ಹೈದರಾಬಾದ್(ತೆಲಂಗಾಣ): ಕೇಂದ್ರ ಚುನಾವಣಾ ಆಯೋಗ 14 ರಾಜ್ಯಗಳ 30 ವಿಧಾನಸಭಾ ಕ್ಷೇತ್ರಗಳು ಮತ್ತು ಮೂರು ಲೋಕಸಭಾ ಕ್ಷೇತ್ರಗಳಿಗೆ ಉಪ ಚುನಾವಣಾ ದಿನಾಂಕ ನಿಗದಿ ಮಾಡಿದ್ದು, ಪಕ್ಷಗಳು ಸ್ಪರ್ಧೆಗೆ ಸಜ್ಜಾಗಿವೆ.
ಭಾರತೀಯ ಜನತಾ ಪಾರ್ಟಿಯ ಕೇಂದ್ರ ಚುನಾವಣಾ ಸಮಿತಿ ಕೆಲವು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ತೆಲಂಗಾಣದ ಹುಜೂರಾಬಾದ್ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ಎಟಲಾ ರಾಜೇಂದರ್, ಮಹಾರಾಷ್ಟ್ರದ ದೇಗ್ಲುರ್ ಕ್ಷೇತ್ರಕ್ಕೆ ಸುಭಾಷ್ ಪರಾಜಿರಾವ್ ಮತ್ತು ಮಿಜೋರಾಂನ ತುರಿಯಾಲ್ ಕ್ಷೇತ್ರಕ್ಕೆ ಲಾಲ್ದೀನ್ ಥಾರಾ ಅವರನ್ನು ಕಣಕ್ಕೆ ಇಳಿಸಲಿದೆ.
ಅಕ್ಟೋಬರ್ 1ರಂದು ಅಧಿಸೂಚನೆ ಪ್ರಕಟವಾಗಿದ್ದು, ಅಕ್ಟೋಬರ್ 8 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ನಾಮಪತ್ರ ಹಿಂಪಡೆಯಲು ಅಕ್ಟೋಬರ್ 13 ಕೊನೆಯ ದಿನವಾಗಿದೆ.
ಅಕ್ಟೋಬರ್ 30ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 2ಕ್ಕೆ ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ಹೇಳಿದೆ.
ಇದನ್ನೂ ಓದಿ: ಹಡಗಿನಲ್ಲಿ ಡ್ರಗ್ಸ್ ಪಾರ್ಟಿ: ಶಾರೂಖ್ ಪುತ್ರ ಆರ್ಯನ್ ಖಾನ್ ಎನ್ಸಿಬಿ ವಿಚಾರಣೆ