ಉನ್ನಾವೋ (ಉತ್ತರ ಪ್ರದೇಶ): ದೇಶದಾದ್ಯಂತ ಹಿಜಾಬ್ ಧರಿಸುವುದನ್ನು ನಿಷೇಧಿಸುವ ಕಾನೂನು ಜಾರಿಗೆ ತರಬೇಕು ಎಂದು ಉನ್ನಾವೋದ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಒತ್ತಾಯಿಸಿದ್ದಾರೆ. ಹಿಜಾಬ್ ಗದ್ದಲವನ್ನು ಪ್ರಚೋದಿಸಿದ್ದಕ್ಕಾಗಿ ಅವರು ಪ್ರತಿಪಕ್ಷಗಳನ್ನು ಕಟುವಾಗಿ ಟೀಕಿಸಿದರು.
ಕರ್ನಾಟಕದಲ್ಲಿ ಹಿಜಾಬ್ ವಿಚಾರ ಚುನಾವಣೆಯಿಂದ ಮುನ್ನೆಲೆಗೆ ಬಂದರೂ ಈ ವಿಚಾರ ಜನರಿಗೆ ಉತ್ತರವಾಗಿದೆ. ನನ್ನ ಪ್ರಕಾರ, ದೇಶಾದ್ಯಂತ ಹಿಜಾಬ್ ನಿಷೇಧಿಸಲು ಕಾನೂನು ರೂಪಿಸಬೇಕಾದ ಅಗತ್ಯ ಇದೆ ಎಂದು ಬಿಜೆಪಿ ಸಂಸದ ಮಹಾರಾಜ್ ಹೇಳಿದರು.
ಹಿಜಾಬ್ ವಿಚಾರವಾಗಿ ಈಗಾಗಲೇ ಕರ್ನಾಟಕ ಹೈಕೋರ್ಟ್ನ ವಿಸ್ತೃತ ಪೀಠದಲ್ಲಿ ವಿಚಾರಣೆ ನಡೆಯುತ್ತಿದ್ದು, ಕರ್ನಾಟಕ ಸರ್ಕಾರದ ಪರ ವಾದ ಮಂಡಿಸಿರುವ ಅಡ್ವೊಕೇಟ್ ಜನರಲ್ ಹಿಜಾಬ್ ಇಸ್ಲಾಂನ ಅಗತ್ಯ ಧಾರ್ಮಿಕ ಆಚರಣೆ ಅಲ್ಲ ಎಂದು ಪ್ರತಿಪಾದಿಸಿದ್ದಾರೆ.
ಸಾರ್ವಜನಿಕವಾಗಿ ಹಿಜಾಬ್ ಧರಿಸುವುದಕ್ಕೆ ಯಾವುದೇ ನಿಬಂಧನೆ ಇಲ್ಲ. ಆದರೆ ಶಾಲಾ ಕೊಠಡಿಯೊಳಗೆ ಇದಕ್ಕೆ ಅನುಮತಿ ಇಲ್ಲ. ಶಾಲಾ ಆಡಳಿತ ಮಂಡಳಿಗಳ ನಿಯಮಾವಳಿಗಳಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಕರ್ನಾಟಕ ಸರ್ಕಾರ ಸ್ಪಷ್ಟಪಡಿಸಿದೆ.
ಇದನ್ನೂ ಓದಿ: ಭಾರತೀಯ ವಾಯುಪಡೆಯ ಇನ್ನೂ ಮೂರು ರಫೇಲ್ ಯುದ್ಧ ವಿಮಾನಗಳು ಸೇರ್ಪಡೆ