ETV Bharat / bharat

ಬಾಂಬ್ ಬೆದರಿಕೆ ಕರೆ: ಪಾಟ್ನಾ ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್ - ಪಾಟ್ನಾ ವಿಮಾನ ನಿಲ್ದಾಣ

ಬಿಹಾರದ ಪಾಟ್ನಾ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರುವ ಮಾಹಿತಿಯಿಂದ ಭಾರಿ ಗೊಂದಲ ಉಂಟಾಯಿತು.

Bomb alert at Patna airport
ಪಾಟ್ನಾ ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್
author img

By

Published : Apr 12, 2023, 8:15 PM IST

ಪಾಟ್ನಾ (ಬಿಹಾರ): ರಾಜಧಾನಿ ಪಾಟ್ನಾ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರುವ ಕುರಿತು ಕರೆ ಬಂದಿದೆ. ಈ ಮಾಹಿತಿ ವಿಮಾನ ನಿಲ್ದಾಣದ ಆವರಣದಲ್ಲಿ ಸಂಚಲನ ಮೂಡಿಸಿತು. ಬಾಂಬ್ ನಿಷ್ಕ್ರಿಯ ದಳ ಶೋಧ ನಡೆಸಿತು. ಎಡಿಜಿ ಜಿತೇಂದ್ರ ಸಿಂಗ್ ಗಂಗ್ವಾರ್ ಅವರು ಕರೆ ಬಂದಿರುವುದನ್ನು ಖಚಿತಪಡಿಸಿದ್ದಾರೆ.

ಬಿಹಾರ ಪೊಲೀಸರು ಎಸ್‌ಒಪಿ ಅಡಿಯಲ್ಲಿ ಕ್ರಮ ಕೈಗೊಳ್ಳುತ್ತಿದ್ದಾರೆ. ನಿಲ್ದಾಣದೊಳಗೆ ಮತ್ತು ಹೊರಗೆ ತೀವ್ರ ಶೋಧ ಮಾಡಲಾಗುತ್ತಿದೆ. ಇದರೊಂದಿಗೆ ವಿಮಾನ ನಿಲ್ದಾಣಕ್ಕೆ ಬರುವ ಮತ್ತು ಹೋಗುವ ಎಲ್ಲ ಜನರನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದರು.

ಪ್ರಯಾಣಿಕರ ಶೋಧ: ಪಾಟ್ನಾ ವಿಮಾನ ನಿಲ್ದಾಣದಲ್ಲಿ ಬಾಂಬ್‌ ಇಟ್ಟಿರುವ ಮಾಹಿತಿಯಿಂದ ಸಂಚಲನ ಉಂಟಾಗಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಹಲವು ಬಾರಿ ಕಿಡಿಗೇಡಿಗಳು ಕೃತ್ಯ ಎಸಗಿದ್ದಾರೆ. ಕರೆ ಮಾಡಿ ತಪ್ಪು ಮಾಹಿತಿ ನೀಡಿರುವ ವಿಷಯವೂ ಮುನ್ನೆಲೆಗೆ ಬಂದಿದೆ. ಸದ್ಯ ಬಾಂಬ್ ಶೋಧ ಕಾರ್ಯ ನಡೆಸಲಾಗಿದೆ. ಇದುವರೆಗೂ ಏನೂ ಪತ್ತೆಯಾಗಿಲ್ಲ. ಪೊಲೀಸರು ಇಡೀ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.

"ಬಾಂಬ್ ಇದೆ ಎಂಬ ಮಾಹಿತಿ ಮೇರೆಗೆ ತನಿಖೆ ನಡೆಸಲಾಗಿದೆ. ಸ್ಥಳೀಯ ಆಡಳಿತಕ್ಕೆ ಮಾಹಿತಿ ನೀಡಿದ್ದೇವೆ. ಎಲ್ಲರೂ ಸಮಯಕ್ಕೆ ಸರಿಯಾಗಿ ತಲುಪಿ ತನಿಖೆ ಕೈಗೊಂಡಿದ್ದಾರೆ. ಎಲ್ಲೂ ಏನೂ ಪತ್ತೆಯಾಗಿಲ್ಲ. ವಿಮಾನ ನಿಲ್ದಾಣದ ಭದ್ರತೆಗಾಗಿ ಎಲ್ಲ ಕ್ರಮಗಳನ್ನು ವಹಿಸಲಾಗಿದೆ. ಪಾಟ್ನಾ ವಿಮಾನ ನಿಲ್ದಾಣದಲ್ಲಿ ಆ ರೀತಿ ಏನೂ ಇಲ್ಲ" ಎಂದು ಪಾಟ್ನಾ ವಿಮಾನ ನಿಲ್ದಾಣದ ನಿರ್ದೇಶಕ ಆಂಚಲ್ ಪ್ರಕಾಶ್ ಸ್ಪಷ್ಟಪಡಿಸಿದರು.

ಮತ್ತೊಂದೆಡೆ, ಬಿಹಾರ ಪೊಲೀಸರು ಇಂದು ಬೆಳಿಗ್ಗೆ 10.45ರ ಸುಮಾರಿಗೆ ಪಾಟ್ನಾ ವಿಮಾನ ನಿಲ್ದಾಣದ ಅಧಿಕಾರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ ಎಂದು ಬಿಹಾರ ಪೊಲೀಸರು ತನ್ನ ಅಧಿಕೃತ ಖಾತೆಯಿಂದ ಟ್ವೀಟ್ ಮಾಡಿದ್ದಾರೆ. ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟದ ಬಗ್ಗೆ ನೋಟಿಸ್ ನೀಡಲಾಗಿದೆ. ಪಾಟ್ನಾ ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಈ ಸುದ್ದಿ ಸುಳ್ಳು ಎಂದು ತಿಳಿದುಬಂದಿದೆ. ವಿಮಾನ ನಿಲ್ದಾಣದಲ್ಲಿ ಯಾವುದೇ ಬಾಂಬ್ ಪತ್ತೆಯಾಗಿಲ್ಲ. ಮುಂದಿನ ತನಿಖೆ ನಡೆಯುತ್ತಿದೆ.

ಸಮಸ್ತಿಪುರದಲ್ಲಿ ಸಿಕ್ಕಿಬಿದ್ದ ಆರೋಪಿ: ಪಾಟ್ನಾದ ಹಿರಿಯ ಪೊಲೀಸ್ ಅಧೀಕ್ಷಕರ ಕಚೇರಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಅದರಲ್ಲಿ ಇಂದು ಏ.12 ರಂದು 10.45ರ ಸುಮಾರಿಗೆ ಪಾಟ್ನಾ ವಿಮಾನ ನಿಲ್ದಾಣದ ಅಧಿಕಾರಿಗೆ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರುವ ಬಗ್ಗೆ ಅಪರಿಚಿತ ಫೋನ್ ಕರೆ ಮೂಲಕ ತಿಳಿಸಲಾಯಿತು ಎಂದು ಬರೆಯಲಾಗಿದೆ. ಈ ಬಗ್ಗೆ ವಿಮಾನ ನಿಲ್ದಾಣ ಪ್ರಾಧಿಕಾರದಿಂದ ಮಾಹಿತಿ ಬಂದ ತಕ್ಷಣ ಪಾಟ್ನಾ ಪೊಲೀಸರ ತಂಡ ಅಲ್ಲಿಗೆ ಆಗಮಿಸಿ ಬಾಂಬ್ ನಿಷ್ಕ್ರಿಯ ದಳ, ಸಿಐಎಸ್‌ಎಫ್ ಮತ್ತು ಇತರ ಭದ್ರತಾ ಏಜೆನ್ಸಿಗಳೊಂದಿಗೆ ಇಡೀ ವಿಮಾನ ನಿಲ್ದಾಣದ ಆವರಣದ ಒಳಗೆ ಮತ್ತು ಹೊರಗೆ ಮುಂಜಾಗ್ರತಾ ಕ್ರಮವಾಗಿ ಭದ್ರತಾ ತಪಾಸಣೆ ನಡೆಸಲಾಯಿತು. ಭದ್ರತಾ ತಪಾಸಣೆ ವೇಳೆ ಯಾವುದೇ ಬಾಂಬ್ ಅಥವಾ ಇನ್ನಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ ಎಂದು ತಿಳಿದಿದೆ. ಈ ಹಿನ್ನೆಲೆಯಲ್ಲಿ ಕರೆ ಮಾಡಿದವರನ್ನು ಗುರುತಿಸಲಾಗಿದ್ದು, ಸಮಸ್ತಿಪುರ ಪೊಲೀಸರು ವಿಚಾರಣೆಗೆ ಕರೆತಂದಿದ್ದಾರೆ. ಕರೆ ಮಾಡಲು ಬಳಸಿದ್ದ ಮೊಬೈಲ್ ಕೂಡ ಪತ್ತೆಯಾಗಿದೆ. ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.

ಈ ಹಿಂದೆ ಜುಲೈ 2022 ರಂದು ಸಹ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರುವ ಬಗ್ಗೆ ಮಾಹಿತಿ ಬಂದಿತ್ತು. ರಾತ್ರಿ 8.30ರ ಸುಮಾರಿಗೆ ಪಾಟ್ನಾದಿಂದ ದೆಹಲಿಗೆ ಹೋಗುತ್ತಿದ್ದ 6E2126 ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂದು ವರದಿಯಾಗಿತ್ತು. ಪ್ರಯಾಣಿಕರು ಭಯಭೀತರಾಗಿದ್ದರು. ಬಾಂಬ್ ಪತ್ತೆಗೆ ಬಾಂಬ್ ಸ್ಕ್ವಾಡ್ ಬಂದಿತ್ತು. ಎರಡು ಗಂಟೆಗೂ ಹೆಚ್ಚು ಕಾಲ ನಡೆಸಿದ ತನಿಖೆಯಲ್ಲಿ ತಂಡಕ್ಕೆ ಏನೂ ಪತ್ತೆಯಾಗಿರಲಿಲ್ಲ. ಬಾಂಬ್ ಇಟ್ಟಿರುವ ಸುದ್ದಿ ವದಂತಿ ಎಂದು ತಿಳಿದಿತ್ತು.

ಇದನ್ನೂ ಓದಿ: 5 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಡಿಎಂಕೆ ಕೌನ್ಸಿಲರ್ ಬಂಧನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.