ETV Bharat / bharat

ಸಹೋದರಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿ ಕೊಲೆ ಮಾಡಿದ ಅಣ್ಣ.. ನಡುರಸ್ತೆಯಲ್ಲೇ ಹರಿದ ನೆತ್ತರು! - ಅಕ್ರಮ ಸಂಬಂಧವಿಟ್ಟುಕೊಂಡಿದ್ದಕ್ಕಾಗಿ ಕೊಲೆ

ಅಕ್ರಮ ಸಂಬಂಧವಿಟ್ಟುಕೊಂಡಿದ್ದ ವಿವಾಹಿತ ವ್ಯಕ್ತಿಯೊಬ್ಬನನ್ನು ಯುವತಿಯ ಸಹೋದರ ನಡುರಸ್ತೆಯಲ್ಲೇ ಕೊಚ್ಚಿ ಕೊಲೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದ್ದು, ವಿಡಿಯೋ ವೈರಲ್​​ ಆಗಿದೆ.

murder in delhi
murder in delhi
author img

By

Published : Dec 30, 2021, 5:05 PM IST

ನವದೆಹಲಿ: ಯುವತಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ವಿಷಯ ಆಕೆಯ ಸಹೋದರನಿಗೆ ಗೊತ್ತಾಗುತ್ತಿದ್ದಂತೆ ನಡುರಸ್ತೆಯಲ್ಲೇ ವಿವಾಹಿತ ವ್ಯಕ್ತಿಯನ್ನ ಭೀಕರವಾಗಿ ಕೊಲೆ ಮಾಡಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ದೆಹಲಿಯ ಸೀಮಾಪುರಿ ಪ್ರದೇಶದಲ್ಲಿ ನಡೆದಿರುವ ಈ ಘಟನೆ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​​​​ ಆಗಿವೆ. ಘಟನೆಯಲ್ಲಿ ಶಾರುಖ್​ ಎಂಬ ವ್ಯಕ್ತಿ ಕೊಲೆಗೀಡಾಗಿದ್ದಾನೆ.

ಸಹೋದರಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯ ಕೊಲೆಗೈದ ಅಣ್ಣ

ಏನಿದು ಪ್ರಕರಣ?

ಶಾರುಖ್​ ಎಂಬ ವಿವಾಹಿತನಿಗೆ ಯುವತಿ ಜೊತೆ ಅಕ್ರಮ ಸಂಬಂಧವಿತ್ತು. ಈ ವಿಷಯ ಆಕೆಯ ಸಹೋದರನಿಗೆ ಗೊತ್ತಾಗುತ್ತಿದ್ದಂತೆ ತನ್ನ ಸ್ನೇಹಿತರೊಂದಿಗೆ ಸೇರಿ ನಡುರಸ್ತೆಯಲ್ಲೇ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಘಟನೆ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದಂತೆ ಸ್ಥಳಕ್ಕಾಗಮಿಸಿರುವ ಪೊಲೀಸರು ಹಲ್ಲೆಗೊಳಗಾಗಿದ್ದ ವ್ಯಕ್ತಿಯನ್ನ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆತ ಸಾವನ್ನಪ್ಪಿದ್ದಾನೆ.

ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳಾದ ಜುಬೇರ್​, ಆದಿತ್ಯ ಮತ್ತು ಜಾಫರ್​​ನನ್ನು ವಶಕ್ಕೆ ಪಡೆದುಕೊಂಡಿದ್ದು, ಮತ್ತೋರ್ವನಿಗಾಗಿ ಪೊಲೀಸರು ಶೋಧಕಾರ್ಯ ಮುಂದುವರೆಸಿದ್ದಾರೆ.

ಇದನ್ನೂ ಓದಿರಿ: ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಕಾರು, ನಾಲ್ವರ ದುರ್ಮರಣ: ಇಬ್ಬರ ಸ್ಥಿತಿ ಗಂಭೀರ

ಶಾರುಖ್ ವೃತ್ತಿಯಲ್ಲಿ ಕ್ರಿಮಿನಲ್​ ಎಂದು ತಿಳಿದು ಬಂದಿದ್ದು, ಕಳೆದ ಕೆಲ ದಿನಗಳ ಹಿಂದೆ ಜೈಲಿನಿಂದ ರಿಲೀಸ್​​ ಆಗಿದ್ದನು ಎಂಬ ಮಾಹಿತಿ ತಿಳಿದು ಬಂದಿದೆ. ಶಾರುಖ್​ ಮದುವೆ ಮಾಡಿಕೊಂಡಿದ್ದರೂ ಯುವತಿ ಜೊತೆ ಅಕ್ರಮ ಸಂಬಂಧವಿಟ್ಟುಕೊಂಡಿದ್ದು, ಕೃತ್ಯಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.