ಲಖನೌ (ಉತ್ತರ ಪ್ರದೇಶ): ರೆಮ್ಡೆಸಿವಿರ್ ಔಷಧವನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವುದರಲ್ಲಿ ತೊಡಗಿರುವವರ ಮೇಲೆ ದಾಳಿ ನಡೆಸಿ, ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇಲ್ಲಿನ 11 ಉನ್ನತ ಅಧಿಕಾರಿಗಳ ಪ್ರಮುಖ ತಂಡದೊಂದಿಗೆ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಆದಿತ್ಯನಾಥ್, ರಾಜ್ಯದಲ್ಲಿ ಲಾಕ್ಡೌನ್ ಮಾಡುವ ಯಾವುದೇ ಯೋಜನೆ ಇಲ್ಲ ಎಂದು ಪುನರುಚ್ಚರಿಸಿದರು.
ಆಕ್ಸಿಜನ್ ಟ್ಯಾಂಕರ್‌ಗಳಲ್ಲಿ ಜಿಪಿಎಸ್ ಸಾಧನಗಳನ್ನು ಅಳವಡಿಸಿ ಆಕ್ಸಿಜನ್ ಸ್ಥಾವರಗಳಿಗೆ ಸಾಕಷ್ಟು ಭದ್ರತೆ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ನಿರಂತರ ಔಷಧಿಯ ಪೂರೈಕೆಗೆ ರೆಮ್ಡೆಸಿವಿರ್ ಔಷಧ ಉತ್ಪಾದಕರ ಮೇಲ್ವಿಚಾರಣೆ ಮಾಡಬೇಕು ಎಂದು ಆದಿತ್ಯನಾಥ್ ಹೇಳಿದರು.
"ರಾಜ್ಯದಲ್ಲಿ ಔಷಧಗಳು ಮತ್ತು ಆಮ್ಲಜನಕದ ಕೊರತೆಯಿಲ್ಲ" ಎಂದು ಅವರು ಪ್ರತಿಪಾದಿಸಿದರು.