ETV Bharat / bharat

ಕೇರಳದಲ್ಲಿನ ರಾಜಕೀಯ ಹಿಂಸಾಚಾರಕ್ಕೆ ಬಿಜೆಪಿ ಅಂತ್ಯ ಹಾಡಲಿದೆ: ರಾಜನಾಥ್ ಸಿಂಗ್

ಕೇರಳದಲ್ಲಿ ನಡೆಯುತ್ತಿರುವ ರಾಜಕೀಯ ಹಿಂಸಾಚಾರಕ್ಕೆ ಬಿಜೆಪಿ ಅಂತ್ಯ ಹಾಡಲಿದೆ. ಮಾತು ಮತ್ತು ಕಾರ್ಯಗಳಲ್ಲಿ ಹೆಚ್ಚಿನ ವ್ಯತ್ಯಾಸವಿರುವುದರಿಂದ ಎಲ್​ಡಿಎಫ್ ಮತ್ತು ಯುಡಿಎಫ್​ಗಳು ಸಾಮಾನ್ಯ ಜನರ ವಿಶ್ವಾಸಾರ್ಹತೆ ಕಳೆದುಕೊಂಡಿವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.

Defence Minister Rajnath Singh
ರಕ್ಷಣಾ ಸಚಿವ ರಾಜನಾಥ್ ಸಿಂಗ್
author img

By

Published : Mar 28, 2021, 11:07 AM IST

ತಿರುವನಂತಪುರಂ (ಕೇರಳ): ಕೇರಳದಲ್ಲಿನ ರಾಜಕೀಯ ಹಿಂಸಾಚಾರಕ್ಕೆ ಬಿಜೆಪಿ ಅಂತ್ಯ ಹಾಡಲಿದೆ ಎಂದು ತಿರುವನಂತಪುರದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಂಗ್, ಕೇರಳಕ್ಕೆ ಹೊಸ ರಾಜಕೀಯ ಬದಲಾವಣೆ ಬೇಕು. ಬಿಜೆಪಿ ಅದನ್ನು ಒದಗಿಸಬಲ್ಲದು. ಸುಳ್ಳು ಭರವಸೆಗಳನ್ನು ನೀಡುವ ಬದಲು ಎಲ್​ಡಿಎಫ್ ಭರವಸೆಗಳ ಬಗ್ಗೆ 'ಆಕ್ಷನ್ ಟೇಕನ್ ರಿಪೋರ್ಟ್' ತರಬೇಕು. ಕೇರಳದಲ್ಲಿ ನಡೆಯುತ್ತಿರುವ ರಾಜಕೀಯ ಹಿಂಸಾಚಾರಕ್ಕೆ ಬಿಜೆಪಿ ಅಂತ್ಯ ಹಾಡಲಿದೆ. ಮಾತು ಮತ್ತು ಕಾರ್ಯಗಳಲ್ಲಿ ಹೆಚ್ಚಿನ ವ್ಯತ್ಯಾಸವಿರುವುದರಿಂದ ಎಲ್​ಡಿಎಫ್ ಮತ್ತು ಯುಡಿಎಫ್​ಗಳು ಸಾಮಾನ್ಯ ಜನರ ವಿಶ್ವಾಸಾರ್ಹತೆ ಕಳೆದುಕೊಂಡಿವೆ ಎಂದರು.

140 ಸದಸ್ಯರ ಕೇರಳ ವಿಧಾನಸಭೆಯ ಚುನಾವಣೆ ಏಪ್ರಿಲ್ 6ರಂದು ಒಂದೇ ಹಂತದಲ್ಲಿ ನಡೆಯಲಿದ್ದು, ಮತ ಎಣಿಕೆ ಮೇ 2 ರಂದು ನಡೆಯಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.