ETV Bharat / bharat

ಮಹಾರಾಷ್ಟ್ರದಲ್ಲಿ ಬ್ಲ್ಯಾಕ್‌ ಫಂಗಸ್​ಗೆ 52 ಮಂದಿ ಬಲಿ!

author img

By

Published : May 14, 2021, 3:20 PM IST

ಹೆಚ್ಚು ಕಾಲ ಆಸ್ಪತ್ರೆಗಳಲ್ಲಿ ಉಳಿಯುವ ಕೋವಿಡ್‌ ಸೋಂಕಿತರು ಹಾಗೂ ಸೋಂಕಿನಿಂದ ಗುಣಮುಖರಾಗಿ ಮಾಲಿನ್ಯ ಪರಿಸರದಲ್ಲಿ ವಾಸ ಮಾಡುವವರಿಗೆ ಈ ರೋಗ ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ. ಮಹಾರಾಷ್ಟ್ರದಲ್ಲಿ ಇಂತಹ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿದ್ದು, ಈವರೆಗೂ 52 ಮಂದಿ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.

ಮಹಾರಾಷ್ಟ್ರದಲ್ಲಿ ಬ್ಲ್ಯಾಕ್‌ ಫಂಗಸ್​ಗೆ 52 ಮಂದಿ ಬಲಿ!
ಮಹಾರಾಷ್ಟ್ರದಲ್ಲಿ ಬ್ಲ್ಯಾಕ್‌ ಫಂಗಸ್​ಗೆ 52 ಮಂದಿ ಬಲಿ!

ಮುಂಬೈ: ಕೋವಿಡ್‌ ಅಟ್ಟಹಾಸ ತೀವ್ರಗೊಂಡಿರುವ ನಡುವೆಯೇ ಬ್ಲ್ಯಾಕ್‌ ಫಂಗಸ್‌ (ಶಿಲೀಂಧ್ರ ಸೋಂಕಿನ ಮುಕಾರ್ಮೈಕೋಸಿಸ್) ಹಾವಳಿ ಉಲ್ಬಣಗೊಳ್ಳುತ್ತಿದೆ. ಮಹಾರಾಷ್ಟ್ರದಲ್ಲಿ ಈ ಹೊಸ ರೋಗಕ್ಕೆ 52 ಮಂದಿ ಬಲಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚು ಕಾಲ ಆಸ್ಪತ್ರೆಗಳಲ್ಲಿ ಉಳಿಯುವ ಕೋವಿಡ್‌ ಸೋಂಕಿತರು ಹಾಗೂ ಸೋಂಕಿನಿಂದ ಗುಣಮುಖರಾಗಿ ಮಾಲಿನ್ಯಯುತ ಪರಿಸರದಲ್ಲಿ ವಾಸ ಮಾಡುವವರಿಗೆ ಈ ರೋಗ ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ. ಮಹಾರಾಷ್ಟ್ರದಲ್ಲಿ ಇಂತಹ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿದ್ದು, ಈವರೆಗೂ 52 ಮಂದಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಸೋಂಕಿನಿಂದ ಚೇತರಿಸಿಕೊಂಡವರಲ್ಲಿ ಇದು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ರೋಗಿಗಳಲ್ಲಿ ಅತೀವ್ರ ಜ್ವರ, ಕಣ್ಣಿನ ನೋವು, ಮೂಗು ಕಟ್ಟುವುದು, ಕಣ್ಣಿನ ದೃಷ್ಟಿ ಮಂದವಾಗುವುದು ಇಲ್ಲವೇ ಭಾಗಶಃ ನಷ್ಟಗೊಂಡಿರುವ ಲಕ್ಷಣಗಳು ಕಂಡುಬಂದಿವೆ.

ಮೃತಪಟ್ಟಿರುವ ಈ 52 ಮಂದಿಯೂ ಕೊರೋನಾ ಸೋಂಕಿಗೊಳಗಾಗಿ ಚೇತರಿಸಿಕೊಂಡವರೇ ಆಗಿದ್ದರೆಂದು ತಿಳಿದು ಬಂದಿದೆ. ಸದ್ಯ ರಾಜ್ಯದಲ್ಲಿ 1,500 ಶಿಲೀಂಧ್ರ ಸೋಂಕಿನ ಪ್ರಕರಣಗಳಿವೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೊಪೆ ತಿಳಿಸಿದ್ದಾರೆ. ಪರಿಸ್ಥಿತಿ ನಿಭಾಯಿಸಲು ಈಗಾಗಲೇ 1 ಲಕ್ಷ ಡೋಸ್ ಗಳ ಆಂಫೊಟೆರಿಸಿನ್ ಬಿ ಕಳುಹಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ದೀರ್ಘಕಾಲಿಕ ರೋಗದಿಂದ ಬಳಲುತ್ತಿರುವವರ ಮೇಲೆ ಈದು ಅತ್ಯಂತ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಟೊಪೆ ತಿಳಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಸೇರಿ 5 ರಾಜ್ಯಗಳಿಗೆ ಕೋವ್ಯಾಕ್ಸಿನ್ ಪೂರೈಕೆ: ಭಾರತ್ ಬಯೋಟೆಕ್

ಮ್ಯೂಕೋರ್ಮೈಕೋಸಿಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ತಗುಲಿದವರ ಚಿಕಿತ್ಸೆಗೆ ಬಹುಶಿಸ್ತೀಯ ವಿಧಾನದ ಅಗತ್ಯವಿರುತ್ತದೆ. ಇದರಿಂದ ಆರೋಗ್ಯದ ಮೂಲಸೌಕರ್ಯಗಳ ಮೇಲೆ ಮತ್ತಷ್ಟು ಹೊರೆ ಬೀಳುವ ಸಾಧ್ಯತೆಗಳಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.