ವಿಶಾಖಪಟ್ಟಣಂ(ಆಂಧ್ರಪ್ರದೇಶ): ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದ ಪರಿಣಾಮ ಇಬ್ಬರು ಸಾವನ್ನಪ್ಪಿದ ದಾರುಣ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಅನಕಪಲ್ಲಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಸೇತುವೆ ಕುಸಿದು ಸೈಡ್ ಪಿಲ್ಲರ್ ಕಾರಿನ ಮೇಲೆ ಬಿದ್ದ ಪರಿಣಾಮವಾಗಿ ದುರ್ಘಟನೆ ಸಂಭವಿಸಿದೆ. ಈ ವೇಳೆ ಕಾರು ಸೇರಿದಂತೆ ಮತ್ತೊಂದು ಭಾರೀ ವಾಹನ ಸಂಪೂರ್ಣವಾಗಿ ಜಖಂಗೊಂಡಿದೆ.
ಘಟನೆಯಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದು, ಇನ್ನೂ ಕೆಲವರು ಪಿಲ್ಲರ್ನ ಕೆಳಗೆ ಸಿಲುಕಿರುವ ಶಂಕೆ ವ್ಯಕ್ತಪಡಿಸುತ್ತಿದ್ದಾರೆ. ರಕ್ಷಣಾ ಕಾರ್ಯಾಚರಣೆ ವೇಗವಾಗಿ ನಡೆಯುತ್ತಿದೆ.
ಸುಮಾರು ಎರಡು ವರ್ಷಗಳಿಂದ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಅನಕಪಲ್ಲಿಯ ಜಂಕ್ಷನ್ನಲ್ಲಿ ಬ್ರಿಡ್ಜ್ ನಿರ್ಮಾಣ ಮಾಡಲಾಗುತ್ತಿತ್ತು. ಈಗ ಆ ಬ್ರಿಡ್ಜ್ ಕುಸಿದುಬಿದ್ದಿದೆ.
ಇದನ್ನೂ ಓದಿ: JEE Mains ಪರೀಕ್ಷೆಗೆ ಸಿದ್ಧರಾಗಿ..ದಿನಾಂಕ ಪ್ರಕಟಗೊಂಡಿದೆ ನೋಡಿ..
ಈಗ ಬ್ರಿಡ್ಜ್ನ ಗುಣಮಟ್ಟದ ಬಗ್ಗೆ ಆತಂಕ ಮೂಡಿದೆ. ದುರಂತ ನಡೆದ ವೇಳೆ ಸ್ಥಳದಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ಪೊಲೀಸರ ತನಿಖೆಯ ನಂತರ ಕಾರಣ ಗೊತ್ತಾಗಲಿದೆ.