ETV Bharat / bharat

ರಂಗೇರಿದ ಪ. ಬಂಗಾಳ ಚುನಾವಣೆ: ಮಾ. 21ಕ್ಕೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಸಾಧ್ಯತೆ

ಪಶ್ಚಿಮ ಬಂಗಾಳದ ಆಡಳಿತಾರೂಢ ಪಕ್ಷ ಟಿಎಂಸಿ ತನ್ನ ಚುನಾವಣಾ ಪ್ರಣಾಳಿಕೆಯನ್ನು ನಿನ್ನೆ ಬಿಡುಗಡೆ ಮಾಡಿದ್ದು, ಬಿಜೆಪಿ ಮಾರ್ಚ್‌ 21ಕ್ಕೆ ಪ್ರಣಾಳಿಕೆ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

BJP
BJP
author img

By

Published : Mar 18, 2021, 9:44 AM IST

ಕೋಲ್ಕತ್ತಾ: ವಿಧಾನಸಭಾ ಚುನಾವಣೆ ಸಂಬಂಧ ಬಿಜೆಪಿ ತನ್ನ ಪ್ರಣಾಳಿಕೆಯನ್ನು ಮಾರ್ಚ್‌ 21ಕ್ಕೆ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸದ್ಯದಲ್ಲೇ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

ಮೂಲಗಳ ಪ್ರಕಾರ, ಶಿಕ್ಷಣ, ಆರೋಗ್ಯ, ಆಹಾರ, ಕುಡಿಯುವ ನೀರು ಮತ್ತು ವಿದ್ಯುತ್ ಪೂರೈಕೆ ಕುರಿತು ಹೆಚ್ಚಿನ ಗಮನ ಹರಿಸಲು ಬಿಜೆಪಿ ಬಯಸಿದ್ದು, ಎಲ್ಲಾ ರೀತಿಯ ಜನರ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಪ್ರಣಾಳಿಕೆ ರಿಲೀಸ್​ ಮಾಡಲಿದೆ.

ಪಶ್ಚಿಮ ಬಂಗಾಳದ ಆಡಳಿತಾರೂಢ ಪಕ್ಷ ಟಿಎಂಸಿ ತನ್ನ ಚುನಾವಣಾ ಪ್ರಣಾಳಿಕೆಯನ್ನು ನಿನ್ನೆ ಬಿಡುಗಡೆ ಮಾಡಿದೆ.

ಇನ್ನು ಪಶ್ಚಿಮ ಬಂಗಾಳದ 294 ಕ್ಷೇತ್ರಗಳಿಗೆ 8 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್​​ 27 ರಿಂದ ಏಪ್ರಿಲ್​ 29 ರವರೆಗೆ ಮತದಾನವಾಗಲಿದೆ. ಮೇ 2ರಂದು ಫಲಿತಾಂಶ ಬಹಿರಂಗಗೊಳ್ಳಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.