರವಸೆ ಈಡೇರಿಸಲು ಬಿಜೆಪಿ ಸಿದ್ಧ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ನೀಡಿದ ಪ್ರತಿ ಭರವಸೆಯನ್ನು ಈಡೇರಿಸಲು ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ.

Jitendra Singh
ಕೇಂದ್ರ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಹೇಳಿಕೆ
author img

By

Published : Mar 21, 2022, 2:32 PM IST

ಕಥುವಾ (ಜಮ್ಮು ಮತ್ತು ಕಾಶ್ಮೀರ): ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ 370ನೇ ವಿಧಿ ರದ್ದು ಪಡಿಸಿದಂತೆಯೇ ಪಾಕ್​ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ಮುಕ್ತಗೊಳಿಸುವ ಭರವಸೆ ಈಡೇರಿಸುತ್ತದೆ ಎಂದು ಕೇಂದ್ರ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಹೇಳಿದರು.

ನಮ್ಮ ಸರ್ಕಾರ ಯಾವುದೇ ಭರವಸೆ ನೀಡಿದರು ಅದನ್ನು ಈಡೇರಿಸುವ ಪ್ರಯತ್ನ ಮಾಡುತ್ತದೆ. ನಾವು 370ನೇ ವಿಧಿಯನ್ನು ರದ್ದತಿಯ ಬಗ್ಗೆ ಮಾತನಾಡಿದಾಗ ಜನರು ನಮ್ಮನ್ನು ಗೇಲಿ ಮಾಡುತ್ತಿದ್ದರು. ಆದರೆ, ನಾವು ನಮ್ಮ ಭರವಸೆಯನ್ನು ಈಡೇರಿಸಿದ್ದೇವೆ. ಅದೇ ರೀತಿ ಪಾಕಿಸ್ತಾನ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಜಮ್ಮು ಮತ್ತು ಕಾಶ್ಮೀರದ ಭಾಗವನ್ನು ನಾವು ಮುಕ್ತಗೊಳಿಸುತ್ತೇವೆ ಎಂಬ ಭರವಸೆ ನೀಡಿದರು. ಕಥುವಾದಲ್ಲಿ ಮಹಾರಾಜ ಗುಲಾಬ್ ಸಿಂಗ್​​ರ 20 ಅಡಿ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದರು.

1994ರಲ್ಲಿ ಪಾಕಿಸ್ತಾನ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಜಮ್ಮು ಮತ್ತ ಕಾಶ್ಮೀರದ ಭಾಗಗಳಿಂದ ಖಾಲಿ ಮಾಡಬೇಕೆಂಬ ಸರ್ವಾನುಮತದಿಂದ ಸಂಸತ್ತಿನಲ್ಲಿ ಅಂಗೀಕರಿಸಲಾಗಿತ್ತು. ಅದನ್ನು ಕಾರ್ಯಗತವಾಗಿ ಮಾಡುವುದೇ ನಮ್ಮ ಉದ್ದೇಶವಾಗಿದೆ ಎಂದಿದ್ದಾರೆ.

ಮುಂದುವರೆದು ಮಾತನಾಡಿದ ಅವರು, ಬಿಜೆಪಿ ಹಿರಿಯ ನಾಯಕ ದಿವಂಗತ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು1980ರಲ್ಲಿ ಒಂದು ದಿನ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚಿಸುತ್ತದೆ ಎಂದು ಹೇಳಿದರು. ಆಗಲೂ ಜನರು ಅದನ್ನೂ ಗೇಲಿ ಮಾಡಿದ್ದರು ಎಂದು ನೆನಪಿಸಿಕೊಂಡರು.

ಇದನ್ನೂ ಓದಿ: ಮೇಕೆದಾಟು ಯೋಜನೆಗೆ ತಮಿಳುನಾಡು ಕ್ಯಾತೆ ; ಕರ್ನಾಟಕ ಹಣ ಮಂಜೂರು ನಿರ್ಧಾರದ ವಿರುದ್ಧ ನಿರ್ಣಯ ಮಂಡನೆಗೆ ಸಿದ್ಧತೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.