ETV Bharat / bharat

ಉತ್ತರಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಬಹುಮತ ಗಳಿಸಲಿದೆ: ಜೆ ಪಿ ನಡ್ಡಾ ವಿಶ್ವಾಸ

author img

By

Published : Feb 23, 2022, 4:14 PM IST

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಬಹುಮತಗಳಿಸಲಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

J P Nadda
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ

ಲಖನೌ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಮೂರು ಹಂತಗಳ ಮತದಾನ ಪ್ರಕ್ರಿಯೆ ಈಗಾಗಲೇ ಮುಗಿದಿದ್ದು, ಇಂದು ನಾಲ್ಕನೇ ಹಂತದ ಮತದಾನ ನಡೆಯುತ್ತಿದೆ. ಈ ಮಧ್ಯೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಬಹುಮತ ಗಳಿಸಲಿದೆ ಎಂದು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಬುಧವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ನಡ್ಡಾ, ತಮ್ಮ ಪಕ್ಷ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು. ಚುನಾವಣೆಯಲ್ಲಿ ಪ್ರತಿಪಕ್ಷದ ನಾಯಕರಿಗೆ ಗೆಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ಪ್ರತಿಪಕ್ಷಗಳು ಸಂಪೂರ್ಣವಾಗಿ ಹತಾಶವಾಗಿವೆ. ಉತ್ತರ ಪ್ರದೇಶದ ಜನರು ಬಿಜೆಪಿಯ ಡಬಲ್ ಎಂಜಿನ್ ಸರ್ಕಾರದ ಕೆಲಸದಿಂದ ಸಂಪೂರ್ಣವಾಗಿ ತೃಪ್ತರಾಗಿದ್ದಾರೆ. ಭಾರಿ ಬಹುಮತದೊಂದಿಗೆ ಮತ್ತೊಮ್ಮೆ ನಮ್ಮ ಸರ್ಕಾರ ರಚನೆಯಾಗಲಿದೆ ಎಂದು ಹೇಳಿದರು.

ಬಿಜೆಪಿಯ ಪರವಾಗಿ ಮತದಾರರ ಉತ್ಸಾಹ ನೋಡಿದ್ದೇನೆ. ಅಭಿವೃದ್ಧಿ, ಭದ್ರತೆ ಮತ್ತು ಸಮೃದ್ಧಿಗಾಗಿ ನಮ್ಮ ಪಕ್ಷಕ್ಕೆ ಮತ ಚಲಾಯಿಸಲು ಜನರು ಮನಸು ಮಾಡಿದ್ದಾರೆ. ಬಡವರು, ಮಹಿಳೆಯರು ಮತ್ತು ಯುವಕರ ಸಬಲೀಕರಣಕ್ಕಾಗಿ ಬಿಜೆಪಿ ಕೆಲಸ ಮಾಡಿದೆ ಎಂದು ನಡ್ಡಾ ಹೇಳಿದರು. ಜೊತೆಗೆ ಅಭಿವೃದ್ಧಿ ಕಾರ್ಯಗಳಿಗಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಶ್ಲಾಘಿಸಿದರು.

ಇದನ್ನೂ ಓದಿ: ದೇಶಾದ್ಯಂತ ಹಿಜಾಬ್​ ನಿಷೇಧಿಸಬೇಕು: ಸಂಸದ ಸಾಕ್ಷಿ ಮಹಾರಾಜ್​ ಆಗ್ರಹ

ಇನ್ನು ಸಮಾಜವಾದಿ ಪಕ್ಷದ (ಎಸ್​ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಕಾರ್ಯವೈಖರಿಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಖಿಲೇಶ್ ಯಾದವ್ ಅವರ ಅಧಿಕಾರಾವಧಿಯಲ್ಲಿ ರಾಜ್ಯವು ವಿನಾಶದ ಹಾದಿಯಲ್ಲಿ ಸಾಗಿತ್ತು ಎಂದು ವಾಗ್ದಾಳಿ ನಡೆಸಿದರು. ಉತ್ತರ ಪ್ರದೇಶದಲ್ಲಿ ಒಂದೆಡೆ ವಿನಾಶದತ್ತ ಸಾಗುವವರಿದ್ದಾರೆ, ಮತ್ತೊಂದೆಡೆ ಅಭಿವೃದ್ಧಿಯತ್ತ ಹೆಜ್ಜೆ ಹಾಕುವ ಜನರಿದ್ದಾರೆ. ಅಧಿಕಾರ ಪಡೆಯಲು ಉತ್ತರ ಪ್ರದೇಶ ವಿನಾಶದ ಹಾದಿಯಲ್ಲಿ ನಡೆದರೂ ಯಾದವ್ ಅವರಿಗೆ ಯಾವುದೇ ಅಭ್ಯಂತರ ಇಲ್ಲವೆನಿಸುತ್ತದೆ ಎಂದು ಟೀಕಿಸಿದರು.

ಉತ್ತರ ಪ್ರದೇಶದಲ್ಲಿ ಏಳು ಹಂತಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಮಾರ್ಚ್ 7 ರಂದು ಮುಕ್ತಾಯವಾಗಲಿದೆ. ಮಾರ್ಚ್​ 10ರಂದು ಫಲಿತಾಂಶ ಪ್ರಕಟವಾಗಲಿದೆ. ಇಂದು ನಾಲ್ಕನೇ ಹಂತದ ಮತದಾನ ನಡೆಯುತ್ತಿದೆ. ಉಳಿದ ಮೂರು ಹಂತಗಳಿಗೆ ಫೆಬ್ರವರಿ 27, ಮಾರ್ಚ್ 3 ಮತ್ತು 7 ರಂದು ಮತದಾನ ನಡೆಯಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.