ನವದೆಹಲಿ/ಗಾಜಿಯಾಬಾದ್: ಇಲ್ಲಿನ ಹೋಟೆಲ್‌ವೊಂದರಲ್ಲಿ ಡಿಜೆಯಲ್ಲಿ ತಮಗೆ ಇಷ್ಟವಾದ ಹಾಡನ್ನು ಪ್ಲೇ ಮಾಡುವ ವಿಚಾರ ಹಿಂಸಾಚಾರಕ್ಕೆ ತಿರುಗಿತ್ತು. ಘಟನೆಯಲ್ಲಿ ಕೆಲವರು ಗಂಭೀರವಾಗಿ ಗಾಯಗೊಂಡಿದ್ದು, ಮಹಿಳೆಯರಿಬ್ಬರನ್ನು ಐಸಿಯುಗೆ ದಾಖಲಿಸಲಾಗಿದೆ. ಇಬ್ಬರು ಮಹಿಳೆಯರು ಸೇರಿದಂತೆ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಬತ್ತು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕಳೆದ ದಿನ ಡಿಜೆ ನುಡಿಸುವ ವಿವಾದಕ್ಕೆ ಸಂಬಂಧಿಸಿದಂತೆ ಗಾಜಿಯಾಬಾದ್‌ನ ಹೋಟೆಲ್‌ವೊಂದರಲ್ಲಿ ತೀವ್ರ ಜಗಳ ನಡೆದಿದೆ. ಹೋಟೆಲ್ ಸಿಬ್ಬಂದಿ ಮತ್ತು ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದ ಅತಿಥಿಗಳ ನಡುವೆ ಗಲಾಟೆ ನಡೆದಿದ್ದು, ಈ ವೇಳೆ, ಎರಡು ಗುಂಪುಗಳು ಪರಸ್ಪರ ಕಿತ್ತಾಡಿಕೊಂಡಿವೆ. ದಾಳಿಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಜಗಳದಲ್ಲಿ ಅನೇಕರು ಗಾಯಗೊಂಡಿದ್ದು, ಗಾಯಗೊಂಡವರಲ್ಲಿ ಇಬ್ಬರು ಮಹಿಳೆಯರೂ ಸೇರಿದ್ದಾರೆ. ಈ ಘಟನೆಗೆ ಸಂಬಂಧಿಸಿದ ಲೈವ್ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.
ಈ ಪ್ರಕರಣವು ಗಾಜಿಯಾಬಾದ್ ಗೋವಿಂದಪುರಂನಲ್ಲಿರುವ ಹೋಟೆಲ್ ಗ್ರ್ಯಾಂಡ್ ಐಆರ್‌ಎಸ್‌ಗೆ ಸಂಬಂಧಿಸಿದೆ. ಫೆಬ್ರವರಿ 25 ರಂದು ಇಲ್ಲಿ ಮದುವೆ ಕಾರ್ಯಕ್ರಮ ನಡೆಯುತ್ತಿತ್ತು ಎಂದು ಹೇಳಲಾಗುತ್ತಿದೆ. ಇದೇ ವೇಳೆ, ಡಿಜೆ ವಿಚಾರದಲ್ಲಿ ಜಗಳ ನಡೆದಿದೆ. ಮದುವೆಯ ಅತಿಥಿಗಳು ನಿರ್ದಿಷ್ಟ ಹಾಡನ್ನು ನುಡಿಸುವಂತೆ ಒತ್ತಾಯಿಸಿದ್ದರು. ಆದರೆ ಅವರ ಮನವಿಯನ್ನು ಹೋಟೆಲ್ ಸಿಬ್ಬಂದಿ ನಿರಾಕರಿಸಿದ್ದರು ಎನ್ನಲಾಗುತ್ತಿದೆ. ರಾತ್ರಿ ಕಳೆದಿದೆ ಹಾಗಾಗಿ ಈಗ ಡಿಜೆ ಹಾಕುವುದಿಲ್ಲ ಎಂದು ಹೋಟೆಲ್ ಸಿಬ್ಬಂದಿ ಹೇಳಿದ್ದಾರೆ ಎನ್ನಲಾಗಿದೆ.
ಈ ವಿಚಾರದಲ್ಲಿಯೇ ಹೋಟೆಲ್ ಸಿಬ್ಬಂದಿ ಮತ್ತು ಮದುವೆಗೆ ಬಂದ ಅತಿಥಿಗಳ ಮಧ್ಯೆ ವಿವಾದ ಶುರುವಾಗಿದೆ. ಇವರ ಜಗಳ ವಿಕೋಪಕ್ಕೆ ತಿರುಗಿದ್ದು, ಹೋಟೆಲ್ ಸಿಬ್ಬಂದಿ ದೊಣ್ಣೆ ಮತ್ತು ರಾಡ್‌ಗಳೊಂದಿಗೆ ಬಂದಿದ್ದಾರೆ.. ಇಲ್ಲಿಗೆ ಬಂದವರನ್ನು ಸಿಬ್ಬಂದಿ ಹಾಗೂ ಬೌನ್ಸರ್‌ಗಳು ದೊಣ್ಣೆ ಹಿಡಿದು ಥಳಿಸುತ್ತಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದ್ದು, ಮಹಿಳೆಯರೂ ಅವರನ್ನು ರಕ್ಷಿಸಲು ಯತ್ನಿಸುತ್ತಿದ್ದರೂ ಹೋಟೆಲ್ ಸಿಬ್ಬಂದಿ ಗೂಂಡಾಗಳಂತೆ ವರ್ತಿಸಿ ದೊಣ್ಣೆಯಿಂದ ಹಲ್ಲೆ ಮಾಡಿದ್ದಾರೆ ಎನ್ನಲಾಗ್ತಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಇಬ್ಬರನ್ನು ಆಸ್ಪತ್ರೆಯ ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.
ಮಸ್ಸೂರಿ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರ್ಯಾಂಡ್ ಐರಸ್ ಹೋಟೆಲ್‌ನಲ್ಲಿ ಮದುವೆಗೆ ಬಂದ ಅತಿಥಿಗಳು ಡಿಜೆ ಬಾರಿಸುವಂತೆ ಬೇಡಿಕೆ ಇಟ್ಟಿದ್ದು, ಇದಕ್ಕೆ ಹೋಟೆಲ್ ಮಾಲೀಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವಿಷಯದ ಚರ್ಚೆಯ ವೇಳೆ ಮಾತಿನ ಚಕಮಕಿ ನಡೆದಿದೆ. ಈ ಬಗ್ಗೆ 15-20 ಜನರ ಮೇಲೆ ಆರೋಪಗಳನ್ನು ದಾಖಲಿಸಿಕೊಂಡು ಘಟನೆಯಲ್ಲಿ ಭಾಗಿಯಾಗಿರುವ ಒಂಬತ್ತು ಆರೋಪಿಗಳನ್ನು ಬಂಧಿಸಿ ಇತರರನ್ನು ವಿಡಿಯೋ ಆಧಾರದ ಮೇಲೆ ಗುರುತಿಸಿ ಮುಂದಿನ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದು ಡಿಸಿಪಿ ಹೇಳಿದ್ದಾರೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು: ಗಾಯಾಳುಗಳಲ್ಲಿ ಮಹಿಳೆಯರೂ ಸೇರಿದ್ದಾರೆ. ವಿಡಿಯೋ ವೈರಲ್ ಆದ ನಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಈ ಹೋಟೆಲ್ ಪ್ರಭಾವಿ ವ್ಯಕ್ತಿಯ ಒಡೆತನದಲ್ಲಿದೆ ಎನ್ನಲಾಗಿದೆ.
ಓದಿ: ಕೊಳದ ಮಧ್ಯೆ ಪಲ್ಟಿಯಾದ ಬೋಟ್.. ನಾಲ್ಕು ಜನ ನಾಪತ್ತೆ, ಇಬ್ಬರ ದೇಹ ಪತ್ತೆ.. ಈಜಿ ದಡ ಸೇರಿದ ನಾಲ್ವರು