ಮುಂಬೈ : ಗೆಳತಿ ಕರೆ ಸ್ವೀಕರಿಸದ ಹಿನ್ನೆಲೆ 24 ವರ್ಷದ ಯುಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮುಂಬೈ ನಗರದ ಡಿಯೋನಾರ್ ಪ್ರದೇಶದಲ್ಲಿ ನಡೆದಿದೆ.
ಮೃತರನ್ನು ಮಾನವ್ ಲಾಲ್ವಾನಿ ಎಂದು ಗುರುತಿಸಲಾಗಿದೆ. ತಡರಾತ್ರಿ ಸ್ನೇಹಿತರ ಜೊತೆ ಯುವಕ ಮತ್ತು ಆತನ ಗೆಳತಿ ಪಾರ್ಟಿಯೊಂದರಲ್ಲಿ ಭಾಗವಹಿಸಿದ್ದರು. ಪಾರ್ಟಿ ಮುಗಿಸಿ ಮನೆಗೆ ಬಂದ ನಂತರ ಯುವತಿಗೆ ಯುವಕ ಕರೆ ಮಾಡಿದ್ದ.
ಆದ್ರೆ, ಆಕೆ ಕರೆ ಸ್ವೀಕರಿಸಲಿಲ್ಲ. ಹಲವಾರು ಬಾರಿ ನಿರಂತರವಾಗಿ ಪ್ರಯತ್ನಿಸಿದರು ಗೆಳತಿ ಕರೆ ಸ್ವೀಕರಿಸಿದ ಹಿನ್ನೆಲೆ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ ಬೆಳಗ್ಗೆ ಟೆರೇಸ್ ಮೇಲೆ ಮಗ ನೇಣು ಬಿಗಿಕೊಂಡು ಸಾವನ್ನಪ್ಪಿದ್ದನ್ನು ಕಂಡ ಪೋಷಕರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಯುವಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಹೆಚ್ಚಿನ ತನಿಖೆಗಾಗಿ ಸಿಸಿಟಿವಿ ದೃಶ್ಯ ಪರಿಶೀಲಿಸಲಾಗುತ್ತಿದೆ. ಯುವತಿಯ ಹೇಳಿಕೆಯನ್ನು ಸಹ ದಾಖಲಿಸಿಕೊಳ್ಳಲಾಗಿದೆ.