ಮುಜಾಫರ್‌ನಗರ (ಉತ್ತರ ಪ್ರದೇಶ): ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಬಾಲಕನಿಗೆ ಕಪಾಳಮೋಕ್ಷ ಮಾಡುವಂತೆ 2 ನೇ ತರಗತಿಯ ವಿದ್ಯಾರ್ಥಿಗಳಿಗೆ ಖಾಸಗಿ ಶಾಲಾ ಶಿಕ್ಷಕರೊಬ್ಬರು ಹೇಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆಯು ಉತ್ತರ ಪ್ರದೇಶದ ಮುಜಫರ್‌ನಗರದಲ್ಲಿ ನಡೆದಿದ್ದು, ಇದಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಖಂಡನೆ ವ್ಯಕ್ತಪಡಿಸಿದ್ದಾರೆ. ಜೊತೆಗೆ, ಭಾರತೀಯ ಜನತಾ ಪಕ್ಷ (ಬಿಜೆಪಿ) ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
-
मासूम बच्चों के मन में भेदभाव का ज़हर घोलना, स्कूल जैसे पवित्र स्थान को नफ़रत का बाज़ार बनाना - एक शिक्षक देश के लिए इससे बुरा कुछ नहीं कर सकता।
— Rahul Gandhi (@RahulGandhi) August 25, 2023 " class="align-text-top noRightClick twitterSection" data="
ये भाजपा का फैलाया वही केरोसिन है जिसने भारत के कोने-कोने में आग लगा रखी है।
बच्चे भारत का भविष्य हैं - उनको नफ़रत नहीं, हम सबको मिल…
">मासूम बच्चों के मन में भेदभाव का ज़हर घोलना, स्कूल जैसे पवित्र स्थान को नफ़रत का बाज़ार बनाना - एक शिक्षक देश के लिए इससे बुरा कुछ नहीं कर सकता।
— Rahul Gandhi (@RahulGandhi) August 25, 2023
ये भाजपा का फैलाया वही केरोसिन है जिसने भारत के कोने-कोने में आग लगा रखी है।
बच्चे भारत का भविष्य हैं - उनको नफ़रत नहीं, हम सबको मिल…मासूम बच्चों के मन में भेदभाव का ज़हर घोलना, स्कूल जैसे पवित्र स्थान को नफ़रत का बाज़ार बनाना - एक शिक्षक देश के लिए इससे बुरा कुछ नहीं कर सकता।
— Rahul Gandhi (@RahulGandhi) August 25, 2023
ये भाजपा का फैलाया वही केरोसिन है जिसने भारत के कोने-कोने में आग लगा रखी है।
बच्चे भारत का भविष्य हैं - उनको नफ़रत नहीं, हम सबको मिल…
ಮನ್ಸೂರ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಖುಬ್ಬಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪ್ರಾಥಮಿಕ ತನಿಖೆಯಲ್ಲಿ, 'ತರಗತಿ ಸರಿಯಾಗಿ ಪೂರ್ಣಗೊಳಿಸದ ಹಿನ್ನೆಲೆ ಹಾಗೂ ತರಗತಿಗೆ ಸರಿಯಾಗಿ ಹಾಜರಾಗದ ಹಿನ್ನೆಲೆ ವಿದ್ಯಾರ್ಥಿಗೆ ಥಳಿಸಲಾಗಿದೆ ಎಂದು ಪೊಲೀಸರು ಕಂಡುಕೊಂಡಿದ್ದಾರೆ' ಅಂತ ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತು ಹೆಚ್ಚಿನ ತನಿಖೆ ಮುಂದುವರೆಸಲಾಗಿದೆ. ಹಾಗೆಯೇ, ಶಿಕ್ಷಕ ಸಮುದಾಯದ ವಿರುದ್ಧ ಸಾರ್ವಜನಿಕ ವಲಯದಿಂದ ಆಕ್ಷೇಪಾರ್ಹ ಟೀಕೆಗಳು ಕೇಳಿ ಬರುತ್ತಿವೆ.
ಇದನ್ನೂ ಓದಿ : ಹುಬ್ಬಳ್ಳಿ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯರ ಫೋಟೋ ವೈರಲ್ ಪ್ರಕರಣ : ಪೊಲೀಸ್ ಕಮಿಷನರ್ ಹೇಳಿದ್ದೇನು?
ಘಟನೆ ಬಗ್ಗೆ ಎಕ್ಸ್ ಆ್ಯಪ್ನಲ್ಲಿ ಮಾಹಿತಿ ಹಂಚಿಕೊಂಡ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಮುಗ್ಧ ಮಕ್ಕಳ ಮನಸ್ಸಿನಲ್ಲಿ ತಾರತಮ್ಯದ ವಿಷ ಬೀಜವನ್ನು ಬಿತ್ತುವುದು, ಶಾಲೆಯಂತಹ ಪವಿತ್ರ ಸ್ಥಳವನ್ನು ದ್ವೇಷದ ಮಾರುಕಟ್ಟೆಯನ್ನಾಗಿ ಮಾಡುವುದು ತಪ್ಪು. ಶಿಕ್ಷಕನಾದವನು ದೇಶಕ್ಕಾಗಿ ಉತ್ತಮ ಪ್ರಜೆಯನ್ನು ರೂಪಿಸಬೇಕು. ಭಾರತದ ಮೂಲೆ ಮೂಲೆಗೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ದೇಶದಲ್ಲಿ ದ್ವೇಷ ಹರಡಲು ಬಿಜೆಪಿಯೇ ಕಾರಣ. ಮಕ್ಕಳು ಭಾರತದ ಭವಿಷ್ಯ, ಅವರನ್ನು ದ್ವೇಷಿಸಬೇಡಿ, ನಾವೆಲ್ಲರೂ ಒಟ್ಟಾಗಿ ಪ್ರೀತಿಯಿಂದ ಕಲಿಸಬೇಕಾಗಿದೆ" ಎಂದು ಹೇಳಿದ್ದಾರೆ.
ಇದನ್ನೂ ಓದಿ : 2 ವರ್ಷಗಳ ಹಿಂದೆ ನಡೆದ ಹಲ್ಲೆಯ ವಿಡಿಯೋ ಈಗ ವೈರಲ್ .. ಸರಪಂಚ್ನ ಪತಿ ಸೇರಿ ಮೂವರ ಬಂಧನ
ಇನ್ನು ಘಟನೆಯನ್ನು ಖಂಡಿಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, " ನಮ್ಮ ಮುಂದಿನ ಪೀಳಿಗೆಗೆ ನಾವು ಯಾವ ರೀತಿಯ ತರಗತಿ, ಯಾವ ರೀತಿಯ ಸಮಾಜವನ್ನು ನೀಡಲು ಬಯಸುತ್ತೇವೆ?. ಚಂದ್ರನಲ್ಲಿಗೆ ಹೋಗುವ ತಂತ್ರಜ್ಞಾನದ ಬಗ್ಗೆಯೋ ಅಥವಾ ದ್ವೇಷದ ಗಡಿ ಗೋಡೆಯನ್ನು ನಿರ್ಮಿಸುವ ಬಗ್ಗೆಯೋ?. ದ್ವೇಷವೇ ಪ್ರಗತಿಯ ದೊಡ್ಡ ಶತ್ರು. ನಮ್ಮ ದೇಶಕ್ಕಾಗಿ, ಪ್ರಗತಿಗಾಗಿ, ಮುಂದಿನ ಪೀಳಿಗೆಗಾಗಿ ಈ ದ್ವೇಷದ ವಿರುದ್ಧ ನಾವು ಒಗ್ಗೂಡಿ ಮಾತನಾಡಬೇಕಾಗಿದೆ " ಎಂದು ತಿಳಿಸಿದ್ದಾರೆ. ಹಾಗೆಯೇ, ಘಟನೆಗೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕೂಡ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಇದನ್ನೂ ಓದಿ : ಟಿಕೆಟ್ ಬೇಡಿಕೆ ವೇಳೆ ತಳ್ಳಾಟ... ಕಾರ್ಯಕರ್ತನಿಗೆ ಸಿದ್ದರಾಮಯ್ಯರಿಂದ ಕಪಾಳಮೋಕ್ಷ
ಇದನ್ನೂ ಓದಿ : ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ಕಪಾಳಮೋಕ್ಷ ಮಾಡಿದ ಸಚಿವ ವಿ ಸೋಮಣ್ಣ