ನವದೆಹಲಿ: ದೇಶಾದ್ಯಂತ ಮುಂಬರುವ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಮತ್ತು ಇತರ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
10ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ ಮತ್ತು ಪಿಯು (12ನೇ ತರಗತಿ) ಪರೀಕ್ಷೆಯ ದಿನಾಂಕ ಮುಂದೂಡಲಾಗಿದೆ. ಮಂಡಳಿಯು ವಸ್ತುನಿಷ್ಠ ಮಾನದಂಡದ ಆಧಾರದ ಮೇಲೆ 10ನೇ ತರಗತಿಯ ಫಲಿತಾಂಶಗಳನ್ನು ಮೌಲ್ಯಮಾಪನ ಮಾಡಲಿದೆ. 12ನೇ ತರಗತಿ ಪರೀಕ್ಷೆಗಳು ಆ ನಂತರ ನಡೆಯಲಿವೆ, ಪರೀಕ್ಷೆಯ ಪರಿಸ್ಥಿತಿಯನ್ನು ಜೂನ್ 1ರಂದು ಮಂಡಳಿಯು ಪರಿಶೀಲಿಸುತ್ತದೆ ಎಂದು ಶಿಕ್ಷಣ ಸಚಿವಾಲಯ ತಿಳಿಸಿದೆ.
ದೇಶಾದ್ಯಂತ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಕಾರಣ 2021ರ ಸಿಬಿಎಸ್‌ಇ ಬೋರ್ಡ್ ಪರೀಕ್ಷೆಗಳನ್ನು ಮುಂದೂಡಲು ಮತ್ತು ರದ್ದುಗೊಳಿಸಲು ವಿದ್ಯಾರ್ಥಿಗಳು ಒತ್ತಾಯಿಸಿದ್ದರು. ಇಂತಹ ಆರೋಗ್ಯ ಬಿಕ್ಕಟ್ಟಿನ ಮಧ್ಯೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವುದರ ವಿರುದ್ಧ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಪೋಷಕರು ಧ್ವನಿ ಎತ್ತಿದ್ದರು. ‘ಕ್ಯಾನ್‌ಸೆಲ್‌ಬೋರ್ಡ್‌ಎಕ್ಸಾಮ್ಸ್ 2021’ ಎಂಬ ಹ್ಯಾಶ್‌ಟ್ಯಾಗ್ ಟ್ವಿಟರ್‌ನಲ್ಲಿ ಟ್ರೆಂಡಿಂಗ್ ಆಗಿತ್ತು.