ETV Bharat / bharat

ಬಿಜೆಪಿ ಜಿಲ್ಲಾಧ್ಯಕ್ಷ ಪ್ರದೀಪ್ ಬಿಶ್ತ್ ಮನೆಯಲ್ಲಿ ಮಧ್ಯರಾತ್ರಿ ನಿಗೂಢ ಸ್ಫೋಟ.. ತನಿಖೆಗೆ ಆದೇಶ - ಉತ್ತರಾಖಂಡ್​ ಸುದ್ದಿ

ಬಿಜೆಪಿ ಜಿಲ್ಲಾಧ್ಯಕ್ಷ ಪ್ರದೀಪ್ ಬಿಶ್ತ್ ಮನೆಯಲ್ಲಿ ಪ್ರಬಲ ಸ್ಫೋಟ ಸಂಭವಿಸಿದ್ದು, ಭೀತಿಗೆ ಕಾರಣವಾಗಿದೆ. ರಾತ್ರಿ ವೇಳೆ ನಿಗೂಢ ಸ್ಫೋಟ ಸಂಭವಿಸಿದ್ದು, ಸಿಎಂ ತನಿಖೆಗೆ ಆದೇಶಿಸಿದ್ದಾರೆ.

blast-in-house-of-bjp-nainital-district-president-pradeep-bisht-in-haldwani
ಬಿಜೆಪಿ ಜಿಲ್ಲಾಧ್ಯಕ್ಷ ಪ್ರದೀಪ್ ಬಿಶ್ತ್ ಮನೆಯಲ್ಲಿ ಮಧ್ಯರಾತ್ರಿ ನಿಗೂಢ ಸ್ಟೋಟ
author img

By

Published : Sep 15, 2021, 10:54 AM IST

ಹಲ್ದ್ವಾನಿ ( ಉತ್ತರಾಖಂಡ್​): ಇಲ್ಲಿನ ನೈನಿತಾಲ್ ಬಿಜೆಪಿ ಜಿಲ್ಲಾಧ್ಯಕ್ಷ ಪ್ರದೀಪ್ ಬಿಶ್ತ್ ಅವರ ಮನೆಯಲ್ಲಿ ಮಂಗಳವಾರ ತಡರಾತ್ರಿ ಭಾರಿ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಮನೆಯ ಬಾಗಿಲು, ಕಿಟಕಿಗಳು ಸಂಪೂರ್ಣ ನಾಶವಾಗಿದೆ. ರಾತ್ರಿ ಸುಮಾರು 12:30ರ ಸುಮಾರಿಗೆ ಈ ಸ್ಫೋಟ ಸಂಭವಿಸಿದ್ದು, ಇಡೀ ಪ್ರದೇಶದವರನ್ನ ಬೆಚ್ಚಿ ಬೀಳಿಸಿದೆ.

ಬಿಜೆಪಿ ಜಿಲ್ಲಾಧ್ಯಕ್ಷ ಪ್ರದೀಪ್ ಬಿಶ್ತ್ ಮನೆಯಲ್ಲಿ ಮಧ್ಯರಾತ್ರಿ ನಿಗೂಢ ಸ್ಫೋಟ

ಸ್ಫೋಟದ ಮಾಹಿತಿ ತಿಳಿದ ತಕ್ಷಣ ಪೊಲೀಸರು ಮತ್ತು ಆಡಳಿತ ತಂಡ ಸ್ಥಳಕ್ಕೆ ತಲುಪಿತು. ಜಿಲ್ಲಾ ಮ್ಯಾಜಿಸ್ಟ್ರೇಟ್ ಧೀರಜ್ ಸಿಂಗ್ ಗರ್ಬಯಾಲ್ ಕೂಡ ಘಟನಾ ಸ್ಥಳಕ್ಕೆ ದೌಡಾಯಿಸಿದರು. ಸ್ಫೋಟ ಹೇಗೆ ಸಂಭವಿಸಿತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಅಲ್ಲದೇ ಘಟನೆಯಲ್ಲಿ ಯಾರೊಬ್ಬರಿಗೂ ಹಾನಿಯಾಗಿಲ್ಲ. ತನಿಖೆ ಬಳಿಕ ಸ್ಫೋಟದ ನಿಖರ ಮಾಹಿತಿ ತಿಳಿಯಲಿದೆ ಎಂದು ಡಿಎಂ ತಿಳಿಸಿದ್ದಾರೆ.

ಸ್ಥಳದಲ್ಲಿ ವಿಧಿವಿಜ್ಞಾನ ತಜ್ಞರ ತಂಡ ಆಗಮಿಸಿ ಸ್ಫೋಟದ ಕುರುಹುಗಳ ಪರಿಶೀಲನೆ ನಡೆಸಿದೆ. ಆದರೆ, ಈ ತೀವ್ರತೆಯ ಸ್ಫೋಟ ಹೇಗೆ ಸಂಭವಿಸಿದೆ ಎಂಬುದು ನಿಗೂಢವಾಗಿದೆ. ಘಟನೆ ಕುರಿತು ಎಸ್​ಪಿ ಜಗದೀಶ್ ಪ್ರತಿಕ್ರಿಯಿಸಿ, ಸ್ಫೋಟ ಹೇಗೆ ಸಂಭವಿಸಿದೆ ಎಂಬುದು ತಿಳಿದಿಲ್ಲ. ಮನೆಗೆ ಹಾನಿಯಾಗಿದೆ. ಆದರೆ ಸದಸ್ಯರಿಗೆ ಯಾವುದೇ ಹಾನಿಯಾಗಿಲ್ಲ ಅವರೆಲ್ಲರೂ ಸುರಕ್ಷಿತವಾಗಿದ್ದಾರೆ. ಸ್ಫೋಟದ ಕಾರಣ ಪತ್ತೆಮಾಡಲಾಗುವುದು. ಫೋರೆನ್ಸಿಕ್ ವರದಿ ಬಂದ ನಂತರ ಸ್ಫೋಟಕ್ಕೆ ನಿಖರ ಕಾರಣ ತಿಳಿಯಲಿದೆ ಎಂದಿದ್ದಾರೆ.

ಇನ್ನೊಂದೆಡೆ ಸ್ಫೋಟ ಸಂಭವಿಸಿದ ಸುದ್ದಿ ತಿಳಿದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಘಟನೆಯ ತನಿಖೆಗೆ ಆದೇಶಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.