ಚಂಡೀಗಢ(ಹರಿಯಾಣ): 60 ವರ್ಷದ ಮಹಿಳಾ ಬ್ರಿಟಿಷ್ ರಾಜತಾಂತ್ರಿಕ(British Diplomat)ರಿಗೆ ಚಂಡೀಗಢದಲ್ಲಿ ಬೈಕ್ ಸವಾರನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.
60 ವರ್ಷದ ಬ್ರಿಟಿಷ್ ಡಿಪ್ಲೊಮ್ಯಾಟ್ ಚಂಡೀಗಢದ ಸೆಕ್ಟರ್ -10ರಲ್ಲಿ ಕಿರುಕುಳಕ್ಕೊಳಗಾಗಿದ್ದು, ಟೆನಿಸ್ ಆಡಲು ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬೆಳಗಿನ ಜಾವ 6 ಗಂಟೆಗೆ ಈ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಿಸಿದಂತೆ ಚಂಡೀಗಢದಲ್ಲಿರುವ ಬ್ರಿಟಿಷ್ ಡೆಪ್ಯುಟಿ ಹೈಕಮಿಷನ್ಗೆ ಮೊದಲು ಮಾಹಿತಿ ನೀಡಿದ್ದಾರೆ.
ದೂರಿನ ಪ್ರಕಾರ, ಸೆಕ್ಟರ್-10ರ ಡಿಎವಿ ಕಾಲೇಜ್ ಬಳಿ ಇರುವ ಲಾನ್ ಟೆನಿಸ್ ಅಸೋಸಿಯೇಷನ್ ಕಡೆಗೆ ತೆರಳುತ್ತಿದ್ದಾಗ ಬೈಕ್ನಲ್ಲಿ ಬಂದ ಸವಾರನೊಬ್ಬ ಕಿರುಕುಳ ನೀಡಿದ್ದು, ಬೆನ್ನಿಗೆ ಹೊಡೆದಿದ್ದಾನೆಂದು ತಿಳಿಸಿದ್ದಾರೆ. ಈ ವೇಳೆ ಕೂಗಿಕೊಳ್ಳಲು ಆರಂಭಿಸಿದ್ದರಿಂದ ಸ್ಥಳದಿಂದ ಆತ ಪರಾರಿಯಾಗಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354-A ಅಡಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿರಿ: ಮಂಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಂಗನಾ ಸ್ಪರ್ಧೆ ವದಂತಿ.. ಪೊಲೀಸ್ ಠಾಣೆ ಮೆಟ್ಟಿಲೇರಿದ ಕಮಲ
ಘಟನೆಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಯಾರನ್ನೂ ಬಂಧನ ಮಾಡಿಲ್ಲ. ಆರೋಪಿಗಳ ಪತ್ತೆಗಾಗಿ ಪೊಲೀಸರು ಪ್ರದೇಶದಲ್ಲಿ ಅಳವಡಿಕೆ ಮಾಡಿರುವ CCTV ದೃಶ್ಯಾವಳಿ ಪರಿಶೀಲನೆ ಮಾಡ್ತಿದ್ದಾರೆ.